ಗುಜರಾತ್ ಚುನಾವಣೆ: ಸೂರತ್‌ನಲ್ಲಿ 75 ಲಕ್ಷ ರೂ ನಗದು ವಶ, ಇಬ್ಬರ ಬಂಧನ

ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿತ್ಯ ವಾಹನ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ ನಗದು ತುಂಬಿದ್ದ ಕಾರು ಸಿಕ್ಕಿಬಿದ್ದಿದೆ. ಸೂರತ್‌ನಲ್ಲಿಂದು ಕಾರಿನಿಂದ 75 ಲಕ್ಷ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಗುಜರಾತ್‌ನಲ್ಲಿ ಒಟ್ಟು ಎರಡು ಹಂತಗಳಲ್ಲಿ 182 ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 5ರಂದು ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 14 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 15 ನಾಮಪತ್ರ ಪರಿಶೀಲನೆ, ನವೆಂಬರ್ 17 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 1ರಂದು ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಅದೇ ರೀತಿ ಗುಜರಾತ್‌ನ 93 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 10ರಂದು ಅಧಿಸೂಚನೆ ಹೊರಡಿಸಲಾಗಿದೆ.

ನವೆಂಬರ್ 17ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 18ರಂದು ನಾಮಪತ್ರ ಪರಿಶೀಲನೆ, ನವೆಂಬರ್ 21ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 5ರಂದು ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ. ಅಂತಿಮವಾಗಿ ಡಿಸೆಂಬರ್ 8ರಂದು 182 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

Gujarat Election: Rs 75 lakh cash seized in Surat, two arrested

ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಬಲ ಪಕ್ಷಗಳು ಪ್ರಚಾರ ಮತ್ತು ಭರವಸೆಗಳ ವಿಚಾರದಲ್ಲಿ ತೀವ್ರ ಪೈಪೋಟಿಗಿಳಿದಿವೆ. ಹಲವಾರು ಚುನಾವಣೋತ್ತರ ಭರವಸೆಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯುತ್ತಿದ್ದಾರೆ. ಈ ಬಾರು ಬಿಜೆಪಿಯ ಭದ್ರಕೋಟೆಯಾದ ಗುಜರಾತ್‌ನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆಗೆ ಎಎಪಿ ಕೂಡ ಅಖಾಡಕ್ಕೆ ಇಳಿಯಲಿದೆ. ಹೀಗಾಗಿ ಗುಜರಾತ್ ಚುನಾವಣೆಯತ್ತ ಎಲ್ಲರ ಚಿತ್ತ ನೆಟ್ಟಿದ್ದು ಈ ಬಾರಿ ಬಿಜೆಪಿಯ ಭದ್ರಕೋಟೆಯನ್ನು ಒಡೆಯಲು ಸಾಧ್ಯವೇ ಇಲ್ಲವೆ ಎಂಬ ಲೆಕ್ಕಾಚಾರಗಳು ಶುರುವಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+