ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಗುಜರಾತ್ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಮಾಜಿ ಸಿಎಂ ವಿಜಯ್ ರೂಪಾನಿ

|
Google Oneindia Kannada News

ಗಾಂಧಿನಗರ, ನವೆಂಬರ್ 9: ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

"ನಾನು 5 ವರ್ಷ ಎಲ್ಲರ ಸಹಕಾರದಿಂದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ, ಈ ಚುನಾವಣೆಯಲ್ಲಿ ಹೊಸ ಕಾರ್ಯಕರ್ತರಿಗೆ ಜವಾಬ್ದಾರಿ ನೀಡಬೇಕು, ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನಾನು ವರಿಷ್ಠರಿಗೆ ಪತ್ರ ಕಳುಹಿಸಿದ್ದೇನೆ. ಅದನ್ನು ದೆಹಲಿಗೆ ತಲುಪಿಸಿದ್ದೇನೆ, ನಾವು ಅದನ್ನು ಮಾಡಲು ಶ್ರಮಿಸುತ್ತೇವೆ. ಆಯ್ಕೆಯಾದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ," ಎಂದು ರೂಪಾನಿ ಹೇಳಿದರು.

ಮದುವೆ ಋತುವಿನಲ್ಲಿ ಗುಜರಾತ್ ಚುನಾವಣೆ: ಮಂಟಪಗಳಲ್ಲಿ ಚುನಾವಣಾ ಪ್ರಚಾರ ಮಾಡುವರೇ ನಾಯಕರು?ಮದುವೆ ಋತುವಿನಲ್ಲಿ ಗುಜರಾತ್ ಚುನಾವಣೆ: ಮಂಟಪಗಳಲ್ಲಿ ಚುನಾವಣಾ ಪ್ರಚಾರ ಮಾಡುವರೇ ನಾಯಕರು?

ವಿಜಯ್ ರೂಪಾನಿಯಷ್ಟೇ ಅಲ್ಲದೆ, ಗುಜರಾತ್‌ನ ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. ಇದರ ಜೊತೆಗೆ ಬಿಜೆಪಿಯ ಹಿರಿಯ ನಾಯಕ ಬಿಜೆಪಿ ಶಾಸಕ ಭೂಪೇಂದ್ರ ಸಿಂಹ ಚುಡಾಸಮಾ ಕೂಡ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. "ಇತರ ಕಾರ್ಯಕರ್ತರಿಗೆ ಅವಕಾಶ ಸಿಗಬೇಕೆಂದು ನಾನು ನಿರ್ಧರಿಸಿದ್ದೇನೆ. ನಾನು ಇಲ್ಲಿಯವರೆಗೆ ಒಂಬತ್ತು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ನಾನು ಪಕ್ಷಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ," ಎಂದು ಚುಡಾಸಮಾ ಹೇಳಿದರು.

Gujarat Elections 2022: Former CM Vijay Rupani to not contest upcoming Assembly elections

ಬಿಜೆಪಿ ಶಾಸಕರನ್ನೆಲ್ಲ ಅಖಾಡಕ್ಕಿಳಿಸುವುದು ಅನುಮಾನ:

ಐದು ವರ್ಷಗಳ ಹಿಂದೆ ನಡೆದ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದಿತ್ತು, ಅದರ ಪ್ರಮುಖ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ 77 ಸ್ಥಾನಗಳನ್ನು ಗಳಿಸಿತ್ತು. ಹೀಗಾಗಿ ಪ್ರಸ್ತುತ 182 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಯ ಬಲವು 111 ಆಗಿದ್ದು, ಕಾಂಗ್ರೆಸ್‌ನಿಂದ ಹಲವಾರು ಶಾಸಕರು ಪಕ್ಷಾಂತರಗೊಂಡಿದ್ದಾರೆ. ಹೀಗಾಗಿ ಕೇಸರಿ ಪಕ್ಷವು ಎಲ್ಲಾ ಹಾಲಿ ಶಾಸಕರನ್ನು ಮತ್ತೊಮ್ಮೆ ಅಖಾಡಕ್ಕೆ ಇಳಿಸುವುದು ಅನುಮಾನವಾಗಿದೆ.

ಗುಜರಾತ್ ವಿಧಾನಸಭಾ ಚುನಾವಣೆ ಮಾಹಿತಿ:

ಗುಜರಾತ್‌ನಲ್ಲಿ ಒಟ್ಟು ಎರಡು ಹಂತಗಳಲ್ಲಿ 182 ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 5ರಂದು ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 14 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 15 ನಾಮಪತ್ರ ಪರಿಶೀಲನೆ, ನವೆಂಬರ್ 17 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 1ರಂದು ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.

ಅದೇ ರೀತಿ ಗುಜರಾತ್‌ನ 93 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 10ರಂದು ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 17ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 18ರಂದು ನಾಮಪತ್ರ ಪರಿಶೀಲನೆ, ನವೆಂಬರ್ 21ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 5ರಂದು ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ. ಅಂತಿಮವಾಗಿ ಡಿಸೆಂಬರ್ 8ರಂದು 182 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

English summary
Gujarat Elections 2022: Former CM Vijay Rupani to not contest upcoming Assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X