Haryana Election: ಹರಿಯಾಣ ವಿಧಾನಸಭೆ ಚುನಾವಣೆ ಮುಂದೂಡಿದ ಚುನಾವಣಾ ಆಯೋಗ

ಮಹತ್ವದ ಬೆಳವಣಿಗೆಯಲ್ಲಿ ಚುನಾವಣಾ ಆಯೋಗವು ಹರಿಯಾಣ ವಿಧಾನಸಭೆ ಚುನಾವಣೆ ಮತದಾನ ದಿನಾಂಕವನ್ನು ಮುಂದೂಡಿ ಆದೇಶ ಹೊರಡಿಸಿದೆ. ಈ ಮೊದಲ ವೇಳಾಪಟ್ಟಿಯಂತೆ ಹರಿಯಾಣ ವಿಧಾನಸಭೆ ಚುನಾವಣೆ ಮತದಾನ ಅಕ್ಟೋಬರ್ 1ರಂದು ನಡೆಯಬೇಕಿತ್ತು, ಇದೀಗ ಅದನ್ನು ಅಕ್ಟೋಬರ್ 5ಕ್ಕೆ ಮುಂದೂಡಿಕೆ ಮಾಡಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ. ಹಬ್ಬದ ಕಾರಣದಿಂದ ಚುನಾವಣೆಯನ್ನು ಮುಂದೂಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಅಕ್ಟೋಬರ್ 1 ರಂದು ನಡೆಯಲಿರುವ ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ಮೂರನೇ ಹಂತದ ಮತದಾನದ ದಿನಾಂಕದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಚುನಾವಣೆ ಆಯೋಗ ಹೇಳಿದ್ದು, ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ಚುನಾವಣಾ ಫಲಿತಾಂಶಗಳನ್ನು ಅಕ್ಟೋಬರ್ 8 ರಂದು ಪ್ರಕಟಿಸುವುದಾಗಿ ಹೇಳಿದೆ.

Haryana Elections Voting Postponed to Oct 5 Results on Oct 8

ಚುನಾವಣಾ ಆಯೋಗ ನೀಡಿರುವ ಅಧಿಸೂಚನೆಯಲ್ಲಿ ರಾಷ್ಟ್ರೀಯ ರಾಜಕೀಯ ಪಕ್ಷಗಳು, ರಾಜ್ಯ ರಾಜಕೀಯ ಪಕ್ಷ ಮತ್ತು ಅಖಿಲ ಭಾರತ ಬಿಷ್ಣೋಯಿ ಮಹಾಸಭಾವು ಹರ್ಯಾಣದ ಬಿಷ್ಣೋಯ್ ಸಮುದಾಯದ ಜನರು ಶತಮಾನಗಳ ಹಳೆಯ ಅಸೋಜ್ ಅಮವಾಸ್ಯೆ ಹಬ್ಬದ ಆಚರಣೆಯಲ್ಲಿ ಭಾಗವಹಿಸಲು ರಾಜಸ್ಥಾನಕ್ಕೆ ಸಾಮೂಹಿಕವಾಗಿ ತೆರಳಲಿದ್ದು ಮತದಾನಕ್ಕೆ ಅಡ್ಡಿಯಾಗುತ್ತದೆ ಎಂದು ನೀಡಿದ ಮನವಿ ಮೇರೆಗೆ ಈ ನಿರ್ಧಾರ ಮಾಡಲಾಗಿದೆ ಎಂದು ಹೇಳಿದೆ.

ಅಸೋಜ್ ಅಮಾವಾಸ್ಯೆ ಆಚರಣೆಯಲ್ಲಿ ಭಾಗವಹಿಸಲು ಲಕ್ಷಾಂತರ ಜನ ರಾಜಸ್ಥಾನಕ್ಕೆ ತೆರಳಿದರೆ ಮತದಾನದ ಅವಕಾಶ ಕಳೆದುಕೊಳ್ಳುವ ಸಾಧ್ಯತೆ ಇದೆ. ಇದರಿಂದ ಹರಿಯಾಣದ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಹರಿಯಾಣ ಬಿಜೆಪಿಯ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯ ವರೀಂದರ್ ಗಾರ್ಗ್ ಆಗಸ್ಟ್ 24 ರಂದು ನೀಡಿದ ಹೇಳಿಕೆಯಲ್ಲಿ ಅಕ್ಟೋಬರ್ 1 ರಂದು ಮತದಾನ ನಡೆದರೆ, ವಾರಾಂತ್ಯ ಇರುವ ಕಾರಣ ಜನ ಮತದಾನದಲ್ಲಿ ಭಾಗವಹಿಸದೇ ಇರಬಹುದು ಎಂದು ಹೇಳಿದ್ದರು.

ಗಾರ್ಗ್ ಅವರ ಹೇಳಿಕೆಯನ್ನು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಖಂಡಿಸಿದ್ದವು. ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಕ್ಷದ ನಿಲುವು ಈಗಾಗಲೇ ಸೋಲನ್ನು ಒಪ್ಪಿಕೊಂಡಿರುವುದನ್ನು ತೋರಿಸುತ್ತದೆ ಎಂದಿದ್ದಾರೆ.

ಚುನಾವಣಾ ಆಯೋಗ ಮೊದಲು ನಿಗದಿಪಡಿಸಿದ ದಿನಾಂಕದಲ್ಲೇ ಮತದಾನ ನಡೆಯಬೇಕು. ಹರಿಯಾಣದ ಜನ ಒಂದು ದಿನವೂ ಬಿಜೆಪಿ ಅಧಿಕಾರದಲ್ಲಿರುವುದನ್ನು ನೋಡಲು ಬಯಸುವುದಿಲ್ಲ ಭೂಪಿಂದರ್ ಹೂಡಾ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಆಮ್ ಆದ್ಮಿ ಪಕ್ಷದ ಹರಿಯಾಣ ಘಟಕವು ಚುನಾವಣೆಗೆ ಮೊದಲೇ, ಆಡಳಿತಾರೂಢ ಬಿಜೆಪಿ ಚುನಾವಣೆಯಲ್ಲಿ ಸೋಲುವುದನ್ನು ಖಚಿತಪಡಿಸಿದ್ದು, ಇದೀಗ ಬೇರೆ ಮಾರ್ಗಗಳನ್ನು ಹುಡುಕುತ್ತಿದೆ ಎಂದು ಆರೋಪಿಸಿದೆ. ಹರಿಯಾಣದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರ ಪಡೆಯುವ ಉತ್ಸಾಹದಲ್ಲಿದ್ದರೆ, ಕಾಂಗ್ರೆಸ್ ಬಿಜೆಪಿಯನ್ನು ಸೋಲಿಸಿ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+