ಸಾಮೂಹಿಕ ಅತ್ಯಾಚಾರ: ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ

ಗುರ್ಗಾಂವ್, ಮೇ 03: ಸಾಮೂಹಿಕ ಅತ್ಯಾಚಾರಕ್ಕೊಳಹಗಾಗಿ ಅವಮಾನ ಎದುರಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗಳೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರ್ಯಾಣದ ಗುರ್ಗಾಂವ್(ಗುರುಗ್ರಾಮ) ನಲ್ಲಿ ನಡೆದಿದೆ.

ಮೇ 1 ರಂದು 17 ವರ್ಷದ ಯುವತಿಯನ್ನು ಆಕೆಯ ಮನೆಯಿಂದಲೇ ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಆಕೆಯ ಮೇಲೆ ಎಂಟು ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ನಂತರ ಆಕೆಯನ್ನು ರಸ್ತೆಯಲ್ಲೆ ಬಿಟ್ಟು ಪರಾರಿಯಾಗಿದ್ದರು.

ಇತ್ತ ಮನೆಯಲ್ಲಿ ಮಗಳು ಕಾಣದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಆಕೆಯನ್ನು ಹುಡುಕಲು ಪ್ರಯತ್ನಿಸಿದಾಗ ಆಕೆ ರಸ್ತೆಯ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಾಣಿಸಿದೆ. ತಮ್ಮ ಮೇಲೆ ಅತ್ಯಾಚಾರ ನಡೆದಿರುವುದನ್ನು ಮರುದಿನ ಬೆಳಿಗ್ಗೆ ಸಂತ್ರಸ್ಥೆ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಳು.

Haryana girl commit suicide after she was raped by 8 men

ಆದರೆ ತಮ್ಮ ಮೇಲೆ ಅತ್ಯಾಚಾರ ಎಸಗಿದವರು ಪ್ರಭಾವಿ ಕುಟುಂಬದವರಾಗಿದ್ದು ಅವರ ಹೆಸರು ಹೇಳಿದರೆ ತನ್ನನ್ನು ಕೊಲ್ಲುವುದಾಗಿ ಹೆದರಿಸಿದ್ದಾರೆ ಎಂದು ಸಹ ಆಕೆ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಳು. ಇದಾಗೆ ಕೆಲವೇ ಸಮಯಗಳಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೋಕ್ಸೋ(Protection of Children from Sexual Offences) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಹರ್ಯಾಣದಲ್ಲಿ 19 ವರ್ಷದ ಯುವತಿಯ ಮೇಲೆ ಆಟೋ ರಿಕ್ಷಾ ಡ್ರೈವರ್ ಮತ್ತು ಆತನ ನಾಲ್ವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೂ ದಾಖಲಾಗಿದೆ. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+