ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹಾರ್ದಿಕ್ ಪಟೇಲ್: ಉಪವಾಸ ಮುಂದುವರಿಕೆ

ಅಹ್ಮದಾಬಾದ್, ಸೆಪ್ಟೆಂಬರ್ 10: ಕಳೆದ ಹದಿನೈದು ದಿನಗಳಿಂದ ಸತತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟೀದಾರ್ ಅದಾಲತ್ ಆಂದೋಲನ ಸಮಿತಿಯ(PAAS) ಮುಖಂಡ ಹಾರ್ದಿಕ್ ಪಟೇಲ್ ಅವರನ್ನು ಅಹ್ಮದಾಬಾದಿನ ಖಾಸಗಿ ಆಸ್ಪತ್ರೆಯಿಂದ ಭಾನುವಾರ ಡಿಸ್ಚಾರ್ಜ್ ಮಾಡಲಾಗಿದೆ.

ಸತತ ಉಪವಾಸದ ಕಾರಣ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಅವರನ್ನು ಸೆ.07ಕ್ಕೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಹಾರ್ದಿಕ್ ಪಟೇಲ್ ಅವರ ಆರೋಗ್ಯ ದಿನೇ ದಿನೇ ಹದಗೆಡುತ್ತಿದ್ದರಿಂದ ಗುಜರಾತ್ ಸರ್ಕಾರ ಅವರ ನಿವಾಸದ ಮುಂದೆಯೇ 'ICU on Wheel' ಅಂಬುಲೆನ್ಸ್ ಸೌಲಭ್ಯ ಒದಗಿಸಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರವೂ ಉಪವಾಸವನ್ನು ಮುಂದುವರಿಸಲಿರುವ 25 ವರ್ಷ ವಯಸ್ಸಿನ ಹಾರ್ದಿಕ್ ಪಟೇಲ್, 'ಉಪವಾಸದ ಅವಧಿಯಲ್ಲಿ ಅಕಸ್ಮಾತ್ ತಮ್ಮ ಪ್ರಾಣಕ್ಕೆ ಅಪಾಯವಾದರೆ ಏನು ಮಾಡಬೇಕು' ಎಂಬ ಮರಣಪತ್ರ(ವಿಲ್) ಸಹ ಬರೆದಿದ್ದಾರೆ.

Hardik Patel discharged from hospital, continues hunger strike

ಆಗಸ್ಟ್ 24 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಹಾರ್ದಿಕ್ ಪಟೇಲ್ ಈಗಾಗಲೇ 20 ಕೆಜಿ ಯಷ್ಟು ತೂಕ ಕಳೆದುಕೊಂಡಿದ್ದಾರೆ. ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ, ರೈತರ ಸಾಲ ಮನ್ನಾ, ದೇಶದ್ರೋಹದ ಆರೋಪದಲ್ಲಿ ಜೈಲಿನಲ್ಲಿರುವ ಅಲ್ಪೇಶ್ ಕಠಾರಿಯಾ ಬಿಡುಗಡೆಗಾಗಿ ಒತ್ತಾಯಿಸಿ 25 ವರ್ಷ ವಯಸ್ಸಿನ ಹಾರ್ದಿಕ್ ಪಟೇಲ್ ಉಪವಾಸ ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+