ಗುಜರಾತ್ ಕಾಂಗ್ರೆಸ್ ನಿಂದ 13 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ಅಹಮದಾಬಾದ್, ನವೆಂಬರ್ 21: ಗುಜರಾತ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ತಡ ರಾತ್ರಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ 13 ಜನ ಸ್ಥಾನ ಪಡೆದಿದ್ದಾರೆ. ಇವರಲ್ಲಿ 9 ಜನ ಹೊಸ ಅಭ್ಯರ್ಥಿಗಳಾಗಿದ್ದು ಭಾನುವಾರ ಬಿಡುಗಡೆಯಾದ 77 ಜನರ ಪಟ್ಟಿಯಲ್ಲಿ ನಾಲ್ಕು ಜನರ ಹೆಸರುಗಳನ್ನು ಬದಲಾವಣೆ ಮಾಡಲಾಗಿದೆ.

ಒಟ್ಟಾರೆ ಕಾಂಗ್ರೆಸ್ 86 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದಂತಾಗಿದೆ. ಮೊದಲ ಹಂತದಲ್ಲಿ ಒಟ್ಟು 89 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಉಳಿದ ಮೂರು ಕ್ಷೇತ್ರಗಳಿಗೆ ಇಂದು ಸಂಜೆ ಮೊದಲು ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಬಿ - ಫಾರಂ ನೀಡಬೇಕಾಗಿದೆ.
This is our 2nd Candidate list for #GujaratElection2017.
— Bharat Solanki (@BharatSolankee) November 20, 2017
Congratulations & Best wishes to all Candidates! pic.twitter.com/fDPN778QjY
ಮೊದಲ ಹಂತದಲ್ಲಿ 89 ಕ್ಷೇತ್ರಗಳಿಗೆ ಡಿಸೆಂಬರ್ 9ರಂದು ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಡಿಸೆಂಬರ್ 14ರಂದು 93 ಸ್ಥಾನಗಳಿಗೆ ಮತದಾನ ನಡೆಯಲಿದೆ. ಡಿಸೆಂಬರ್ 18ರಂದು ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯ ಫಲಿತಾಂಶ ಒಟ್ಟಾಗಿ ಪ್ರಕಟವಾಗಲಿದೆ.












Click it and Unblock the Notifications