ಛತ್ತೀಸ್‌ಗಢದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಚತ್ತೀಸ್‌ಗಢ, ಡಿಸೆಂಬರ್ 3: ಛತ್ತೀಸ್‌ಗಢದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.

ಸುಮಾರು 20-30 ವರ್ಷದ ಮಹಿಳೆ ಶವ ಪತ್ತೆಯಾಗಿದ್ದು, ಅವರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ರಾಜಪುರದ ಗೋಪಾಲ್‌ಪುರ ಮುರ್ಕಾ ಡ್ಯಾಮ್ ಬಳಿ ಇರುವ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಕಳೆದ ಎರಡು ಮೂರು ದಿನಗಳ ಹಿಂದೆಯೇ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ.

Half Burnt Body Found in Chhattisgarh

ಶವದ ಸಮೀಪ ಎಣ್ಣೆಯ ಬಾಟಲಿಗಳು, ತಿಂಡಿಗಳು ದೊರೆತಿವೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ರಿಪೋರ್ಟ್ ಬರುವುದು ಬಾಕಿ ಇದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಹೈದರಾಬಾದಿನಲ್ಲಿ ಕೂಡ ಇಂಥದ್ದೇ ಎರಡು ಘಟನೆ ನಡೆದಿತ್ತು.

ಪಶುವೈದ್ಯೆ ಮೇಲೆ ಲಾರಿ ಚಾಲಕರು ಕ್ಲೀನರ್‌ಗಳು ಸೇರಿ ಅತ್ಯಾಚಾರವೆಸಗಿ ಬಳಿಕ ಅವರನ್ನು ಕೊಲೆ ಮಾಡಿ ನಿರ್ಜನ ಪ್ರದೇಶದಲ್ಲಿ ಸುಟ್ಟುಹಾಕಿದ್ದರು. ಅಲ್ಲಿ ಪರಿಶೀಲನೆ ನಡೆಸುತ್ತಿದ್ದ ಪೊಲೀಸರಿಗೆ ಇನ್ನೊಂದು ಅರೆಬಂದ ರೀತಿಯಲ್ಲಿದ್ದ ಶವ ಪತ್ತೆಯಾಗಿತ್ತು.

ಇದೀಗ ಇದೇ ರೀತಿಯ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದ್ದು, ಇಡೀ ದೇಶದಲ್ಲೇ ಮಹಿಳೆಯರಿಗೆ ಭದ್ರತೆ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+