ಗುಜರಾತ್ : 28 ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟಿಸಿದ ಬಿಜೆಪಿ

ಅಹಮದಾಬಾದ್, ನವೆಂಬರ್ 20: ಗುಜರಾತ್ ಚುನಾವಣಾ ಕಣದಲ್ಲಿ ವಿಡಿಯೋಗಳ ಭರಾಟೆ ನಡುವೆ ಅಭ್ಯರ್ಥಿಗಳ ಟಿಕೆಟ್ ಬಗ್ಗೆ ಈಗ ಚರ್ಚೆ ಜೋರಾಗಿದೆ. ಆಡಳಿತಾರೂಢ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಸೋಮವಾರದಂದು ಬಿಡುಗಡೆ ಮಾಡಿದೆ. 36 ಅಭ್ಯರ್ಥಿಗಳ ಹೆಸರಿರುವ ಪಟ್ಟಿಯನ್ನು ಶನಿವಾರದಂದು ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಡಿಸಿಎಂ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಪ್ರಮುಖರಿದ್ದ 70 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿತ್ತು. ಶನಿವಾರದಂದು 36 ಮಂದಿ ಅಭ್ಯರ್ಥಿಗಳಿರುವ ಎರಡನೇ ಪಟ್ಟಿ ಪ್ರಕಟವಾಗಿತ್ತು.

Gujarat Elections 2017: BJP releases third list of 28 candidates

ಸತತ 22 ವರ್ಷಗಳಿಂದ ಅಧಿಕಾರದಲ್ಲಿರುವ ಬಿ.ಜೆ.ಪಿ. ಈ ಬಾರಿ ಹಾಲಿ 121 ಶಾಸಕರಲ್ಲಿ 35 ಮಂದಿಗೆ ಟಿಕೆಟ್ ನಿರಾಕರಿಸಲಿದೆ. ಜೊತೆಗೆ 6 ಮಂದಿ ಸಚಿವರಿಗೂ ಸ್ಪರ್ಧೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂಬ ಸುದ್ದಿಯಿದೆ.

ಸತತ 22 ವರ್ಷಗಳಿಂದ ಅಧಿಕಾರದಲ್ಲಿರುವ ಬಿ.ಜೆ.ಪಿ. ಈ ಬಾರಿ ಹಾಲಿ 121 ಶಾಸಕರಲ್ಲಿ 35 ಮಂದಿಗೆ ಟಿಕೆಟ್ ನಿರಾಕರಿಸಲಿದೆ. ಜೊತೆಗೆ 6 ಮಂದಿ ಸಚಿವರಿಗೂ ಸ್ಪರ್ಧೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂಬ ಸುದ್ದಿಯಿದೆ.

ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ 93 ಕ್ಷೇತ್ರಗಳಿಗೆ ಡಿಸೆಂಬರ್ 14ರಂದು ನಡೆಯಲಿದೆ. 182 ವಿಧಾನಸಭಾ ಕ್ಷೇತ್ರಗಳ ಗುಜರಾತ್ ವಿಧಾಸಭೆಗೆ ಡಿಸೆಂಬರ್ 18ರಂದು ಮತಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+