ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್‌ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ 2022, ಇಲ್ಲಿವೆ ಅಂಕಿಅಂಶಗಳು

|
Google Oneindia Kannada News

ನವದೆಹಲಿ, ಡಿಸೆಂಬರ್‌ 5: ಗುಜರಾತ್‌ ವಿಧಾನಸಭಾ ಚುನಾವಣೆ 2022 ರ ಎರಡನೇ ಹಂತದ ಚುನಾವಣೆ ಮುಗಿದಿದೆ. ಇದರೊಂದಿಗೆ ಎಲ್ಲ ಹಂತದ ಚುನಾವಣೆ ಮುಗಿದಂತಾಗಿದೆ. ಗುಜರಾತ್‌ಗೆ ಮೊದಲ ಹಂತದ ಚುನಾವಣೆಯು ಡಿಸೆಂಬರ್‌ 1 ರಂದು ನಡೆದಿತ್ತು.

ಗುಜರಾತ್‌ನಲ್ಲಿ ಆಡಳಿತರೂಢ ಬಿಜೆಪಿ ಈ ಬಾರಿ ಗೆಲುವಿನ ಭಾವುಟ ಹಾರಿಸಲು ನೋಡುತ್ತಿದ್ದು, ಕಾಂಗ್ರೆಸ್‌ ಹಾಗೂ ಎಎಪಿ ಕೂಡ ಪ್ರಮುಖ ಸ್ಪರ್ಧೆ ಒಡ್ಡಿವೆ. ಈಗ ಎರಡನೇ ಹಂತದ ಚುನಾವಣೆ ನಡೆದಿದೆ. ಮೊದಲ ಹಂತದಲ್ಲಿ ಡಿಸೆಂಬರ್‌ 1ರಂದು 83 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆದಿತ್ತು. ಗುಜರಾತ್‌ನಲ್ಲಿ ಎರಡನೇ ಮತ್ತು ಅಂತಿಮ ಹಂತದ ಮತದಾನ ಇಂದು ಮುಕ್ತಾಯಗೊಂಡಿದೆ.

Gujarat Assembly Elections 2022: ಇಂದು ಸಂಜೆ 6.30ಕ್ಕೆ ಚುನಾವಣೋತ್ತರ ಸಮೀಕ್ಷೆ- ಪ್ರಮುಖ ಅಂಶಗಳುGujarat Assembly Elections 2022: ಇಂದು ಸಂಜೆ 6.30ಕ್ಕೆ ಚುನಾವಣೋತ್ತರ ಸಮೀಕ್ಷೆ- ಪ್ರಮುಖ ಅಂಶಗಳು

ಇದರೊಂದಿಗೆ ಹಿಮಾಚಲ ಪ್ರದೇಶ ಮತ್ತು ಗುಜರಾತ್ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯೂ ಮುಕ್ತಾಯಗೊಂಡಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶದ ಭವಿಷ್ಯ ನುಡಿಯುವ ಎಕ್ಸಿಟ್ ಪೋಲ್‌ಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಈ ಬಾರಿ ಆಮ್ ಆದ್ಮಿ ಪಕ್ಷದ ಪ್ರವೇಶದೊಂದಿಗೆ ಚುನಾವಣಾ ಕದನ ಇನ್ನಷ್ಟು ತೀವ್ರಗೊಂಡಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಪಂಜಾಬ್ ರಾಜ್ಯ ಚುನಾವಣೆಯಲ್ಲಿ ತನ್ನ ಯಶಸ್ಸಿನಿಂದ ಉತ್ತೇಜನಗೊಂಡ ಗುಜರಾತ್‌ನತ್ತ ತನ್ನ ಗಮನವನ್ನು ಹರಿಸಿದೆ. ಎಎಪಿ ಗುಜರಾತ್‌ನ ಎಲ್ಲಾ 182 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.

Gujarat Exit Polls Results 2022 Released: here is the list of winners

ಡಿಸೆಂಬರ್ 1 ರಂದು ನಡೆದ ಮೊದಲ ಹಂತದ ಮತದಾನದಲ್ಲಿ ಗುಜರಾತ್ ನಲ್ಲಿ ಒಟ್ಟಾರೆ ಶೇ.63.14ರಷ್ಟು ಮತದಾನವಾಗಿತ್ತು. ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ಪ್ರದೇಶಗಳ 19 ಜಿಲ್ಲೆಗಳಲ್ಲಿ ಹರಡಿರುವ 89 ಕ್ಷೇತ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತದಾನ ನಡೆದಿತ್ತು. ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಲ್ಲಿ 89 ಸ್ಥಾನಗಳಿಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟಾರೆ ಶೇ.63.31ರಷ್ಟು ಮತದಾನವಾಗಿತ್ತು.

2017ರಲ್ಲಿ ನಡೆದ ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಪಡೆದ್ದಿತ್ತು. ಅದರ ಪ್ರಮುಖ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ 77 ಸ್ಥಾನಗಳನ್ನು ಪಡೆದುಕೊಂಡಿತ್ತು. ಪ್ರಸ್ತುತ 182 ಸದಸ್ಯ ಬಲದ ಗುಜರಾತ್‌ ವಿಧಾನಸಭೆಯಲ್ಲಿ ಬಿಜೆಪಿಯ ಬಲವು 111 ಆಗಿದೆ. ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್‌ನ ಹಲವಾರು ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

Gujarat Exit Polls Results 2022 Released: here is the list of winners

ಇನ್ನೂ ಟಿವಿ 9 ಗುಜರಾತಿ ಪ್ರಕಾರ ಬಿಜೆಪಿಗೆ ಒಟ್ಟಾರೆ 182 ವಿಧಾನಸಭಾ ಸ್ಥಾನಗಳಲ್ಲಿ 125ರಿಂದ 130 ಸ್ಥಾನಗಳಲ್ಲಿ ಗೆಲುವು ಸಿಗಲಿದೆ ಎಂದು ತಿಳಿಸಿದೆ. ಕಾಂಗ್ರೆಸ್‌ 40ರಿಂದ 50 ಸ್ಥಾನಗಳಲ್ಲಿ ಗೆಲುವು ಕಾಣಲಿದೆ ಎಂದು ತಿಳಿಸಿದರೆ ಆಮ್ ಆದ್ಮಿ ಪಕ್ಷ 3ರಿಂದ 5 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ. ರಿಪಬ್ಲಿಕ್‌ ಟಿವಿ ಸಮೀಕ್ಷೆಯಲ್ಲಿ ಬಿಜೆಪಿಗೆ 128 ಸ್ಥಾನಗಳಲ್ಲಿ ಗೆಲುವು ತೋರಿಸಿದರೆ ಕಾಂಗ್ರೆಸ್‌ 30ರಿಂದ 42 ಸ್ಥಾನಗಳಲ್ಲಿ ಗೆಲುವು ಸಿಗಲಿದೆ ಎಂದು ತಿಳಿಸಿದೆ. ಇನ್ನೂ ಆಮ್‌ ಆದ್ಮಿ ಪಾರ್ಟಿ 2ರಿಂದ 10 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತಿಳಿಸಿದೆ.

English summary
Gujarat Assembly Election Exit Poll Results 2022 Released : All top media organizations have released their exit poll results for Gujarat; Know who will win.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X