Vinesh Phogat: ಮೋದಿ ಸರ್ಕಾರಕ್ಕೆ ಸೆಡ್ಡು ಹೊಡಿದಿದ್ದ ಕುಸ್ತಿಪಟು ವಿನೇಶ್ ಪೋಗಟ್‌ಗೆ ಗೆಲುವು
Haryana Assembly Election Results 2024: ಇಂದು (ಅಕ್ಟೋಬರ್ 08) ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಇನ್ನು ಜುಲಾನ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಗಾದರೆ ಎಷ್ಟು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚುನಾವಣೆ ಆಯೋಗದ ಪ್ರಕಾರ, ಪ್ರಕಾರ 11 ಸುತ್ತಿನ ಮತ ಎಣಿಕೆಯ ಬಳಿಕ ಜೂಲಾನಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ಕ್ಷೇತ್ರದಿಂದ 50,617 ಮತಗಳನ್ನಯ ಪಡೆಯುವ ಮೂಲಕ 6,050 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಂದು (ಅಕ್ಟೋಬರ್ 08) ಮತ ಎಣಿಕೆ ನಡೆದಿದೆ. ಇನ್ನೂ ಇಲ್ಲಿನ ಜುಲಾನ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ಗೆಲುವು ಸಾಧಿಸುವ ಮೂಲಕ ಕಮಲವನ್ನು ಮುದುಡಿ ಇಟ್ಟಿದ್ದಾರೆ. ಪ್ಯಾರೀಸ್‌ನಲ್ಲಿ ಒಲಿಂಪಿಕ್ಸ್‌ನಲ್ಲಿ ಕೈತಪ್ಪಿದ್ದು, ಜುಲನಾದಲ್ಲಿ ಇದೀಗ ಅವರ ಕೈಹಿಡಿದಿದೆ.
ಭಾರತದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ರಾಜಕೀಯ ಅಖಾಡದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅದು ಸಹ ಬಿಜೆಪಿ ನಾಯಕ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸುವ ಮೂಲಕ ಎಂಬುದು ವಿಶೇಷವಾಗಿದ.
ಇದಕ್ಕೂ ಮುನ್ನಾ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸೋತಿದ್ದರು. ಈ ಬಾರಿ ಒಲಿಂಪಿಕ್ಸ್‌ನಲ್ಲಿ 50 ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದ ಫೋಗಟ್ ಫೈನಲ್ ಪ್ರವೇಶಿಸಿದ್ದರು.
ಆದರೆ ದುರಾದೃಷ್ಟ, ಅಂತಿಮ ಹಣಾಹಣಿಗೂ ಮುನ್ನ ನಡೆದ ದೇಹ ತೂಕದ ಪರೀಕ್ಷೆಯಲ್ಲಿ ಅನುಮತಿಸಲಾದ ತೂಕಕ್ಕಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ಒಲಂಪಿಕ್ಸ್‌ನಲ್ಲಿ ಕುಸ್ತಿ ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟು ಹೆಚ್ಚಿನ ತೂಕವನ್ನು ಹೊಂದಿದ್ದರೆ ಅವರನ್ನು ಇಡೀ ಪಂದ್ಯಾವಳಿಯಿಂದ ಅನರ್ಹಗೊಳಿಸಲಾಗುತ್ತದೆ.
ಅದರಂತೆಯೇ 50 ಕೆ.ಜಿ ವಿಭಾಗದಲ್ಲಿ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ವಿನೇಶ್ ಫೋಗಟ್ ಅವರನ್ನು ಫೈನಲ್ ಪಂದ್ಯಕ್ಕೂ ಮುನ್ನ ಅನರ್ಹಗೊಳಿಸಲಾಗಿತ್ತು.
ಈ ಅನರ್ಹತೆಯ ಬೆನ್ನಲ್ಲೇ ಬೆಳ್ಳಿ ಪದಕಕ್ಕಾಗಿ ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹಲವಾರು ದಿನಗಳ ಕಾಯುವಿಕೆಯ ನಂತರ ಅಂತಿಮವಾಗಿ ಅವರ ಮನವಿಯನ್ನು ಸಿಎಎಸ್ ಕೂಡ ತಿರಸ್ಕರಿಸಿತ್ತು. ಇದರೊಂದಿಗೆ ಒಲಿಂಪಿಕ್ಸ್ ಅಖಾಡದಲ್ಲಿ ಪದಕ ಗೆಲ್ಲುವ ಅವರ ಬಹುಕಾಲದ ಕನಸು ಕೂಡ ಭಗ್ನವಾಯಿತು.
ಇದರ ಬೆನ್ನಲ್ಲೇ ಕುಸ್ತಿಗೆ ವಿದಾಯ ಹೇಳಿದ ಫೋಗಟ್ ರಾಜಕೀಯಕ್ಕೆ ಧುಮುಕಿದರು. ಅದರಂತೆಯೇ ಈ ಬಾರಿಯ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿನೇಶ್ ಫೋಗಟ್ ಅವರು ಬಿಜೆಪಿ ಪ್ರತಿಸ್ಪರ್ಧಿ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ರಾಜಕೀಯ ಕಣದಲ್ಗೆಲಿ ಗೆಲುವಿನ ನಗೆ ಬೀರಿದ್ದಾರೆ.












Click it and Unblock the Notifications