ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಚುನಾವಣೆ, 70 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ ಸಿದ್ಧ

By ವಿಕಾಸ್ ನಂಜಪ್ಪ
|
Google Oneindia Kannada News

ಅಹಮದಾಬಾದ್, ನವೆಂಬರ್ 12 : ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 70 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ.

ಹಾರ್ದಿಕ್ ಪಟೇಲ್ ಗೆ ಮೂರು ಆಯ್ಕೆ ನೀಡಿದ ಕಾಂಗ್ರೆಸ್ಹಾರ್ದಿಕ್ ಪಟೇಲ್ ಗೆ ಮೂರು ಆಯ್ಕೆ ನೀಡಿದ ಕಾಂಗ್ರೆಸ್

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ 40 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಡಿಸೆಂಬರ್ 9ರಂದು 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

Gujarat polls : Congress clears 70 candidates for first phase

ಪಟೇಲ್, ದಲಿತ ಮತ್ತು ಒಬಿಸಿ ಸಮುದಾಯದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಅಭ್ಯರ್ಥಿಗಳ ಹೆಸರನ್ನು ಮಾತ್ರ ಅಂತಿಮಗೊಳಿಸಲಾಗಿದ್ದು, ಮುಂದಿನ ವಾರ ರಾಹುಲ್ ಗಾಂಧಿ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ.

ರಾಹುಲ್ ಗಾಂಧಿಯಿಂದ ಸೂರತ್ ನಗರ ಪ್ರದಕ್ಷಿಣೆ, ಭರ್ಜರಿ ಪ್ರಚಾರರಾಹುಲ್ ಗಾಂಧಿಯಿಂದ ಸೂರತ್ ನಗರ ಪ್ರದಕ್ಷಿಣೆ, ಭರ್ಜರಿ ಪ್ರಚಾರ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಿದ್ದಾರೆ. ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲು ಈ ಸಮಿತಿ ಜೊತೆ ರಾಹುಲ್ ಗಾಂಧಿ ಸಭೆ ನಡೆಸಲಿದ್ದಾರೆ.

182 ಕ್ಷೇತ್ರಗಳ ಗುಜರಾತ್ ವಿಧಾನಸಭೆ ಚುನಾವಣೆಗೆ ಡಿಸೆಂಬರ್ 9 ಮತ್ತು 14ರಂದು ಮತದಾನ ನಡೆಯಲಿದೆ. ಡಿಸೆಂಬರ್ 18ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

English summary
The Congress following a late night meeting has cleared the names of 70 candidates for the first phase of the Gujarat assembly elections 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X