ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಚುನಾವಣೆ: ಮೊದಲ ಹಂತದ ಚುನಾವಣಾ ಪ್ರಚಾರಕ್ಕೆ ಇಂದು ಕೊನೆ ದಿನ

|
Google Oneindia Kannada News

ಅಹಮದಾಬಾದ್ ನವೆಂಬರ್ 29: ಗುಜರಾತ್‌ನ 89 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯ ಪ್ರಚಾರ ಇಂದು(ನವೆಂಬರ್ 29) ಕೊನೆಗೊಳ್ಳಲಿದೆ. ಮೊದಲ ಹಂತದ ಮತದಾನ ಡಿಸೆಂಬರ್ 1 ರಂದು ನಡೆಯಲಿದೆ. ಉಳಿದ 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ.

ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಭಾವನಗರ ಮತ್ತು ಗಾಂಧಿಧಾಮ್ (ಕಛ್ ಜಿಲ್ಲೆ) ನಲ್ಲಿ ಮೊದಲ ಹಂತದಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪರ ಇಂದು ಪ್ರಚಾರ ನಡೆಸಲಿದ್ದಾರೆ. ಡಿಸೆಂಬರ್ 5 ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪರ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ನಡೆಸಲಿದ್ದಾರೆ.

ಮೊದಲ ಹಂತದಲ್ಲಿ ಕೆಲವು ಪ್ರಮುಖ ಅಭ್ಯರ್ಥಿಗಳೆಂದರೆ- ಇಸುದನ್ ಗಧ್ವಿ, ಪರ್ಷೋತ್ತಮ್ ಸೋಲಂಕಿ, ಕುನ್ವರ್ಜಿ ಬವಲಿಯಾ, ಕಾಂತಿಲಾಲ್ ಅಮೃತಿಯಾ, ರಿವಾಬಾ ಜಡೇಜಾ ಮತ್ತು ಗೋಪಾಲ್ ಇಟಾಲಿಯಾ.

Gujarat Elections: Today is the last day for the first phase of election campaign

ಇಸುದನ್ ಗಧ್ವಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿದ್ದಾರೆ. ಇವರು ದೇವಭೂಮಿ ದ್ವಾರಕಾ ಜಿಲ್ಲೆಯ ಖಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಗುಜರಾತ್‌ನ ಮಾಜಿ ಸಚಿವ ಪರಶೋತ್ತಮ್ ಸೋಲಂಕಿ, ಆರು ಬಾರಿ ಶಾಸಕರಾಗಿರುವ ಕುನ್ವರ್ಜಿ ಬವಲಿಯಾ, ಮೊರ್ಬಿ 'ಹೀರೋ' ಕಾಂತಿಲಾಲ್ ಅಮೃತೀಯ, ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಮತ್ತು ಗುಜರಾತ್ ಎಎಪಿ ಅಧ್ಯಕ್ಷ ಗೋಪಾಲ್ ಇಟಾಲಿಯಾ ಕೂಡ ರಾಜ್ಯ ವಿಧಾನಸಭಾ ಚುನಾವಣೆಯ ಮೊದಲ ಹಂತದ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ.

Gujarat Elections: Today is the last day for the first phase of election campaign

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಮೊದಲ ಹಂತದಲ್ಲಿ ಸ್ಪರ್ಧಿಸುವ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಈಗಾಗಲೇ ರ್‍ಯಾಲಿಗಳನ್ನು ನಡೆಸಿದ್ದಾರೆ.

ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ವ್ಯಾಪಕವಾಗಿ ಪ್ರಚಾರ ಮಾಡಿದ್ದಾರೆ. ಮಾತ್ರವಲ್ಲದೆ ಕಳೆದ 27 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಯು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗುಜರಾತ್ ಜನರಿಗೆ ಹಲವಾರು ಭರವಸೆಗಳನ್ನು ನೀಡಿದ್ದಾರೆ.

ಕಾಂಗ್ರೆಸ್ ಕಡೆಯಿಂದ, ಅದರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ.

English summary
Campaigning for the first phase of elections in 89 constituencies of Gujarat will end today (November 29).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X