ಗುಜರಾತ್ ಚುನಾವಣೆ, 70 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ ಸಿದ್ಧ

ಅಹಮದಾಬಾದ್, ನವೆಂಬರ್ 12 : ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 70 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ 40 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಡಿಸೆಂಬರ್ 9ರಂದು 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

Gujarat polls : Congress clears 70 candidates for first phase

ಪಟೇಲ್, ದಲಿತ ಮತ್ತು ಒಬಿಸಿ ಸಮುದಾಯದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಅಭ್ಯರ್ಥಿಗಳ ಹೆಸರನ್ನು ಮಾತ್ರ ಅಂತಿಮಗೊಳಿಸಲಾಗಿದ್ದು, ಮುಂದಿನ ವಾರ ರಾಹುಲ್ ಗಾಂಧಿ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಿದ್ದಾರೆ. ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲು ಈ ಸಮಿತಿ ಜೊತೆ ರಾಹುಲ್ ಗಾಂಧಿ ಸಭೆ ನಡೆಸಲಿದ್ದಾರೆ.

182 ಕ್ಷೇತ್ರಗಳ ಗುಜರಾತ್ ವಿಧಾನಸಭೆ ಚುನಾವಣೆಗೆ ಡಿಸೆಂಬರ್ 9 ಮತ್ತು 14ರಂದು ಮತದಾನ ನಡೆಯಲಿದೆ. ಡಿಸೆಂಬರ್ 18ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+