Haryana Assembly Election 2024 Results: ಹರಿಯಾಣದಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ

ನವದೆಹಲಿ, ಅಕ್ಟೋಬರ್ 08: ಹರಿಯಾಣ ವಿಧಾನಸಭೆ ಚುನಾವಣೆ 2024ರ ಮತ ಎಣಿಕೆ ಆರಂಭವಾಗಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ ಅಕ್ಟೋಬರ್ 5ರ ಶನಿವಾರ ಮತದಾನ ನಡೆದಿತ್ತು. ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಿದ್ದವು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46. ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಪ್ರಬಲ ಎದುರಾಳಿಗಳು.

ಹರಿಯಾಣ ವಿಧಾನಸಭೆ ಚುನಾವಣೆ ಮತ ಎಣಿಕೆ ಮಂಗಳವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ಆರಂಭವಾಗಿದೆ. ಪ್ರಾಥಮಿಕವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ ಪಡೆದುಕೊಂಡಿದೆ. ಕಾಂಗ್ರೆಸ್‌ ಪಕ್ಷ ಕಾಂಗ್ರೆಸ್ 40, ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ.

Haryana Assembly Election 2024 Congress Ahead In 30 Seats In Haryana BJP At 18

ಹರ್ಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಸಹ ತಮ್ಮ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದರೆ ಮುಖ್ಯಮಂತ್ರಿ ಯಾರು? ಎಂಬ ಪ್ರಶ್ನೆ ಚರ್ಚೆಯ ವಿಷಯವಾಗಿದೆ.

ಐಎನ್‌ಎಲ್‌ಡಿ 2 ಮತ್ತು ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಚನೆ ಮಾಡಿದರೆ ಮುಖ್ಯಮಂತ್ರಿ ಯಾರಾಗಬೇಕು? ಎಂದು ಸಮೀಕ್ಷೆ ನಡೆಸಲಾಗಿತ್ತು. ಸಿವೋಟರ್ ಎಕ್ಸಿಟ್ ಪೋಲ್ ಫಲಿತಾಂಶದ ಪ್ರಕಾರ ಶೇಕಡಾ 30.8 ರಷ್ಟು ಜನರು ಭೂಪಿಂದರ್ ಸಿಂಗ್ ಹೂಡಾ ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಭೂಪಿಂದರ್ ಸಿಂಗ್ ಹೂಡಾ ಎರಡು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಸದ್ಯ ಅವರು ರಾಜ್ಯದ ವಿರೋಧ ಪಕ್ಷದ ನಾಯಕ. ಈ ಬಾರಿಯ ಚುನಾವಣೆಯಲ್ಲಿ ಅವರು ಗರ್ಹಿ ಸಂಪ್ಲಾ-ಕಿಲೋಯ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಭಾವನಾತ್ಮಕವಾಗಿ ಅವರು ಪ್ರಚಾರವನ್ನು ನಡೆಸಿದ್ದಾರೆ. "ನಿರ್ಣಾಯಕ ಯುದ್ಧವನ್ನು ನಡೆಸಲು ಜನರ ಅನುಮತಿಯನ್ನು ಪಡೆಯಲು ನಾನು ಜನರ ಬಳಿಗೆ ಬಂದಿದ್ದೇನೆ. ಈ ಯುದ್ಧದಲ್ಲಿ ನೀವು ನನ್ನನ್ನು ಬೆಂಬಲಿಸುತ್ತೀರಾ?" ಎಂದು ಭೂಪಿಂದರ್ ಸಿಂಗ್ ಹೂಡಾ ಜನರನ್ನು ಪ್ರಶ್ನೆ ಮಾಡಿ ಅವರ ಬೆಂಬಲ ಪಡೆದಿದ್ದಾರೆ.

ಬಿಜೆಪಿ ರಾಜ್ಯದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದರೆ ಅವರ ಸಂಪುಟದ ಎಲ್ಲಾ ಸಚಿವರು ಭಾರೀ ಹಿನ್ನಡೆ ಅನುಭವಿಸಿದ್ದಾರೆ.

ಚುನಾವಣಾ ಫಲಿತಾಂಶ ಸಂಪೂರ್ಣ ಪ್ರಕಟವಾಗುವ ಮುನ್ನವೇ ಹರಿಯಾಣ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿವೆ. "ನಾನು ದಣಿದಿಲ್ಲ ಹಾಗೂ ನಿವೃತ್ತಿಯಾಗಿಲ್ಲ" ಎಂದು ಭೂಪಿಂದರ್ ಸಿಂಗ್ ಹೂಡಾ ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಚುನಾವಣೆಗೆ ಕೆಲವೇ ದಿನಗಳು ಇರುವಾಗ ಕಾಂಗ್ರೆಸ್ ಸೇರಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಅವಕಾಶ ನೀಡಿದೆ. ಜುಲಾನಾ ಕ್ಷೇತ್ರದಿಂದ ಅವರು ಕಣಕ್ಕಿಳಿದಿದ್ದು, ಮತ ಎಣಿಕೆಯಲ್ಲಿ ಅವರು ಸಹ ಮುನ್ನಡೆ ಕಾಯ್ದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+