Haryana Election: ನಾಳೆ ಅಕ್ಟೋಬರ್ 5 ರಂದು ಎಲ್ಲ ಶಾಲೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ

ನವದೆಹಲಿ, ಅಕ್ಟೋಬರ್ 04: ಹರಿಯಾಣ ವಿಧಾನಸಭಾ ಚುನಾವಣೆ 2024 ಗೆ ಮತದಾನ ನಡೆಯಲು ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 5 ರಂದು ಚುನಾವಣೆ ನಡೆಯುವ ಪ್ರಯುಕ್ತ ರಾಜ್ಯ ಸರ್ಕಾರವು ಎರಡು ದಿನಗಳ ಕಾಲ ಎಲ್ಲ ವಿಧದ ಶಾಲೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಸುಗಮ ಮತದಾನದ ಖಚಿತತೆಗಾಗಿ ಸರ್ಕಾರ, ಚುನಾವಣೆ ಆಯೋಗ ಈ ನಿರ್ಧಾರ ಪ್ರಕಟಿಸಿವೆ.

ಇಂದು ಮತ್ತು ನಾಳೆ ಶನಿವಾರಕ್ಕೆ ಅನ್ವಯವಾಗುವಂತೆ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಸೋಮವಾರ ಎಂದಿನಂತೆ ತರಗತಿಗಳು ಆರಂಭವಾಗಲಿದೆ. ಈ ಕುರಿತು ಯಾವದೇ ಸಂದೇಹ ವಿದ್ದಲ್ಲಿ ವಿದ್ಯಾರ್ಥಿಗಳು, ಪೋಷಕರು ಶಾಲಾ ಆಡಳಿತ ಮಂಡಳಿ, ಮುಖ್ಯಸ್ಥರುನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Haryana Assembly Elections 2024 Two-Day Holiday Declared for All Schools

ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಇದನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ಇದೆ. ಇದರೊಂದಿಗೆ ರಾಜ್ಯ ಚುನಾವಣೆ ಆಯೋಗವು ಮತಗಟ್ಟೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಮತಪೆಟ್ಟಿಗೆ, ಮತಯಂತ್ರಗಳ ವ್ಯವಸ್ಥೆ ಮತ್ತು ಭದ್ರತಾ ವ್ಯವಸ್ಥೆಯನ್ನು ಖಚಿತ ಪಡಿಸಿಕೊಂಡಿದೆ.

ಪರೀಕ್ಷೆಗೆ ಅಕ್ಟೋಬರ್ 9ಕ್ಕೆ ಮುಂದೂಡಿಕೆ

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿ ಸಂಜೆ 6 ಗಂಟೆಗೆ ಪೂರ್ಣಗೊಳ್ಳಲಿದೆ. ಯಾವುದೇ ಅಹಿತಕರ ಘಟನೆ ಆಗದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಇತ್ತ ರಾಜ್ಯ ಶಿಕ್ಷಣ ನಿರ್ದೇಶನಾಲಯವು ಅಕ್ಟೋಬರ್ 4 ರಂದು ನಿಗದಿ ಮಾಡಿಕೊಂಡಿದ್ದ ಪರೀಕ್ಷೆಗಳನ್ನು ಅಕ್ಟೋಬರ್ 9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಹರಿಯಾಣದಲ್ಲಿ ಒಟ್ಟು 90 ವಿಧಾನಸಭಾ ಸೀಟುಗಳಿಗೆ ನಾಳೆ ಶನಿವಾರ ಮತದಾನ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಪ್ರಕಟಿಸಲಾಗುವುದು. ಅಂದಾಜಿನ ಪ್ರಕರಣ, ಒಟ್ಟು ಸುಮಾರು 9.5 ಲಕ್ಷ ಮಹಿಳಾ ಮತದಾರರ ಪೈಕಿ 4.52 ಲಕ್ಷ ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ ಎಂದು ಚುನಾವಣೆ ಆಯೋಗ ಮಾಹಿತಿ ನೀಡಿದೆ.

ಅಪಾರ ಪ್ರಯಾಣದಲ್ಲಿ ಹಣ ವಶಕ್ಕೆ

ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಪಾಲಿಸಲು ಕರೆ ನೀಡಿದರೂ ಸಹಿತ ಅನೇಕ ಕಡೆ ಉಲ್ಲಂಘನೆ ಆಗಿವೆ. ಚುನಾವಣೆ ನ್ಯಾಯಯುತ ನಡೆಸಲು ಖಚಿತಪಡಿಸಲು ಹರಿಯಾಣ ಪೊಲೀಸರು ಅಲರ್ಟ್ ಆಗಿದ್ದಾರೆ. ಅಲ್ಲಲ್ಲಿ ಪೊಲೀಸ್ ಮತ್ತು ಚುನಾವಣಾಧಿಕಾರಿಗಳು ಕಟ್ಟುನಿಟ್ಟಿನ ನಿಗಾ ಇರಿಸಿಕೊಳ್ಳಲಾಗಿದೆ. ರಾಜ್ಯದಾದ್ಯಂತ ವಿವಿಧ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಲಾಗಿತ್ತು. ಗುರುಗ್ರಾಮ್, ಫರಿದಾಬಾದ್ ಮತ್ತು ಅಂಬಾಲಾ ಮೂರು ಕ್ಷೇತ್ರದಲ್ಲಿ ಅಪಾರ ಪ್ರಮಾಣದ ಹಣ ಜಪ್ತಿ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+