ಪಂಜಾಬ್ : ಪೊಲೀಸ್ ಠಾಣೆ, ಬಸ್ ಮೇಲೆ ಉಗ್ರರ ದಾಳಿ
ಬೆಂಗಳೂರು, ಜುಲೈ 27 : ಸತತ 11 ಗಂಟೆಗಳ ಕಾರ್ಯಾಚರಣೆ ಅಂತ್ಯಗೊಂಡಿದ್ದು, ದೀನಾ ನಗರ್ ಪೊಲೀಸ್ ಠಾಣೆಯಲ್ಲಿ ಅಡಗಿ ಕುಳಿತಿದ್ದ ಉಗ್ರರನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ. 4 ಉಗ್ರರು ಅಡಗಿ ಕುಳಿತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಎಷ್ಟು ಜನ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.
ಸಮಯ 3.30 : ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭದ್ರತಾ ಪಡೆಗಳು ದೀನಾ ನಗರ್ ಪೊಲೀಸ್ ಠಾಣೆಯಲ್ಲಿ ಅಡಗಿದ್ದ ಮತ್ತೊಬ್ಬ ಉಗ್ರನನ್ನು ಕೊಂದು ಹಾಕಿದ್ದಾರೆ. ನಾಲ್ವರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. [ಉಗ್ರರ ದಾಳಿಯ ಚಿತ್ರಗಳು ಇಲ್ಲಿವೆ ನೋಡಿ]
ಸಮಯ 1 ಗಂಟೆ : ದೀನಾ ನಗರ್ ಪೊಲೀಸ್ ಠಾಣೆಯಲ್ಲಿ ಉಗ್ರರ ಜೊತೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ದಾಳಿಯಲ್ಲಿ ಇದುವರೆಗೂ 9 ಜನರು ಮೃತಪಟ್ಟಿದ್ದು 7 ಪೊಲೀಸ್ ಸಿಬ್ಬಂದಿ ಮತ್ತು ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.

ಸಮಯ 11.30 : ಪಾಕಿಸ್ತಾನದಿಂದ ಬಂದ ಉಗ್ರರು ಜಮ್ಮುವಿನ ಹರಿನಗರ ಗಡಿ ಬಳಿ ಒಳನುಸುಳಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಗುರುದಾಸ್‌ಪುರದ ಹರಿನಗರದಿಂದ 90 ಕಿ.ಮೀ.ದೂರದಲ್ಲಿದೆ.
Dog squad in Punjab railway stations, all trains and tracks being checked by railway police pic.twitter.com/2K3mBJnmbt
— ANI (@ANI_news) July 27, 2015 ಸಮಯ 10.55 : ದೀನಾ ನಗರ್ ಪೊಲೀಸ್ ಠಾಣೆಯಲ್ಲಿ ಅಡಗಿದ್ದ ಒಬ್ಬ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಇನ್ನೂ ನಾಲ್ವರು ಅಡಗಿರಬಹುದೆಂದು ಶಂಕಿಸಲಾಗಿದೆ.
ಸಮಯ 10.30 : ಪಂಜಾಬ್‌ನಲ್ಲಿನ ಉಗ್ರರ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ರಾಜನಾಥ್ ಸಿಂಗ್, 'ದಾಳಿಯ ಹೊಣೆಯ ಬಗ್ಗೆ ಪ್ರತಿಕ್ರಿಯೆ ನೀಡಲು ಇದು ಸೂಕ್ತವಾದ ಸಮಯವಲ್ಲ, ಸ್ಥಳದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಕಾರ್ಯಾಚರಣೆ ಇನ್ನೂ ಮುಂದುವರೆಯುತ್ತಿದೆ' ಎಂದು ಹೇಳಿದ್ದಾರೆ.
ಸಮಯ 10.015 : ಪೊಲೀಸ್ ಠಾಣೆಯಲ್ಲಿ ಅಡಗಿರುವ ಉಗ್ರರನ್ನು ಸಾಧ್ಯವಾದರೆ ಜೀವಂತವಾಗಿ ಸೆರೆ ಹಿಡಿಯಲು ಭದ್ರತಾ ಪಡೆಗಳು ನಿರ್ಧರಿಸಿವೆ. ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಸಂಪೂರ್ಣ ಪ್ರದೇಶವನ್ನು ಭದ್ರತಾ ಪಡೆಗಳು ತಮ್ಮ ವಶಕ್ಕೆ ಪಡೆದುಕೊಂಡಿವೆ.
ಸಮಯ 10 ಗಂಟೆ : ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಪೊಲೀಸ್ ಠಾಣೆಯಲ್ಲಿದ್ದ ಎಲ್ಲಾ ಸಿಬ್ಬಂದಿಗಳನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ 7ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸಮಯ 9.40 : ಪಂಜಾಬ್‌ನಲ್ಲಿನ ಉಗ್ರರ ದಾಳಿ ಕುರಿತು ಚರ್ಚೆ ನಡೆಸಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಗುಪ್ತಚರ ಇಲಾಖೆ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.
