ಬಿಲ್ಕಿಸ್ ಬಾನೊ ಕೇಸ್: ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ ಗುಜರಾತ್ ಸರ್ಕಾರ

ನವದೆಹಲಿ, ಅಕ್ಟೋಬರ್ 17: ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಅನುಮೋದನೆ ನೀಡಿತ್ತು ಎಂದು ಗುಜರಾತ್ ಸರ್ಕಾರವು ಉಲ್ಲೇಖಿಸಿದೆ.

2002ರ ಗುಜರಾತ್ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಜನರು 14 ವರ್ಷಗಳಿಂದ ಜೈಲಿನಲ್ಲಿದ್ದ ಕಾರಣ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅವರ ನಡವಳಿಕೆ ಉತ್ತಮವಾಗಿದೆ ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಕಳೆದ ಸ್ವಾತಂತ್ರ್ಯ ದಿನಾಚರಣೆಯಂದು ಉತ್ತಮ ನಡುವಳಿಕೆ ಆಧಾರದಲ್ಲಿ ಇದೇ ಪ್ರಕರಣದ 11 ಆರೋಪಿಗಳು ಬಿಡುಗಡೆಯಾಗಿದ್ದರು. ಇದನ್ನು ಪ್ರಶ್ನಿಸಿದ ಮೂರು ಮೇಲ್ಮನವಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಅರ್ಜಿಗಳನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ವರದಿ ಸಲ್ಲಿಸುವಂತೆ ಗುಜರಾತ್ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಗುಜರಾತ್ ಸರ್ಕಾರದಿಂದ ಅಫಿಡವಿಟ್ ಸಲ್ಲಿಕೆ

ಗುಜರಾತ್ ಸರ್ಕಾರದಿಂದ ಅಫಿಡವಿಟ್ ಸಲ್ಲಿಕೆ

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರವು ಅಫಿಡವಿಟ್ ಸಲ್ಲಿಸಿದೆ. ಈ ವರದಿಯಲ್ಲಿ 11.07.2022ರ ಪ್ರಕಾರ ಭಾರತದ ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ಅನುಮೋದನೆ ನೀಡಿದೆ ಎಂದು ಗುಜರಾತ್ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್ ನಲ್ಲಿ ಉಲ್ಲೇಖಿಸಿದೆ.

ಗರ್ಭಿಣಿ ಮೇಲೆ ಕ್ರೌರ್ಯ ತೋರಿದ್ದ ಕೀಚಕರು

ಗರ್ಭಿಣಿ ಮೇಲೆ ಕ್ರೌರ್ಯ ತೋರಿದ್ದ ಕೀಚಕರು

2002ರಲ್ಲಿ ಬಿಲ್ಕಿಸ್ ಬಾನೊ 20 ವರ್ಷದವರಿದ್ದು, ಅಂದು ಕೆಲವು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯ ಮೇಲೆ ಕ್ರೌರ್ಯ ತೋರಲಾಗಿತ್ತು. ಆಕೆಗೆ ಪರಿಚಯವಿದ್ದ ಕಾಮುಕರಿಂದಲೇ ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು. ಈ ಅಪರಾಧಿಗಳ ಪೈಕಿ ಒಬ್ಬ ಆಕೆಯ ಚಿಕ್ಕಪ್ಪನೇ ಆಗಿದ್ದು, ಉಳಿದವರು ಸಹೋದರರಾಗಿದ್ದರು. ಅವಳು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದು, ಬಹುತೇಕ ನಿರ್ಜೀವವಾಗಿ ಬಿಟ್ಟಿದ್ದರು. ಮಾರ್ಚ್ 3, 2002ರಂದು ಮೂರು ವರ್ಷದ ಮಗಳನ್ನು ಕೊಲೆ ಮಾಡಲಾಗಿತ್ತು.

ಲಿಮ್ಖೇಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಲಿಮ್ಖೇಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಅತ್ಯಾಚಾರದ ನಂತರದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಮಹಿಳೆಗೆ ಎಚ್ಚರಗೊಂಡ ನಂತರದಲ್ಲಿ ಬಿಲ್ಕಿಸ್ ಬುಡಕಟ್ಟು ಮಹಿಳೆಯಿಂದ ಬಟ್ಟೆ ಅನ್ನು ಪಡೆದುಕೊಂಡರು. ದಾಹೋದ್ ಜಿಲ್ಲೆಯ ಲಿಮ್ಖೇಡಾ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋಗಿದ್ದರು. ಆದರೆ ಅಂದು ಅಲ್ಲಿನ ಹೆಡ್ ಕಾನ್‌ಸ್ಟೆಬಲ್ ಸತ್ಯವನ್ನು ಮುಚ್ಚಿಟ್ಟು ದೂರಿನ್ನೇ ಮೊಟಕುಗೊಳಿಸಿದ್ದರು ಎಂದು ಉಲ್ಲೇಖಿಸಲಾಗಿದೆ. ನ್ಯಾಯಕ್ಕಾಗಿ ಪರಿತಪಿಸುತ್ತಿದ್ದ ಮಹಿಳೆಯ ಅಗ್ನಿ ಪರೀಕ್ಷೆಯಲ್ಲಿ ಅದು ಆರಂಭಿಕ ಅಧ್ಯಾಯವಾಗಿತ್ತು. ನಂತರದಲ್ಲಿ ಆಕೆಗೆ ಕೊಲೆ ಬೆದರಿಕೆಗಳು ಬಂದವು. 2004ರಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಗುಜರಾತ್‌ನಿಂದ ಮುಂಬೈಗೆ ಸ್ಥಳಾಂತರಿಸಿತು.

2008ರಲ್ಲಿ ತೀರ್ಪು ಪ್ರಕಟಿಸಿದ್ದ ಮುಂಬೈ ಸಿಬಿಐ ಕೋರ್ಟ್

2008ರಲ್ಲಿ ತೀರ್ಪು ಪ್ರಕಟಿಸಿದ್ದ ಮುಂಬೈ ಸಿಬಿಐ ಕೋರ್ಟ್

ಕಳೆದ 2008ರ ಜನವರಿ ತಿಂಗಳಿನಲ್ಲಿ ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ 20 ಆರೋಪಿಗಳಲ್ಲಿ 11 ಆರೋಪಿಗಳನ್ನು ದೋಷಿಗಳು ಎಂದು ತೀರ್ಪು ನೀಡಿತು. ಮಹಿಳೆಯ ಮೇಲೆ ಅತ್ಯಾಚಾರದ ಸಂಚು, ಕೊಲೆ, ಕಾನೂನುಬಾಹಿರ ಸಭೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಇತರ ಆರೋಪಗಳ ಮೇಲೆ ದೋಷಿ ಎಂದು ತೀರ್ಪು ನೀಡಿತ್ತು. ಈ ಅಪರಾಧಿಗಳನ್ನು ರಕ್ಷಿಸಲು "ತಪ್ಪಾದ ದಾಖಲೆಗಳನ್ನು" ಮಾಡಿದ್ದಕ್ಕಾಗಿ ಹೆಡ್ ಕಾನ್‌ಸ್ಟೆಬಲ್‌ಗೆ ಶಿಕ್ಷೆ ವಿಧಿಸಲಾಯಿತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 20 ಆರೋಪಿಗಳ ಪೈಕಿ ಏಳು ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ವಿಚಾರಣೆ ವೇಳೆ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದನು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+