ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ರಾಜೀನಾಮೆ

ನವದೆಹಲಿ, ಸೆ. 17: ಕೇಂದ್ರ ಆಹಾರ ಸಂಸ್ಕರಣಾ ಖಾತೆ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಸಲ್ಲಿಸಿದ್ದಾರೆ.

ಕೇಂದ್ರ ಸರ್ಕಾರದ ಉದ್ದೇಶಿತ ಕೃಷಿ ಸಂಬಂಧಿತ ಮಸೂದೆ ಮಂಡನೆಗೆ ಶಿರೋಮಣಿ ಅಕಾಲಿದಳ ವಿರೋಧ ಭಾರಿ ವ್ಯಕ್ತಪಡಿಸಿದ ಬೆನ್ನಲ್ಲೇ ಮೋದಿ ಸಚಿವ ಸಂಪುಟದಿಂದ ಪಕ್ಷದ ಏಕೈಕ ಪ್ರತಿನಿಧಿಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ಗುರುವಾರದಂದು ಶಿರೋಮಣಿ ಅಕಾಲಿ ದಳಾ ಅಧ್ಯಕ್ಷ ಸುಖ್ ಬೀರ್ ಸಿಂಗ್ ಬಾದಲ್ ಅವರು ಈ ಬಗ್ಗೆ ಘೋಷಿಸಿದ್ದರು.

ರೈತ ಸಂಘಟನೆ, ರೈತರು ಮತ್ತು ಕೃಷಿ ಕಾರ್ಮಿಕರು ವ್ಯಕ್ತಪಡಿಸುವ ಎಲ್ಲ ಮೀಸಲಾತಿ ಬೇಡಿಕೆಗಳನ್ನು ಪರಿಹರಿಸಬೇಕಿದೆ. ಅಲ್ಲಿವರೆಗೆ ಸಂಸತ್ತಿನಲ್ಲಿ ಕೃಷಿ ಸಂಬಂಧಿತ ಮೂರು ಮಸೂದೆಗಳನ್ನು ಅನುಮೋದನೆಗಾಗಿ ಪರಿಚಯಿಸದಂತೆ ಶಿರೋಮಣಿ ಅಕಾಲಿ ದಳ ಕೇಂದ್ರಕ್ಕೆ ಮನವಿ ಮಾಡಿದೆ.

Harsimrat Kaur Badal to step down as Union Minister protest against Farm bills

ಕೇಂದ್ರ ಸರ್ಕಾರವು ರೈತರ ಉತ್ಪಾದನೆಯ ವ್ಯಾಪಾರ ಮತ್ತು ವಾಣಿಜ್ಯ(ಪ್ರಚಾರ ಮತ್ತು ಸೌಲಭ್ಯ) ಮಸೂದೆ, ಕೃಷಿ ಸೇವೆ ಮತ್ತು ಬೆಲೆ ನಿಗದಿ ಬಗ್ಗೆ ಒಪ್ಪಂದ (ಸಬಲೀಕರಣ ಮತ್ತು ಸಂರಕ್ಷಣೆ) ಮಸೂದೆ, ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆಯನ್ನು ಮಂಡಿಸಲು ಮುಂದಾಗಿತ್ತು. ಆದರೆ, ರೈತರು ಮತ್ತು ರೈತ ಸಂಘಟನೆಗಳ ಬೇಡಿಕೆಗೆ ತಕ್ಕಂತೆ ಮೀಸಲಾತಿ ಭರವಸೆ ನೀಡದ ಹೊರತು ಮಸೂದೆಗೆ ಅನುಮೋದನೆ ನೀಡುವುದಕ್ಕೆ ಬೆಂಬಲಿಸುವುದಿಲ್ಲ ಎಂದು ಬಾದಲ್ ತಿಳಿಸಿದ್ದಾರೆ.

"ಈ ಮಸೂದೆಗಳನ್ನು ಪರಿಚಯಿಸುವ ಮೊದಲು, ಕೇಂದ್ರ ಸರ್ಕಾರವು ಕನಿಷ್ಠ ರೈತರ ಪಕ್ಷಗಳು, ಮಿತ್ರಪಕ್ಷಗಳನ್ನು ಸಂಪರ್ಕಿಸಬೇಕು. ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಕೈಗೆತ್ತಿಕೊಂಡಾಗ ನಮ್ಮ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಮೀಸಲಾತಿ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ" ಎಂದು ಬಾದಲ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+