Breaking: ಗುಜರಾತ್, ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ದಿನಾಂಕ ಇಂದು ಪ್ರಕಟ
ಗುಜರಾತ್ ಮತ್ತು ಹಿಮಾಚಲ ಚುನಾವಣೆ: ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಗುಜರಾತ್, ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. 2022 ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ 182 ಸ್ಥಾನಗಳಿಗೆ ಸ್ಪರ್ಧೆ ನಡೆಯಲಿದೆ. ಇನ್ನು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 68 ಕ್ಷೇತ್ರಗಳಿಗೆ ಸ್ಪರ್ಧೆ ನಡೆಯಲಿದೆ.
ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಅದಾಗಲೇ ಬಿಜೆಪಿ ಭದ್ರಕೋಟೆಯಾದ ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಲು ತೊಡೆ ತಟ್ಟಿ ನಿಂತಿದೆ. ಇದಕ್ಕೆ ಬೇಕಾದ ತಯಾರಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ (ಎಎಪಿ) ತನ್ನ ಸ್ಥಾನ ಭದ್ರಪಡಿಸಿಕೊಳ್ಳಲು ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ಮತದಾರರನ್ನು ಸೆಳೆಯುತ್ತಿದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಮುಂಬರುವ ಚುನಾವಣೆಯಲ್ಲಿ ಆಮ್ ಆದ್ಮಿ ಗೆಲುವು ಸಾಧಿಸಿದರೆ ಮೂಲ ಸೌಕರ್ಯಗಳನ್ನು ಈಡೇರಿಸುವುದಾಗಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯ ಘೋಷಣೆಯೊಂದಿಗೆ ಆಮ್ ಆದ್ಮಿ ಪಕ್ಷ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಯನ್ನು ಘೋಷಿಸಿದ ಪಕ್ಷವಾಗಿದೆ. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕ್ಲೀನ್ ಇಮೇಜ್ ಮತ್ತು ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಆಗಸ್ಟ್ 2ರಂದು ಆಮ್ ಆದ್ಮಿ ಪಕ್ಷ ತನ್ನ ಮೊದಲ ಪಟ್ಟಿಯಲ್ಲಿ ಒಟ್ಟು 10 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಎಂಬತ್ತು ಅಭ್ಯರ್ಥಿಗಳು ಎರಡನೇ ಪಟ್ಟಿ ಹಾಗೂ ಹತ್ತು ಅಭ್ಯರ್ಥಿಗಳ ಮೂರನೇ ಪಟ್ಟಿ ಕೂಡ ಬಿಡುಗಡೆ ಮಾಡಿದೆ. ಇದರೊಂದಿಗೆ ಬಿಜೆಪಿಯೊಂದಿಗೆ ತೀವ್ರ ಪೈಪೋಟಿ ನೀಡಲು ಸಜ್ಜಾಗಿದೆ.

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ತನ್ನ ಲೆಕ್ಕಾಚಾರಗಳನ್ನು ಬುಡಮೇಲು ಮಾಡಬಹುದಾದ ಯಾವುದೇ ಬಂಡಾಯವನ್ನು ಚಿವುಟಿ ಹಾಕಲು ಗುಜರಾತ್‌ನ ಭಾರತೀಯ ಜನತಾ ಪಕ್ಷವು ಒಂದು ವಿನೂತನ ಮಾರ್ಗವನ್ನು ಕಂಡುಹಿಡಿದಿದೆ. ಸಂಭಾವ್ಯ ಬಂಡುಕೋರರನ್ನು ಮನವೊಲಿಸಲು ಸಹಾಯ ಮಾಡಲು ಅವರಿಗೆ ಹತ್ತಿರವಿರುವವರ ಸಹಾಯವನ್ನು ತೆಗೆದುಕೊಳ್ಳುತ್ತಿದೆ.
ಇನ್ನು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಭೀತಿಯಿಂದ ಬಿಜೆಪಿ ಎಎಪಿ ಮೇಲೆ ದಾಳೀ ಮಾಡುತ್ತಿದೆ ಎನ್ನುವ ಆರೋಪಗಳಿವೆ. ಬಿಜೆಪಿ ಸತ್ಯೇಂದ್ರ ಜೈನ್ ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿದೆ ಎಂದು ಎಎಪಿ ಆರೋಪ ಮಾಡಿದೆ. ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಂಪುಟ ಸಚಿವ ಸತ್ಯೇಂದ್ರ ಜೈನ್ ಅವರ ಬಂಧನವನ್ನು ಅನ್ಯಾಯ ಎಂದು ಹೇಳಿದ್ದಾರೆ. ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಿಂದ ಬಿಜೆಪಿಗೆ ಭಯವಿದೆ ಎಂದು ಹೇಳಿದ್ದಾರೆ. ಇದರಿಂದಾಗಿ ಎಎಪಿ ಸರಕಾರದ ಕ್ಯಾಬಿನೆಟ್ ಸಚಿವರನ್ನು ತಪ್ಪಾಗಿ ಸಿಲುಕಿಸಲಾಗುತ್ತಿದೆ.

ಸತ್ಯಂತ್ ಜೈನ್ ವಿರುದ್ಧ ನಕಲಿ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ. ಜೊತೆಗೆ ಸುಳ್ಳು ಆರೋಪಗಳನ್ನು ಹೋರಿಸುವ ಮೂಲಕ ಬಿಜೆಪಿ ಹಿಮಾಚಲ ಚುನಾವಣಾ ತಯಾರಿಯಲ್ಲಿ ನಿರತವಾಗಿದೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಕೂಡ ದೂರಿದ್ದಾರೆ. ಇದು ಮುಂಬರುವ ಹಿಮಾಚಲ ಪ್ರದೇಶದ ಚುನಾವಣೆಗೆ ಎರಡೂ ಪಕ್ಷಗಳ ಬಲಾಬಲ ಪ್ರದರ್ಶನದ ನಿರೀಕ್ಷೆಗಳನ್ನು ಹೆಚ್ಚಿಸಿದೆ.












Click it and Unblock the Notifications