ಮಹಾರಾಷ್ಟ್ರ, ಹರ್ಯಾಣ ಚುನಾವಣಾ ಪ್ರಚಾರದ ಚಿತ್ರಗಳು
ಬೆಂಗಳೂರು, ಅ. 10 : ಹರ್ಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ಚುನಾವಣೆ ಪ್ರಚಾರದ ಕಾವು ಏರುತ್ತಿದೆ. ಎರಡೂ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರ ಪಡೆಯಲಯ ಬಿಜೆಪಿ ಭರ್ಜರಿ ಪ್ರಚಾರ ಆರಂಭಿಸಿದ್ದರೆ, ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳಬೇಕು ಎಂದು ಪ್ರಯತ್ನ ನಡೆಸಿದೆ.
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂತಾದವರು ಪ್ರಚಾರ ಕಣಕ್ಕೆ ಧುಮುಕಿದ್ದಾರೆ. ಹರ್ಯಾಣದ 90 ಕ್ಷೇತ್ರಗಳು ಮತ್ತು ಮಹಾರಾಷ್ಟ್ರದ 288 ಸ್ಥಾನಗಳಿಗೆ ಅ.15ರಂದು ಮತಾದನ ನಡೆಯಲಿದೆ. [ಮೋದಿ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿ]
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಎನ್‌ಸಿಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡು ಚುನಾವಣೆ ಎದುರಿಸುತ್ತಿದ್ದರೆ, ಬಿಜೆಪಿ ಶಿವಸೇನೆಯ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡು ಚುನಾವಣೆ ಎದುರಿಸುತ್ತಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎರೆಡೂ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನ ನಡೆಸಿದೆ. ಹರ್ಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ಚುನಾವಣಾ ಪ್ರಚಾರದ ಚಿತ್ರಗಳು ಇಲ್ಲಿವೆ. [ಪಿಟಿಐ ಚಿತ್ರಗಳು]

ಪ್ರಧಾನಿ ನರೇಂದ್ರ ಮೋದಿ ಪ್ರಚಾರ
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಬ್ರಹ್ಮಪುರಿಯಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದರು. [ಮಹಾರಾಷ್ಟ್ರದಲ್ಲಿ ಬಿಜೆಪಿ-ಸೇನೆಯ ಮುಸುಕಿನ ಗುದ್ದಾಟ]

ಬಿಜೆಪಿ ಬೆಂಬಲಿಸಲು ಅಮಿತ್ ಶಾ ಕರೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಹರ್ಯಾಣದ ಪ್ರತಿಷ್ಠಿತ ಹಿಸರ್ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಪ್ರಚಾರ ನಡೆಸಿದರು.

ಗಮನ ಸೆಳೆದ ಮೋದಿ ಅಭಿಮಾನಿ
ಮಹಾರಾಷ್ಟ್ರದ ಬ್ರಹ್ಮಪುರಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮೋದಿ ಅಭಿಮಾನಯೊಬ್ಬನ ವೇಷಭೂಷಣ ಗಮನ ಸೆಳೆಯಿತು.

ಮಹಾರಾಷ್ಟ್ರದಲ್ಲಿ ಗೃಹ ಸಚಿವರ ಪ್ರಚಾರ
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಹಾರಾಷ್ಟ್ರದ ಥಾಣೆಯಲ್ಲಿ ಶುಕ್ರವಾರ ಪ್ರಚಾರ ನಡೆಸಿದರು.

ಪ್ರಚಾರದಲ್ಲಿ ಪಾಲ್ಗೊಂಡ ಬಿ.ಎಸ್.ಯಡಿಯೂರಪ್ಪ
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿ ಶುಕ್ರವಾರ ಪ್ರಚಾರ ನಡೆಸಿದರು.

ಮಹಾರಾಷ್ಟ್ರದಲ್ಲಿ ಯುವರಾಜನ ಪ್ರಚಾರ
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು.

ಎತ್ತಿನಗಾಡಿ ಏರಿ ಪ್ರಚಾರ
ಮಹಾರಾಷ್ಟ್ರದಲ್ಲಿ ಶಿವಸೇನೆ ಅಭ್ಯರ್ಥಿ ಅಜಿಂಕ್ಯಾ ಪಾಟೀಲ್ ಎತ್ತಿನ ಗಾಡಿ ಏರಿ ಚುನಾವಣಾ ಪ್ರಚಾರ ನಡೆಸಿದರು.












Click it and Unblock the Notifications