Harbhajan Singh: ಎಎಪಿ ತೊರೆದ ಬೆನ್ನಲ್ಲೇ ಹರ್ಭಜನ್ ಸಿಂಗ್‌ಗೆ ಶಾಕ್: ಪಂಜಾಬ್ ಪೊಲೀಸರಿಂದ ಭದ್ರತೆ ವಾಪಸ್

ಆಮ್ ಆದ್ಮಿ ಪಾರ್ಟಿ (ಎಎಪಿ) ತೊರೆದು ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಕ್ರಿಕೆಟಿಗ ಹಾಗೂ ರಾಜ್ಯಸಭಾ ಸಂಸದ ಹರ್ಭಜನ್ ಸಿಂಗ್ ಅವರ ಪೊಲೀಸ್‌ ಭದ್ರತೆಯನ್ನು ಪಂಜಾಬ್ ಸರ್ಕಾರ ವಾಪಸ್ ಪಡೆದಿದೆ. ರಾಘವ್ ಚಡ್ಡಾ ಅವರೊಂದಿಗೆ ಎಎಪಿ ತೊರೆದ ಏಳು ಸಂಸದರಲ್ಲಿ ಹರ್ಭಜನ್ ಕೂಡ ಒಬ್ಬರಾಗಿದ್ದು, ರಾಜಕೀಯ ಬದಲಾವಣೆಯ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಪೊಲೀಸ್ ಭದ್ರತೆ ಕಡಿತ

ಪಂಜಾಬ್ ಪೊಲೀಸ್ ಮೂಲಗಳ ಪ್ರಕಾರ, ಏಪ್ರಿಲ್ 25ರ ಶನಿವಾರ ಸಂಜೆಯೇ ಹರ್ಭಜನ್ ಸಿಂಗ್ ಅವರಿಗೆ ನೀಡಲಾಗಿದ್ದ ರಾಜ್ಯ ಪೊಲೀಸ್ ಭದ್ರತೆಯನ್ನು ಹಿಂಪಡೆಯಲಾಗಿದೆ. ಸುಮಾರು 10 ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡಿದ್ದ ಈ ಭದ್ರತಾ ಕವಚವನ್ನು ಈಗ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

Harbhajan Singh

ಸಿಆರ್‌ಪಿಎಫ್ ಭದ್ರತೆ ನಿಯೋಜನೆ

ರಾಜ್ಯ ಪೊಲೀಸರು ಭದ್ರತೆ ವಾಪಸ್ ಪಡೆದ ಬೆನ್ನಲ್ಲೇ, ಏಪ್ರಿಲ್ 26ರ ಭಾನುವಾರ ಮಾಜಿ ಕ್ರಿಕೆಟಿಗನ ನಿವಾಸದ ಹೊರಗೆ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ನಿಯೋಜನೆಗೊಂಡಿರುವುದು ಕಂಡುಬಂದಿದೆ. ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅವರಿಗೆ ಪರ್ಯಾಯ ಭದ್ರತೆಯನ್ನು ಒದಗಿಸಿದೆ ಎನ್ನಲಾಗಿದೆ.

ಪಂಜಾಬ್‌ನ ಎಎಪಿ ಸರ್ಕಾರ ಮತ್ತು ಪಕ್ಷದ ವಿರುದ್ಧ ಬಂಡಾಯವೆದ್ದು ಬಿಜೆಪಿ ಸೇರಿದ ಸಂಸದರ ವಿರುದ್ಧ ರಾಜ್ಯ ಸರ್ಕಾರ ಈ ರೀತಿಯ ಕ್ರಮಕ್ಕೆ ಮುಂದಾಗಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭದ್ರತೆ ವಾಪಸ್ ಪಡೆಯುವ ಮೂಲಕ ರಾಜ್ಯ ಸರ್ಕಾರವು ರಾಜಕೀಯ ದ್ವೇಷ ಸಾಧಿಸುತ್ತಿದೆ ಎಂಬ ಟೀಕೆಗಳೂ ಕೇಳಿಬರುತ್ತಿವೆ.

ಆಮ್ ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯರಾದ ರಾಘವ್ ಚಡ್ಡಾ ಮತ್ತು ಸಂದೀಪ್ ಪಾಠಕ್ ಅವರು ಪಕ್ಷ ತೊರೆಯುವುದಾಗಿ ಘೋಷಿಸಿ, ಇತರ ಐವರು ಸಂಸದರಾದ ಮಿತ್ತಲ್, ಸಿಂಗ್, ಗುಪ್ತಾ, ಸ್ವಾತಿ ಮಲಿವಾಲ್ ಮತ್ತು ವಿಕ್ರಮಜಿತ್ ಸಾಹ್ನಿ ಅವರೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದರು. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ತನ್ನ ತತ್ವಗಳು, ಮೌಲ್ಯಗಳು ಮತ್ತು ನೈತಿಕತೆಯಿಂದ ದಾರಿ ತಪ್ಪಿದೆ, ಹೀಗಾಗಿ ತಾವು ಬಿಜೆಪಿ ಸೇರುತ್ತಿರುವುದಾಗಿ ಚಡ್ಡಾ ಆರೋಪಿಸಿದರು. ಈ ಏಳು ಸಂಸದರು ಒಂದು ಬಣವಾಗಿ ಬಿಜೆಪಿಯೊಂದಿಗೆ ವಿಲೀನಗೊಂಡಿದ್ದಾರೆ ಎಂದು ಅವರು ತಿಳಿಸಿದರು. ಈ ದಿಢೀರ್ ಪಕ್ಷಾಂತರದ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಈ ಏಳು ನಾಯಕರನ್ನು ದ್ರೋಹಿಗಳು ಎಂದು ಕರೆದಿದ್ದಾರೆ.

ಈಗ ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಪರವಾಗಿ ಕೇವಲ ಸಂಜಯ್ ಸಿಂಗ್, ಎನ್.ಡಿ. ಗುಪ್ತಾ ಮತ್ತು ರಾಘವ್ ಚಡ್ಡಾ ಅವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಇತರ ಮೂವರು ಸಂಸದರು ಮಾತ್ರ ಉಳಿದಿದ್ದಾರೆ. ಈ ದಿಢೀರ್ ಪಕ್ಷಾಂತರವು ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆ ಮತ್ತು ದೆಹಲಿಯ ರಾಜಕಾರಣದ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+