ಸಮಯ 9.15 : ಪೊಲೀಸ್ ಠಾಣೆಯಲ್ಲಿ 4ಕ್ಕಿಂತ ಹೆಚ್ಚಿನ ಉಗ್ರರು ಅಡಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಖಚಿತವಾಗಿ ಎಷ್ಟು ಜನರಿದ್ದಾರೆ? ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪಂಜಾಬ್ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಕರೆ ಮಾಡಿ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ.
Gurdaspur suspected terror attack: Locals point at bullet marks at the spot where gunmen opened fire. pic.twitter.com/gemp2TFMCD
— ANI (@ANI_news) July 27, 2015 ಸಮಯ 8.50 : ಪಂಜಾಬ್‌ನಲ್ಲಿನ ಉಗ್ರರ ದಾಳಿ ವ್ಯವಸ್ಥಿತ ಸಂಚಾಗಿದ್ದು ಗುರುದಾಸ್ ಪುರದಲ್ಲಿ ಹಲವು ಕಡೆ ಉಗ್ರರು ಬಾಂಬ್ ಇಟ್ಟಿರುವ ಸಾಧ್ಯತೆ ಇದ್ದು, ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಸಮಯ 8.45 : ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ದಾಳಿ ಮುಂದುವರೆದಿದೆ. ಮುಂಜಾಗ್ರತಾ ಕ್ರಮವಾಗಿ ದೀನಾ ನಗರ್‌ನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರೈಲ್ವೆ ಹಳಿ ಬಳಿ ಸಿಕ್ಕ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.
ಸಮಯ 8.20 : ದೀನಾ ನಗರ್ ಗೆ ಆಗಮಿಸಲು ಉಗ್ರರು ಬಿಳಿ ಬಣ್ಣದ ಮಾರುತಿ 800 ಕಾರನ್ನು ಅಪಹರಿಸಿ ತಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಗುಂಡಿನ ದಾಳಿಯಲ್ಲಿ ಇದುವರೆಗೂ ಇಬ್ಬರು ಮೃತಪಟ್ಟಿದ್ದಾರೆ. ಉಗ್ರರು ವ್ಯವಸ್ಥಿತ ಸಂಚು ರೂಪಿಸಿ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಗುರುದಾಸ್‌ಪುರದ ರೈಲ್ವೆ ಹಳಿಯ ಪಕ್ಕದಲ್ಲಿ ಪೊಲೀಸರಿಗೆ ಸ್ಫೋಟಕಗಳು ಪತ್ತೆಯಾಗಿವೆ.
Spot visuals of suspected terror attack in Dina Nagar, Gurdaspur (Punjab) pic.twitter.com/Zyn0b7v6JX
— ANI (@ANI_news) July 27, 2015 ಪೊಲೀಸ್ ಠಾಣೆ ಮೇಲೆ ಉಗ್ರರ ದಾಳಿ : ಪೊಲೀಸ್ ಸಮವಸ್ತ್ರದಲ್ಲಿ ಬಂದ ಉಗ್ರರು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿರುವ ಘಟನೆ ಪಂಜಾಬ್‌ನಲ್ಲಿ ಸೋಮವಾರ ಮುಂಜಾನೆ ನಡೆದಿದೆ. ದಾಳಿಯಲ್ಲಿ ಒಬ್ಬರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಇದಕ್ಕೂ ಮೊದಲು ಪಂಜಾಬ್ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಸೋಮವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಪಂಜಾಬ್‌ನ ದೀನಾ ನಗರ್ ಪೊಲೀಸ್ ಠಾಣೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಪೊಲೀಸ್ ಠಾಣೆಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ನಾಲ್ವರು ಉಗ್ರರು ಠಾಣೆಯಲ್ಲಿ ಅಡಗಿರಬಹುದೆಂದು ಶಂಕಿಸಲಾಗಿದೆ. ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದಿದ್ದು, ಗುಂಡಿನ ಚಕಮಕಿ ನಡೆಯುತ್ತಿದೆ.
ಬಸ್ಸಿನ ಮೇಲೆ ಉಗ್ರರ ದಾಳಿ : ಮುಂಜಾನೆ 5 ಗಂಟೆ ಸುಮಾರಿಗೆ ಸೇನಾ ಸಮವಸ್ತ್ರ ಧರಿಸಿ ಕಾರಿನಲ್ಲಿ ಆಗಮಿಸಿದ ಉಗ್ರರು ಪಂಜಾಬ್ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಮೇಲೆ ದೀನಾ ನಗರ್‌ನಲ್ಲಿ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ 7 ಪ್ರಯಾಣಿಕರು ಗಾಯಗೊಂಡಿದ್ದಾರೆ. ನಂತರ ಉಗ್ರರು ಪೊಲೀಸ್ ಠಾಣೆಗೆ ನುಗ್ಗಿದ್ದು, ಅದನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಭದ್ರತಾ ಪಡೆಗಳು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ಯಾವ ಸಂಘಟನೆಗಳು ಈ ದಾಳಿಯ ಹೊಣೆಯನ್ನು ಇದುವರೆಗೂ ಹೊತ್ತುಕೊಂಡಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications