'ಊಪರ್ ರಂಡ್ವಾ, ನೀಚೆ ಪಂಡ್ವಾ' : ಮೋದಿ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಆಕ್ಷೇಪಾರ್ಹ ಮಾತು
ಚಂಡೀಗಢ, ಸೆ 24: ಪ್ರಧಾನಿ ನರೇಂದ್ರ ಮೋದಿ ಮತ್ತು ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಟೀಕಿಸುವ ಭರದಲ್ಲಿ ಹರ್ಯಾಣ ಕಾಂಗ್ರೆಸ್ ಘಟಕದ ಅಧ್ಯಕ್ಷ (Udai Bhan) ಆಕ್ಷೇಪಾರ್ಹ ಪದವನ್ನು ಬಳಸಿದ್ದಾರೆ.
ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, "ಅಲ್ಲಿ, ರಂಡ್ವಾ (ಪತ್ನಿ ತೊರೆದವನು) ಇಲ್ಲಿ, ಪಂಡ್ವಾ (ಮದುವೆಯಾಗದವನು) ಆಡಳಿತ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮತ್ತು ಬಿಜೆಪಿಯಿಂದ ಇದಕ್ಕೆ ತೀವ್ರ ಟೀಕೆ ವ್ಯಕ್ತವಾದ ಹಿನ್ನಲೆಯಲ್ಲಿ ತನ್ನ ಹೇಳಿಕೆಯನ್ನು ಉದಯ್ ಭಾನು ಸಮರ್ಥಿಸಿಕೊಂಡಿದ್ದಾರೆ.

"ನಾನು ಹೇಳಿರುವುದರಲ್ಲಿ ಏನೂ ತಪ್ಪಿಲ್ಲ, ಮೋದಿಯವರು ಮದುವೆಯಾಗಿ ಪತ್ನಿಯನ್ನು ತೊರೆದಿದ್ದಾರೆ. ಮನೋಹರ್ ಖಟ್ಟರ್ ಅವರು ಬ್ರಹ್ಮಾಚಾರಿ. ನನ್ನ ಹೇಳಿಕೆಯು ಹರ್ಯಾಣ ಭಾಷೆಯ ಆಡುನುಡಿ. ನಾನು ಯಾರ ಹೆಸರನ್ನೂ ಉಲ್ಲೇಖಿಸಿಲ್ಲ, ಆದರೂ ನಾನು ಅವರಿಗೆ ಹೇಳಿದ್ದೆ ಎಂದಾದರೆ, ಆ ಹೇಳಿಕೆ ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸಲು ಸಿದ್ದ"ಎಂದು ಉದಯ್ ಭಾನ್ ಹೇಳಿದ್ದಾರೆ.
ಪ್ರಧಾನಿ ಮೋದಿ ಮತ್ತು ತಮ್ಮನ್ನು ಗುರಿಯಾಗಿಸಿಕೊಂಡು ಹರ್ಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಅವರ ಅವಹೇಳನಕಾರಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ದೇಶದ ಶತಮಾನದ ಹಳೆಯ ಪಕ್ಷಕ್ಕೆ ರಾಜ್ಯದ ಜನತೆ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.
"ಗೌರವಾನ್ವಿತ ಪ್ರಧಾನಿ ಹುದ್ದೆಯನ್ನು ಅರ್ಥಮಾಡಿಕೊಳ್ಳಲು ಕಾಂಗ್ರೆಸ್ ಮುಖಂಡರಿಗೆ ಸಾಧ್ಯವಾಗುವುದಿಲ್ಲ, ಮೋದಿ ದೇಶದ 140 ಕೋಟಿ ಜನರ ಮತ್ತು ನಾನು 3.25 ಕೋಟಿ ಜನರ ಪ್ರತಿನಿಧಿ. ಹರ್ಯಾಣದ ಜನತೆ ಕಾಂಗ್ರೆಸ್ ನಾಯಕನ ಹೇಳಿಕೆಗೆ ತಕ್ಕ ಉತ್ತರವನ್ನು ನೀಡಲಿದ್ದಾರೆ"ಎಂದು ಸಿಎಂ ಖಟ್ಟರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Haryana Congress president, Nehru Dynasty loyalist and Rahul Gandhi fan Udai Bhan abusing Prime Minister Narendra Modi on camera.
— Kanchan Gupta 🇮🇳 (@KanchanGupta) September 23, 2023
This kind of garbage flows from Congress leaders’ mouths like filth flowing through a gutter. pic.twitter.com/dRTQvY1Lgl
ANI ಸುದ್ದಿಸಂಸ್ಥೆ ಜೊತೆ ಮಾತನಾಡುತ್ತಾ"ಇದೊಂದು ದುರದೃಷ್ಟಕರ ಹೇಳಿಕೆಯಾಗಿದೆ. ಕಾಂಗ್ರೆಸ್ ಪಕ್ಷ ತನ್ನ ನಾಯಕನ ಹೇಳಿಕೆಗೆ ಕ್ಷಮೆಯಾಚಿಸಬೇಕು. ಇದು ನಾಚಿಕೆಗೇಡಿನ ಸಂಗತಿ. ಉದಯ್ ಭಾನ್ ಅಸಭ್ಯತೆಯ ಮಿತಿಗಳನ್ನು ಮೀರಿದ್ದಾರೆ. ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ನೋವಿನ ವಿಚಾರ" ಎಂದು ಹರ್ಯಾಣ ಬಿಜೆಪಿ ಘಟಕದ ಅಧ್ಯಕ್ಷ ಒ.ಪಿ.ಧನಕರ್ ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications