ಅತ್ಯಾಚಾರವಾದ ಗುರುತು ತೋರಿಸೆಂದು ಬಾಲಕಿ ಬಟ್ಟೆ ಬಿಚ್ಚಿಸಿದ ಪೊಲೀಸರು!

ಹರ್ಯಾಣ ಡಿಜಿಪಿಗೆ ಘಟನೆಯ ಬಗ್ಗೆ ಕಟ್ಟುನಿಟ್ಟಿನ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚಿಸಿದೆ. ಅದರ ಬೆನ್ನಲ್ಲೇ, ರಾಜ್ಯ ಸರ್ಕಾರವೂ ತನಿಖೆಗೆ ಆದೇಶಿಸಿದೆ.

ಚಂಡೀಗಢ, ಮೇ 2: ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ವಿಚಾರಣೆಗೊಳಪಡಿಸಿದ್ದ ಹರ್ಯಾಣ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮುಂದೆ ವಿವಸ್ತ್ರಳಾಗಿ ಅತ್ಯಾಚಾರವಾದ ಕುರುಹುಗಳನ್ನು ತೋರಿಸು ಎಂದು ಹೇಳಿ, ಆಕೆಯನ್ನು ವಿವಸ್ತ್ರಳಾಗಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯು ಕೈತಾಳ್ ನಗರ ಠಾಣೆಯಲ್ಲಿ ನಡೆದಿದೆ.

ಈ ಬಗ್ಗೆ ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವ 14 ವರ್ಷದ ಆ ಸಂತ್ರಸ್ಥೆಯ ಅಳಲನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ ಹರ್ಯಾಣ ಡಿಜಿಪಿಗೆ ಘಟನೆಯ ಬಗ್ಗೆ ಕಟ್ಟುನಿಟ್ಟಿನ ತನಿಖೆ ನಡೆಸುವಂತೆ ಸೂಚಿಸಿದೆ. ಅದರ ಬೆನ್ನಲ್ಲೇ, ರಾಜ್ಯ ಸರ್ಕಾರವೂ ತನಿಖೆಗೆ ಆದೇಶಿಸಿದೆ.

Haryana police ask rape survivor to strip; probe ordered

ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯನ್ನು ವಿಚಾರಣೆಗೊಳಿಸಲು ಆಕೆಯನ್ನು ಕೈತಾಳ ನಗರ ಠಾಣೆಗೆ ಕರೆಸಿಕೊಂಡ ಪೊಲೀಸರು, ಆಕೆಯನ್ನು ವಿವಸ್ತ್ರಳಾವಂತೆ ಹೇಳಿದ್ದಲ್ಲದೆ, ಅತ್ಯಾಚಾರವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಆಕೆಯ ಖಾಸಗಿ ಭಾಗಗಳನ್ನು ಮುಟ್ಟಿದ್ದಾರೆಂದು ಬಾಲಕಿಯ ಪರವಾಗಿ ಆಕೆಯ ತಂದೆ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನ ವಿಚಾರಣೆ ಕೈಗೊತ್ತಿಕೊಂಡ ನ್ಯಾಯಪೀಠ, ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತಲ್ಲದೆ, ಪ್ರಕರಣದ ತನಿಖೆ ನಡೆಸುವಂತೆ ಡಿಜಿಪಿಗೆ ಆದೇಶಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+