ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್‌ ಸರ್ಕಾರ: ಇಂದು ಬಿಜೆಪಿ ಶಾಸಕರ ಸಭೆ- ಡಿ.12 ರಂದು ಪ್ರಮಾಣವಚನ

|
Google Oneindia Kannada News

ಅಹಮದಾಬಾದ್ ಡಿಸೆಂಬರ್ 10: ಗುಜರಾತ್‌ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯ ಪ್ರಚಂಡ ವಿಜಯ ಸಾಧಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಡಿಸೆಂಬರ್ 12 ರಂದು ಗುಜರಾತ್‌ನಲ್ಲಿ ಸತತ ಏಳನೇ ಬಾರಿಗೆ ಸರ್ಕಾರ ರಚಿಸಲಿದೆ. ಪಕ್ಷದ ನಾಯಕ ಭೂಪೇಂದ್ರ ಪಟೇಲ್ ಅವರು 20 ಕ್ಯಾಬಿನೆಟ್ ಸಚಿವರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಇಂದು ಬೆಳಿಗ್ಗೆ 10:30 ಕ್ಕೆ ಗಾಂಧಿನಗರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ "ಕಮಲಮ್" ನಲ್ಲಿ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಿದೆ. ನಂತರ ನಾಯಕರು ಮಧ್ಯಾಹ್ನ 2 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಹೊಸ ಸರ್ಕಾರ ರಚನೆಗೆ ಮುನ್ನ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ದಾಖಲಿಸಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶುಕ್ರವಾರ ಔಪಚಾರಿಕವಾಗಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಸೋಮವಾರ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ

ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ

ಸಿಎಂ ಪಟೇಲ್, ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್, ಗೃಹ ಖಾತೆ ರಾಜ್ಯ ಸಚಿವ ಹರ್ಷ ಶಾಂಘ್ವಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹೃಷಿಕೇಶ್ ಪಟೇಲ್, ಗುಜರಾತ್ ಮುಖ್ಯ ಸಚೇತಕ ಪಂಕಜ್ ದೇಸಾಯಿ ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ರಾಜಭವನಕ್ಕೆ ಆಗಮಿಸಿ ಸರ್ಕಾರಕ್ಕೆ ರಾಜೀನಾಮೆ ಸಲ್ಲಿಸಿದರು. ಇದು ರಾಜ್ಯಪಾಲರಿಂದ ಅಂಗೀಕರಿಸಲ್ಪಟ್ಟಿದೆ. ಸೋಮವಾರ ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಾಟೀಲ್ ಘೋಷಿಸಿದ್ದರು. ಈ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನದ ವೇಳೆಗೆ ನೂತನ ನಾಯಕರ ಆಯ್ಕೆ

ಮಧ್ಯಾಹ್ನದ ವೇಳೆಗೆ ನೂತನ ನಾಯಕರ ಆಯ್ಕೆ

"ರಾಜ್ಯಪಾಲರು ಮುಖ್ಯಮಂತ್ರಿ ಮತ್ತು ಅವರ ಸಂಪುಟದ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೂ ಪಟೇಲ್ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ" ಎಂದು ಕಾನು ಭಾಯಿ ದೇಸಾಯಿ ರಾಜಭವನದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು. ''ಗಾಂಧಿನಗರದಲ್ಲಿರುವ ಪಕ್ಷದ ಕೇಂದ್ರ ಕಚೇರಿ ಕಮಲಂನಲ್ಲಿ ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕರ ಸಭೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ನೂತನ ನಾಯಕರ ಆಯ್ಕೆ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಲಾಗುವುದು, ಅದಕ್ಕಾಗಿ ಅವರಿಂದ ಸಮಯಾವಕಾಶ ಕೋರಿದ್ದೇವೆ. ಪ್ರಮಾಣ ವಚನ ಸ್ವೀಕಾರ ಹೊಸ ಮುಖ್ಯಮಂತ್ರಿ ಮತ್ತು ಅವರ ಸಂಪುಟ ರಾಜ್ಯಪಾಲರ ಸೂಚನೆಯಂತೆ ನಡೆಯುತ್ತದೆ' ಎಂದು ದೇಸಾಯಿ ಹೇಳಿದರು.

20 ಕ್ಯಾಬಿನೆಟ್ ಸಚಿವರು ಪ್ರಮಾಣ ವಚನ

20 ಕ್ಯಾಬಿನೆಟ್ ಸಚಿವರು ಪ್ರಮಾಣ ವಚನ

ಡಿಸೆಂಬರ್ 12 ರಂದು ಭೂಪೇಂದ್ರ ಪಟೇಲ್ ಅವರು ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನೇತೃತ್ವದ ರಾಜ್ಯಗಳ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಅದೇ ದಿನ ಅಂದರೆ ಸೋಮವಾರ ಭೂಪೇಂದ್ರ ಪಟೇಲ್ ಅವರೊಂದಿಗೆ ಸುಮಾರು 20 ಕ್ಯಾಬಿನೆಟ್ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಮರುದಿನವೇ ತಮ್ಮ ಕಚೇರಿಗಳಿಗೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸತತ 7ನೇ ಬಾರಿ ಬಿಜೆಪಿ ಗೆಲುವು

ಸತತ 7ನೇ ಬಾರಿ ಬಿಜೆಪಿ ಗೆಲುವು

1960 ರಲ್ಲಿ ರಾಜ್ಯ ರಚನೆಯಾದ ನಂತರ ಯಾವುದೇ ಪಕ್ಷ ಗಳಿಸಿದ ಅತಿ ಹೆಚ್ಚು ಸ್ಥಾನಗಳಲ್ಲಿ (182 ಸ್ಥಾನಗಳ ಪೈಕಿ 156) ಬಹುಮತದೊಂದಿಗೆ ಬಿಜೆಪಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿತು. ಕಾಂಗ್ರೆಸ್ 17 ಸ್ಥಾನಗಳನ್ನು ಪಡೆದುಕೊಂಡಿದ್ದು, ಆಮ್ ಆದ್ಮಿ ಪಕ್ಷ 5, ಎಸ್‌ಪಿ 1 ಮತ್ತು 3 ಸ್ವತಂತ್ರ ಅಭ್ಯರ್ಥಿಗಳು ಗೆದ್ದಿದ್ದಾರೆ. ಗುಜರಾತ್‌ನಲ್ಲಿ ಬಿಜೆಪಿಯ ಸತತ ಏಳನೇ ವಿಧಾನಸಭಾ ಚುನಾವಣೆ ಗೆಲುವು ಸಾಧಿಸಿರುವುದು 1960 ರಲ್ಲಿ ರಾಜ್ಯ ರಚನೆಯಾದ ನಂತರದ ಇದು ಅತಿದೊಡ್ಡ ವಿಜಯವಾಗಿದೆ. ಮಾತ್ರವಲ್ಲದೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಲ್ಲಿ ಸುಮಾರು 1,92,000 ಮತಗಳ ದಾಖಲೆಯ ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

English summary
BJP will hold its legislative party meeting today at 10:30 am at state BJP office "Kamalam" in Gandhinagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X