Haryana Assembly Election: ಹರಿಯಾಣ ಕಾಂಗ್ರೆಸ್ ಮುಂದಿನ "ಮುಖ್ಯಮಂತ್ರಿ" ಯಾರು
ಹರಿಯಾಣದಲ್ಲಿ ಹತ್ತು ವರ್ಷಗಳ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ ಸಿಕ್ಕಿದೆ. ಹರಿಯಾಣ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದಲ್ಲೂ ಬಿಜೆಪಿ ಅಧಿಕಾರ ನಡೆಸುತ್ತಿದೆ. ಬಿಜೆಪಿಯ ಹ್ಯಾಟ್ರಿಕ್ ಕನಸು ಭಗ್ನವಾಗಿದೆ. ಇದೀಗ ಚುನಾವಣಾ ಫಲಿತಾಂಶ ಪೂರ್ವ ಎಕ್ಸಿಟ್ ಪೋಲ್‌ನಲ್ಲಿ ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ಚುನಾವಣಾ ಫಲಿತಾಂಶಕ್ಕೆ ಇನ್ನು ಮೂರು ದಿನ ಮಾತ್ರ ಬಾಕಿ ಉಳಿದಿದೆ. ಈ ಸಂದರ್ಭದಲ್ಲಿ ಹರಿಯಾಣದ ಮುಂದಿನ ಕಾಂಗ್ರೆಸ್ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಶುರುವಾಗಿದೆ.
ಇನ್ನು ಹರಿಯಾಣದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಮಾತನಾಡಿರುವ ಹರಿಯಾಣದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರಾದ ಭೂಪಿಂದರ್ ಸಿಂಗ್ ಹೂಡಾ ಅವರು ಹರಿಯಾಣದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದ್ದಾರೆ. ಇನ್ನು ಹರಿಯಾಣದ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 90 ಇದ್ದು, ಮ್ಯಾಜಿಕ್ ನಂಬರ್ 46 ಆಗಿದೆ. ಬಹುತೇಕ ಎಕ್ಸಿಟ್‌ಪೋಲ್‌ಗಳು ಕಾಂಗ್ರೆಸ್‌ಗೆ ಈ ಬಾರಿ ಹರಿಯಾಣದಲ್ಲಿ 40ರಿಂದ 61 ಸ್ಥಾನಗಳು ಬರುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿವೆ. ಹೀಗಾಗಿ, ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಷಯವು ಗಂಭೀರವಾಗಿ ಚರ್ಚೆಯಾಗುತ್ತಿದೆ. ಇನ್ನು ಕಾಂಗ್ರೆಸ್‌ನ ಹಿರಿಯ ನಾಯಕರಾದ ಕುಮಾರಿ ಸೆಲ್ಜಾ ಮತ್ತು ರಣದೀಪ್ ಸುರ್ಜೇವಾಲಾ ಅವರು ಸಹ ಮುಖ್ಯಮಂತ್ರಿ ರೇಸ್‌ನಲ್ಲಿ ಇದ್ದಾರೆ.

ಕುಮಾರಿ ಸೆಲ್ಜಾ ಮುಂದಿನ ಮುಖ್ಯಮಂತ್ರಿ ?
ಕಾಂಗ್ರೆಸ್‌ನ ಹರಿಯಾಣದ ನಾಯಕಿ ಕುಮಾರಿ ಸೆಲ್ಜಾ ಅವರು ಹರಿಯಾಣದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಾಗಿ ಇದೆ. ಕಾಂಗ್ರೆಸ್ ಹೈಕಮಾಂಡ್‌ನ ಒಲವು ಇವರ ಮೇಲೆ ಇದೆ ಎನ್ನಲಾಗಿದೆ. ಶಾಸಕರ ಅಭಿಪ್ರಾಯವನ್ನೂ ಸಂಗ್ರಹಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇದೆಲ್ಲದಕ್ಕೂ ಅಕ್ಟೋಬರ್ 8ರಂದು ಚುನಾವಣಾ ಫಲಿತಾಂಶದ ನಂತರ ಸ್ಪಷ್ಟ ಉತ್ತರ ಸಿಗಲಿದೆ.
ಅಕ್ಟೋಬರ್ 8ಕ್ಕೆ ಚುನಾವಣಾ ಫಲಿತಾಂಶ ಪ್ರಕಟ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣದ ವಿಧಾನಸಭೆ ಚುನಾವಣೆ ಫಲಿತಾಂಶವು ಅಕ್ಟೋಬರ್ 8ರಂದು ಪ್ರಕಟವಾಗಲಿದೆ. ಈ ಎರಡೂ ವಿಧಾನಸಭೆಯ ಚುನಾವಣೆ ಫಲಿತಾಂಶ ಕುತೂಹಲ ಮೂಡಿಸಿದೆ. ಕಳೆದ ಹತ್ತು ವರ್ಷಗಳಿಂದ ಹರಿಯಾಣದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಮತ್ತೊಂದು ಕಡೆ 10 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಈ ಕಾರಣಕ್ಕೆ ಎರಡೂ ವಿಧಾನಸಭೆಯ ಚುನಾವಣಾ ಫಲಿತಾಂಶವು ಹೆಚ್ಚು ಕುತೂಹಲ ಪಡೆದುಕೊಂಡಿದೆ.

ಬಿಜೆಪಿಯ ಹ್ಯಾಟ್ರಿಕ್ ಕನಸು ಭಗ್ನ: ಹರಿಯಾಣದಲ್ಲಿ ಬಿಜೆಪಿ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿ ಇದೆ. ಆದರೆ, ಲೋಕಸಭೆ ಚುನಾವಣೆಗೂ ಮುನ್ನವೇ ಇಲ್ಲಿ ಬಿಜೆಪಿ ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿತ್ತು. ಈ ಕಾರಣಕ್ಕೆ ಎಚ್ಚೆತ್ತುಕೊಂಡಿದ್ದ ಬಿಜೆಪಿಯು ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಹಲವು ಮೇಜರ್ ಸರ್ಜರಿಗಳನ್ನು ಮಾಡಿತ್ತು. ಈ ಬಾರಿ ಹರಿಯಾಣ ರಾಜ್ಯದಲ್ಲಿ ಬಿಜೆಪಿಯು ಹ್ಯಾಟ್ರಿಕ್ ಕನಸು ಕಂಡಿತ್ತು. ಆದರೆ, ಅದು ಈಡೇರಿಲ್ಲ. ಹತ್ತು ವರ್ಷಗಳ ನಂತರ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಫಲಿತಾಂಶ ಪೂರ್ವ ಏಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ.












Click it and Unblock the Notifications