ಗುಜರಾತಿನ ವಡೋದರಾ ಶಾಲೆಯಲ್ಲಿ ಪ್ರದ್ಯುಮ್ನ ಮಾದರಿ ಹತ್ಯೆ
ವಡೋದರಾ, ಜೂನ್ 23: ದೇಶವನ್ನು ಬೆಚ್ಚಿಬೀಳಿಸಿದ್ದ ಗುರ್ಗಾಂವ್ ಶಾಲೆಯ ಪ್ರದ್ಯುಮ್ನ ಹತ್ಯೆಯ ಮಾದರಿಯಲ್ಲಿಯೇ ಗುಜರಾತಿನ ವಡೋದರಾ ಶಾಲೆಯಲ್ಲಿಯೂ ವಿದ್ಯಾರ್ಥಿಯೋರ್ವನನ್ನು ಹತ್ಯೆಗೈಯ್ಯಲಾಗಿದೆ.
9 ನೇ ತರಗತಿ ಓದುತ್ತಿದ್ದ ದೇವ್ ಭಗ್ವಾನ್ ದಾಸ್ ತದ್ವಿ(14) ಎಂಬ ವಿದ್ಯಾರ್ಥಿಯೋರ್ವನನ್ನು ಆತನ ಶಾಲೆಯ ವಿದ್ಯಾರ್ಥಿಯೇ ಕೊಲೆ ಮಾಡಿದ್ದಾನೆಂಬ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಆತನ ಶವ ಶಾಲೆಯ ಶೌಚಾಲಯದಲ್ಲಿ ಪತ್ತೆಯಾಗಿತ್ತು.

10 ನೇ ತರಗತಿಯ ವಿದ್ಯಾರ್ಥಿಯೇ ಈ ಕೃತ್ಯ ಎಸಗಿದ್ದಾನೆಂಬ ಶಂಕೆ ವ್ಯಕ್ತವಾಗಿದ್ದು, ಇದುವರೆಗೂ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ. ಮಧ್ಯಾಹ್ನ ಸುಮಾರು 12 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದ್ದು, ತನಿಖೆಯ ನಂತರವೇ ಪ್ರತಿಕ್ರಿಯೆ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹರ್ಯಾಣದ ಗುರ್ಗಾಂವ್ ನಲ್ಲಿರುವ ರಾಯನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಪ್ರದ್ಯುಮ್ನ ಠಾಕೂರ್ ಎಂಬ ವಿದ್ಯಾರ್ಥಿಯನ್ನು ಸೆಪ್ಟೆಂಬರ್ 8, 2017 ರಂದು ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಿ ಹತ್ಯೆಗೈಯಲಾಗಿತ್ತು. ಈ ಸಂಬಂಧ , ಇದೇ ಶಾಲೆಯಲ್ಲಿ11 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications