Breaking; ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

ದಿಸ್‌ಪುರ್, ಏಪ್ರಿಲ್ 25; ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಏಪ್ರಿಲ್ 21ರಂದು ಗುಜರಾತ್‌ನಲ್ಲಿ ಅಸ್ಸಾಂ ಪೊಲೀಸರು ಜಿಗ್ನೇಶ್ ಮೇವಾನಿ ಬಂಧಿಸಿದ್ದರು.

ಗುಜರಾತ್‌ನಲ್ಲಿ ಜಿಗ್ನೇಶ್ ಮೇವಾನಿ ಬಂಧಿಸಿದ್ದ ಪೊಲೀಸರು ಅಸ್ಸಾಂಗೆ ಕರೆದುಕೊಂಡು ಹೋಗಿದ್ದರು. ಸೋಮವಾರ ಅಸ್ಸಾಂನ ಸ್ಥಳೀಯ ನ್ಯಾಯಾಲಯ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು ಮಾಡಿದೆ.

Gujarat MLA Jignesh Mevani Gets Bail

ಜಿಗ್ನೇಶ್ ಮೇವಾನಿ ಬಂಧನ ಗುಜರಾತ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಯಾವ ಕಾರಣಕ್ಕಾಗಿ ಬಂಧಿಸಲಾಗಿದೆ? ಎಂದು ಹಲವರು ಚರ್ಚೆ ನಡೆಸಿದ್ದರು. ಈಗ ಅಸ್ಸಾಂನ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಗುಜರಾತ್‌ನ ವದ್ಗಂ ಕ್ಷೇತ್ರದ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ತಮ್ಮ ಶಾಸಕ ಸ್ಥಾನ ಕೊನೆಯಾಗುವ ತನಕ ಕಾಂಗ್ರೆಸ್ ಬೆಂಬಲಿಸಲಿದ್ದು, ಬಳಿಕ ಪಕ್ಷ ಸೇರುವುದಾಗಿ ರಾಹುಲ್ ಗಾಂಧಿ ಜೊತೆ ಜಂಟಿ ಪ್ರತಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು.

2022ರ ಡಿಸೆಂಬರ್‌ನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ. ಇಂತಹ ಸಂದರ್ಭದಲ್ಲಿಯೇ ಜಿಗ್ನೇಶ್ ವೇಮಾನಿ ಬಂಧನ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಈ ಕುರಿತು ಚರ್ಚೆಗಳು ನಡೆದಿದ್ದವು.

ಜಿಗ್ನೇಶ್ ಮೇವಾನಿಯನ್ನು ಯಾವ ಕಾರಣಕ್ಕಾಗಿ ಬಂಧಿಸಲಾಗಿದೆ? ಎಂಬುದು ಕುತೂಹಲದ ವಿಚಾರವಾಗಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಗುರಿಯಾಗಿಸಿಕೊಂಡು ಅವರು ಸರಣಿ ಟ್ವೀಟ್ ಮಾಡುತ್ತಿದ್ದರು. ಈ ಹಿನ್ನಲೆಯಲ್ಲಿ ವಿವಿಧ ಕಾಯ್ದೆಗಳಡಿ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.

ಅಸ್ಸಾಂ ಪೊಲೀಸರು ಗುಜರಾತ್‌ನ ಪಾಲಂಪುರ್ ಸರ್ಕೀಟ್ ಹೌಸ್‌ನಲ್ಲಿ ಜಿಗ್ನೇಶ್ ವೇವಾನಿ ಬಂಧಿಸಿ ಗುವಾಹಟಿಗೆ ಕರೆದುಕೊಂಡು ಹೋಗಿದ್ದರು. ಈಗ ಅಸ್ಸಾಂನ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+