Get Updates
Get notified of breaking news, exclusive insights, and must-see stories!

Haryana Assembly Election 2024: ಸಿಎಂ ನಯಾಬ್‌ ಸಿಂಗ್‌ ಸೈನಿ ಪ್ರಮಾಣ ವಚನಕ್ಕೆ ದಿನಾಂಕ ನಿಗದಿ

ನವದೆಹಲಿ, ಅಕ್ಟೋಬರ್ 12: ಹರಿಯಾಣ ವಿಧಾನಸಭೆ ಚುನಾವಣೆ 2024ರಲ್ಲಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆಯನ್ನು ಬಿಜೆಪಿ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಮುಹೂರ್ತ ನಿಗದಿಯಾಗಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ ಅಕ್ಟೋಬರ್ 5ರ ಶನಿವಾರ ಮತದಾನ ನಡೆದಿತ್ತು. ಅಕ್ಟೋಬರ್ 8ರಂದು ಮತ ಎಣಿಕೆ ನಡೆದಿತ್ತು, ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46. ಬಿಜೆಪಿ 48 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ.

ಹರಿಯಾಣ ವಿಧಾನಸಭೆ ಚುನಾವಣೆ ಚುನಾವಣೆ 2024ರಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ರಾಜ್ಯದಲ್ಲಿ ಸತತವಾಗಿ 3ನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿದೆ. ಚುನಾವಣೆಯಲ್ಲಿ ಬಿಜೆಪಿ 48, ಕಾಂಗ್ರೆಸ್‌ 37, ಐಎನ್‌ಎಲ್‌ಡಿ 2 ಮತ್ತು ಮೂವರು ಪಕ್ಷೇತರರು ಗೆಲುವು ಸಾಧಿಸಿದ್ದರು. ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರಿದ್ದು, ವಿಧಾನಸಭೆಯಲ್ಲಿ ಬಿಜೆಪಿಯ ಬಲ 50ಕ್ಕೆ ಏರಿಕೆಯಾಗಿದೆ.

Haryana assembly election 2024 CM Nayab Singh Saini To Take Oath On October 17

ಸದ್ಯ ಹರಿಯಾಣದ ಮುಖ್ಯಮಂತ್ರಿಯಾಗಿರುವ 54 ವರ್ಷದ ನಯಾಬ್‌ ಸಿಂಗ್‌ ಸೈನಿ ಅವರೇ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಈ ಕುರಿತು ಬಿಜೆಪಿ ಹೈಕಮಾಂಡ್ ನಾಯಕರು ಈಗಾಗಲೇ ತೀರ್ಮಾನ ಮಾಡಿದ್ದಾರೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್‌ ಸೈನಿ ಅಕ್ಟೋಬರ್ 17ರಂದು ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಸಿಎಂ ಆಗುವುದಿಲ್ಲ ಖಟ್ಟರ್: ಹರಿಯಾಣ ವಿಧಾನಸಭೆ ಚುನಾವಣೆ ಚುನಾವಣೆ 2024ರಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಮತ್ತೆ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ ಎಂದು ವದಂತಿ ಹಬ್ಬಿತ್ತು. ಆದರೆ ಬಿಜೆಪಿ ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಶನಿವಾರ ಸ್ವತಃ ಮನೋಹರ್ ಲಾಲ್ ಖಟ್ಟರ್, "ಅಕ್ಟೋಬರ್ 17ರಂದು ಬಿಜೆಪಿ ಸರ್ಕಾರ ರಚನೆಯಾಗಲಿದೆ. ನಯಾಬ್‌ ಸಿಂಗ್‌ ಸೈನಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ವಿವಿಧ ಕೇಂದ್ರ ಸಚಿವರು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ" ಎಂದು ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್ ನಾಯಕರು ಇನ್ನೂ ಹರಿಯಾಣಕ್ಕೆ ವೀಕ್ಷಕರನ್ನು ನೇಮಕ ಮಾಡಬೇಕಿದೆ. ವೀಕ್ಷಕರು ರಾಜ್ಯಕ್ಕೆ ಆಗಮಿಸಿ, ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಿ, ನಯಾಬ್‌ ಸಿಂಗ್‌ ಸೈನಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಬೇಕಿದೆ. ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕನ್ನು ಮಂಡಿಸಲಿದ್ದಾರೆ.

ಹರಿಯಾಣದಲ್ಲಿ ಅಕ್ಟೋಬರ್ 5ರ ಶನಿವಾರ ಮತದಾನ ನಡೆದಿತ್ತು. ಮತದಾನದ ಬಳಿಕ ಪ್ರಕಟಗೊಂಡಿದ್ದ ಮತದಾನೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಿದ್ದವು. ಅಕ್ಟೋಬರ್ 8ರಂದು ಸಹ ಮತ ಎಣಿಕೆ ಆರಂಭವಾದ ಅರ್ಧ ತಾಸು ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿತ್ತು. ಕಾಂಗ್ರೆಸ್ ಕಛೇರಿಯಲ್ಲಿ ಸಂಭ್ರಮ ಜೋರಾಗಿತ್ತು.

ಬೆಳಗ್ಗೆ 9 ಗಂಟೆ ಬಳಿಕ ಮತ ಎಣಿಕೆ ಚಿತ್ರಣವೇ ಬದಲಾಯಿತು. ಬಿಜೆಪಿ ಮುನ್ನಡೆಯನ್ನು ಪಡೆದುಕೊಂಡಿತು. ಅಂತಿಮವಾಗಿ ಬಿಜೆಪಿ 48 ಸೀಟುಗಳಲ್ಲಿ ಜಯಗಳಿಸಿತು. ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರಿ, ಬೆಂಬಲ ಘೋಷಣೆ ಮಾಡಿದ್ದಾರೆ. ಅಲ್ಲದೇ ಪಕ್ಷೇತರ ಶಾಸಕಿ ಸಾವಿತ್ರಿ ಜಿಂದಾಲ್ ಸಹ ಬಿಜೆಪಿಗೆ ಬಾಹ್ಯ ಬೆಂಬಲ ನೀಡಿದ್ದಾರೆ. ಆದ್ದರಿಂದ ವಿಧಾನಸಭೆಯಲ್ಲಿ ಬಿಜೆಪಿಯ ಬಲ 51ಕ್ಕೆ ಏರಿಕೆಯಾಗಿದೆ.

ಹರಿಯಾಣದಲ್ಲಿ ಸತತ 3ನೇ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಪಂಚಕುಲದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನಯಾಬ್‌ ಸಿಂಗ್‌ ಸೈನಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯುವ ನಿರೀಕ್ಷೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+