ಗುಜರಾತ್ ರಾಜ್ಯಸಭೆ ಚುನಾವಣೆ,ಕಾಂಗ್ರೆಸ್ ನ ಅಹ್ಮದ್ ಪಟೇಲ್ ಗೆ ಗೆಲುವು

Posted By:
Subscribe to Oneindia Kannada

ಅಹಮದಾಬಾದ್,ಆಗಸ್ಟ್ 09:ತೀವ್ರ ಕುತೂಹಲ ಮೂಡಿಸಿದ್ದ ಗುಜರಾತ್ ರಾಜ್ಯಸಭೆಚುನಾವಣೆ ಫಲಿತಾಂಶ ಕೊನೆಗೂ ಹೊರ ಬಿದ್ದಿದೆ. ಕಾಂಗ್ರೆಸ್ ನ ಅಹ್ಮದ್ ಪಟೇಲ್ ಜಯಭೇರಿ ಭಾರಿಸಿದ್ದಾರೆ.

ಹಲವು ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾದ ಈ ಬಾರಿಯ ಚುನಾವಣೆಯಲ್ಲಿ ಅಹ್ಮದ್‌ ಪಟೇಲ್‌ ಅವರನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂದು ಶತಾಯ ಗತಾಯ ಪ್ರಯತ್ನ ಪಟ್ಟಿದ್ದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾಅವರಿಗೆ ತೀವ್ರ ಮುಖಭಂಗವಾಗಿದೆ.

ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಗೆಲುವಿಗೆ ಬೇಕಿದ್ದ ಮ್ಯಾಜಿಕ್ ನಂಬರ್ 44 ಮತಗಳನ್ನು ಪಡೆದು 5ನೇ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಿದರು.

ಅಹ್ಮದ್ ಪಟೇಲ್ ಶಿಕಾರಿಯಾದರೆ ಗುಜರಾತ್ ನಲ್ಲಿ ಕಾಂಗ್ರೆಸ್ ಗತಿ ಅಷ್ಟೇ!

Counting of votes underway for Gujarat Rajya Sabha Polls

ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿಗಳಾದ ಅಮಿತ್ ಶಾ ಹಾಗೂ ಸ್ಮೃತಿ ಇರಾನಿ ಗೆಲವು ಸಾಧಿಸಿದ್ದು, ಮೂರನೇ ಅಭ್ಯರ್ಥಿ ಬಲವಂತ್ ಸಿನ್ಹ ರಜಪೂತ್ ಅವರು ಅಹ್ಮದ್ ಪಟೇಲ್ ಅವರ ವಿರುದ್ಧ ಸೋಲು ಕಂಡರು.

ಕಾಂಗ್ರೆಸ್ ನ ಇಬ್ಬರು ಶಾಸಕರು ಅಡ್ಡ ಮತದಾನ ಮಾಡಿದ್ದ ಬೆನ್ನಲ್ಲಿಯೇ ಇದೀಗ ಬಿಜೆಪಿ ಶಾಸಕ ತನ್ನ ಪಕ್ಷದ ವಿರುದ್ಧವೇ ಮತ ಹಾಕಿ ಅಚ್ಚರಿ ಮೂಡಿಸಿದ್ದಾರೆ.

ಗುಜರಾತ್ ನ ಧರಿ ಕ್ಷೇತ್ರದ ಬಿಜೆಪಿ ಶಾಸಕ ನಳಿನ್ ಕೊಟಾಡಿಯಾ ಎನ್ನುವರು ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಶಾಸಕ ನಳಿನ್ ಕೊಟಾಡಿಯಾ ಫೇಸ್ ಬುಕ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಮಂಗಳವಾರ ಸಂಜೆಯಿಂದ ನಡೆಯುತ್ತಿದ್ದ ಹೈಡ್ರಾಮಾ ಕೊನೆಗೂ ತೆರೆ ಕಂಡಿದ್ದು, ಮತ ಎಣಿಕೆ ಮುಕ್ತಾಯವಾಗಿದೆ.

ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಹಲವು ನಾಟಕೀಯ ಬೆಳವಣಿಗೆಗಳ ನಂತರ ಚುನಾವಣಾ ಆಯೋಗ ಇಬ್ಬರು ಕಾಂಗ್ರೆಸ್ ಶಾಸಕರ ಮತವನ್ನು ಅಸಿಂಧುಗೊಳಿಸಿದೆ.ಈ ಹಿನ್ನಲೆಯಲ್ಲಿ ಬಿಜೆಪಿಗೆ ಭಾರೀ ಮುಖಭಂವಾಗಿದೆ.

ಚುನಾವಣಾ ಆಯೋಗ ಕಾಂಗ್ರೆಸ್ ಶಾಸಕರ ಮತಗಳನ್ನು ಅಸಿಂಧು ಎಂದು ಪ್ರಕಟಿಸಿದೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಇಬ್ಬರು ಶಾಸಕರು ಅಡ್ಡ ಮತದಾನ ಮಾಡಿದ್ದರು.

Gujarat RS Poll : Ahmed Patel Wins With 44 Votes | Oneindia Kannada

ಈ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿ 2 ಶಾಸಕರ ಮತಗಳನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕಾರ್ಯ ವಿಳಂಬವಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Congress says its senior leader Ahmed Patel is returning to the Rajya Sabha from Gujarat for a fifth term, winning the third seat today in a bitterly fought election that became a massive prestige battle between the Congress and the BJP.
Please Wait while comments are loading...