Haryana Assembly Election Polling 2024: ವಿನೇಶ್ ಫೋಗಟ್ ಸೇರಿ 1,031 ಅಭ್ಯರ್ಥಿಗಳ ಭವಿಷ್ಯ ಮತದಾರನ ಕೈಯಲ್ಲಿ

Haryana Assembly Election 2024: ಇಂದು (ಅಕ್ಟೋಬರ್‌ 05) ಹರಿಯಾಣ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಇಲ್ಲಿ ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆ ಇಟ್ಟುಕೊಂಡಿದೆ. ಮತ್ತೊಂದೆಡೆ ತುಂಬಾ ವರ್ಷಗಳ ಬಳಿಕ ಕಾಂಗ್ರೆಸ್ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ಭರವಸೆಯಲ್ಲಿದೆ. ಹಾಗಾದರೆ ಒಟ್ಟು ಎಷ್ಟು ಅಭ್ಯರ್ಥಿಗಳ ಭವಿಷ್ಯ ಮತದಾರರ ಕೈಯಲ್ಲಿದೆ ಎನ್ನುವ ಮಾಹಿತಿಯನ್ನು ತಿಳಿಯಿರಿ.

ಇನ್ನು ಹರಿಯಾಣ ವಿಧಾನಸಭಾ ಚುನಾವಣೆ ಮತದಾನ ಬೆಳಗ್ಗೆ 7ರಿಂದ ಆರಂಭವಾಗಿದ್ದು, ಸಂಜೆ 6ರ ವರೆಗೆ ನಡೆಯಲಿದೆ. ಅಕ್ಟೋಬರ್ 8ರಂದು ಫಲಿತಾಂಶ ಹೊರಬೀಳಲಿದೆ.

Haryana Assembly Election Polling 2024 1 031 candidates contesting including Vinesh Phogat

90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್ ಹಾಗೂ ಜೆಜೆಪಿಯ ದುಷ್ಯಂತ್ ಚೌತಾಲಾ ಸೇರಿದಂತೆ 1,031 ಅಭ್ಯರ್ಥಿಗಳ ಭವಿಷ್ಯ ಮತರದಾರರ ಕೈಯಲ್ಲಿದೆ.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 2.03 ಕೋಟಿ ಅರ್ಹ ಮತದಾರರಿದ್ದು, 1,031 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಈ ಪೈಕಿ ಯಾರ ಭವಿಷ್ಯ ಏನು ಎಂಬುದನ್ನು ಮತದಾರರು ನಿರ್ಧಾರ ಮಾಡಲಿದ್ದಾರೆ. ಒಟ್ಟು 2,03,54,350 ಮತದಾರರಿದ್ದಾದ್ದು, 1,031 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಈ ಪೈಕಿ 464 ಅಭ್ಯರ್ಥಿಗಳು ಪಕ್ಷೇತರು ಆಗಿದ್ದಾರೆ. ಇನ್ನು ರಾಜ್ಯದಲ್ಲಿ 20,632 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಬಿಜೆಪಿ, ಕಾಂಗ್ರೆಸ್, ಎಎಪಿ, ಐಎನ್ಎಲ್'ಡಿ-ಬಿಎಸ್'ಪಿ ಮತ್ತು ಜೆಜೆಪಿ-ಆಜಾದ್ ಸಮಾಜ ಪಕ್ಷ ಕಣದಲ್ಲಿರುವ ರಾಜಕೀಯ ಪಕ್ಷಗಳಾಗಿವೆ.

ಜುಲಾನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ಚಾರ್ಖಿ ದಾದ್ರಿಯ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಅವರು, "ಇದು ಹರಿಯಾಣಕ್ಕೆ ದೊಡ್ಡ ಹಬ್ಬ ಮತ್ತು ರಾಜ್ಯದ ಜನರಿಗೆ ಬಹಳ ದೊಡ್ಡ ದಿನವಾಗಿದೆ. ಪ್ರತಿಯೊಬ್ಬರೂ ಮತ ಚಲಾಯಿಸುವಂತೆ ರಾಜ್ಯದ ಜನತೆಗೆ ಮನವಿ ಮಾಡುತ್ತಿದ್ದೇನೆ. 10 ವರ್ಷಗಳ ಹಿಂದೆ ಭೂಪಿಂದರ್ ಹೂಡಾ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಕ್ರೀಡಾ ಕ್ಷೇತ್ರ ಚೆನ್ನಾಗಿತ್ತು. ಸಚಿವರಾಗುವುದು ನನ್ನ ಕೈಯಲ್ಲಿಲ್ಲ, ಹೈಕಮಾಂಡ್ ನಿರ್ಣಯ," ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+