ಗುಜರಾತ್ ರಾಜ್ಯಸಭೆ ಚುನಾವಣೆ, 'ನೋಟಾ' ಬಳಕೆಗೆ ಒಪ್ಪಿಗೆ

By: ವಿಕಾಸ್ ನಂಜಪ್ಪ
Subscribe to Oneindia Kannada

ನವದೆಹಲಿ, ಆ.3 : ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಬಳಕೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಮೂವರು ಸದಸ್ಯರನ್ನು ಆಯ್ಕೆ ಮಾಡಲು ಆ.8ರಂದು ಚುನಾವಣೆ ನಡೆಯಲಿದೆ.

ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಬಳಕೆಗೆ ಅವಕಾಶ ನೀಡಲಿದೆ. ಆದರೆ, ಪ್ರತಿಪಕ್ಷ ಕಾಂಗ್ರೆಸ್ ಈ ನಿರ್ಧಾರವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿತ್ತು.

Gujarat RS polls to be held with NOTA says Supreme Court

ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನೋಟಾ ಬಳಕೆ ಮಾಡಬಹುದು ಎಂದು ಹೇಳಿದೆ. ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ.

ಬಿಜೆಪಿ ಬೆದರಿಕೆಯಿಂದ ಬೆಂಗಳೂರಿಗೆ ಬಂದಿದ್ದೇವೆ : ಗುಜರಾತ್ ಶಾಸಕರ ಅಳಲು

ಆಗಸ್ಟ್ 8ರಂದು ಗುಜರಾತ್ ವಿಧಾನಸಭೆಯಿಂದ ಮೂವರು ಸದಸ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಅಭ್ಯರ್ಥಿಗಳಾಗಿದ್ದು ಚುನಾವಣೆ ದೇಶದ ಗಮನ ಸೆಳೆದಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯಲಿದೆ ಎಂದು ಶಾಸಕರು ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. 40 ಶಾಸಕರು ಬೆಂಗಳೂರು ಹೊರವಲಯದ ಈಗಲ್ ಟನ್ ಗಾಲ್ಫ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

Modi Bans Lal Batti for VIPs From May 1st | Oneindia Kannada

ನಂಜನಗೂಡು ನೋಟ : ಮೂರನೇ ಸ್ಥಾನ ಪಡೆದ ನೋಟಾ!

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Supreme Court has said that the Gujarat Rajya Sabha elections will be held with the NOTA option. Court refused to stay the implementation of NOTA by the Election Commission of India.
Please Wait while comments are loading...