ಗುಜರಾತ್ ಚುನಾವಣೆ : ಸಮೀಕ್ಷೆಯಲ್ಲಿ ಜನರು ಹೇಳಿದ್ದೇನು?

By: ವಿಕಾಸ್ ನಂಜಪ್ಪ
Subscribe to Oneindia Kannada

ಅಹಮದಾಬಾದ್, ಅಕ್ಟೋಬರ್ 25 : ಗುಜರಾತ್‌ ವಿಧಾನಸಭೆ ಚುನಾವಣೆ ದಿನಾಂಕ ಇಂದು ಘೋಷಣೆಯಾಗಲಿದೆ. ಚುನಾವಣೆಯಲ್ಲಿ ಯಾವ ವಿಚಾರಕ್ಕೆ ರಾಜಕೀಯ ಪಕ್ಷಗಳು ಆದ್ಯತೆ ನೀಡಬೇಕು? ಎಂಬುದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ: ಗುಜರಾತ್ ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲಿ ಉದ್ಯೋಗ ಸೃಷ್ಟಿ ಮತ್ತು ವಲಸೆ ತಪ್ಪಿಸಲು ಆದ್ಯತೆ ನೀಡಬೇಕು ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. ಶೇ 31ರಷ್ಟು ಜನರು ವಲಸೆ ರಾಜ್ಯದ ಬಹುದೊಡ್ಡ ಸಮಸ್ಯೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Gujarat opinion Poll : Not development, but address inflation, jobs say voters

ಸಮೀಕ್ಷಯಲ್ಲಿ ಪಾಲ್ಗೊಂಡಿದ್ದ ಶೇ 24ರಷ್ಟು ಜನರು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ 16ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಮಾತನಾಡುತ್ತಿರುವ ಅಭಿವೃದ್ಧಿ ವಿಚಾರವನ್ನು ಒಪ್ಪಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸಮಾಜವಾದಿ ಪಕ್ಷ ಬೆಂಬಲ

ಇತರ ವಿಷಯಗಳು : ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇ 9ರಷ್ಟು ಜನರು ರಸ್ತೆ, ಶೇ 6ರಷ್ಟು ಜನರು ನೀರು, ಶೇ 4ರಷ್ಟು ಜನರು ಕೃಷಿ ಸೌಕರ್ಯಗಳು, ಶೇ 3ರಷ್ಟು ಜನರು ವಿದ್ಯುತ್, ಶೇ 1ರಷ್ಟು ಜನರು ಕಾನೂನು ಸುವ್ಯವಸ್ಥೆ, ಶೇ 1ರಷ್ಟು ಜನರು ಆರೋಗ್ಯ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ಬುಧವಾರ ಮಧ್ಯಾಹ್ನ 1 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದು, ಗುಜರಾತ್ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The people of Gujarat feel that inflation and jobs are bigger issues that need to be addressed than development. The opinion poll conducted by India Today-Axis My India ahead of the Gujarat Assembly elections found that 31 per cent of those surveyed felt that inflation was the most important issue in the polls.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