ಈ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

ಅಹಮದಾಬಾದ್, ಅಕ್ಟೋಬರ್ 10: ಗುಜರಾತ್ ಜನತೆಗೆ ದೀಪಾವಳಿಗೂ ಮೊದಲೇ ಅಲ್ಲಿನ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ವ್ಯಾಟ್ ತೆಗೆದು ಹಾಕಿದ್ದು, ತೈಲ ಬೆಲೆ ಅಗ್ಗವಾಗಿದೆ.

ರಾಜ್ಯದ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೆಟ್ರೋಲ್ ಹಾಗೂ ಡಿಸೇಲ್ ವ್ಯಾಟ್ ಕಡಿಮೆ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ಇಂಧನದ ಮೇಲೆ ಶೇಕಡಾ 4ರಷ್ಟು ವ್ಯಾಟ್ ಕಡಿತಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

 Gujarat govt cuts VAT on petrol, diesel by 4%

ಈಗ ಗುಜರಾತ್ ನಲ್ಲಿ ಪೆಟ್ರೋಲ್ ಬೆಲೆಯಲ್ಲಿ 2 ರೂಪಾಯಿ 93 ಪೈಸೆ ಹಾಗೂ ಡಿಸೇಲ್ ನಲ್ಲಿ 2 ರೂಪಾಯಿ 75 ಪೈಸೆ ಕಡಿತವಾಗಿದೆ. ಅಕ್ಟೋಬರ್ 10ರ ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ.

ಈ ಹಿಂದೆ ಗುಜರಾತ್ ಸರ್ಕಾರ ಜಿಎಸ್ ಟಿ ದರವನ್ನು ಇಳಿಕೆ ಮಾಡಿದ್ದಕ್ಕೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಆರೋಪಿಸಲಾಗಿತ್ತು. ಶೇಕಡಾ 5ರಷ್ಟು ವ್ಯಾಟ್ ಕಡಿತಗೊಳಿಸುವಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಸಲಹೆ ನೀಡಲಾಗಿತ್ತು. ಆದರೆ, ಶೇ4ರಷ್ಟು ವ್ಯಾಟ್ ಇಳಿಕೆ ಮಾಡಲಾಗಿದೆ.(ಪಿಟಿಐ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+