ನೂಹ್ ಹಿಂಸಾಚಾರ: ಇಲ್ಲಿಯವರೆಗೆ 141 ಬಂಧನ, 55 ಎಫ್‌ಐಆರ್
ಚಂಡಿಗಢ, ಆಗಸ್ಟ್. 05: ಹರಿಯಾಣದ ನುಹ್ ಜಿಲ್ಲೆಯಲ್ಲಿ ಸೋಮವಾರ ನಡೆದ ಹಿಂಸಾಚಾರ ಮತ್ತು ಗಲಭೆಗೆ ಸಂಬಂಧಿಸಿದಂತೆ ಈವರೆಗೆ 141 ಜನರನ್ನು ಬಂಧಿಸಲಾಗಿದೆ ಮತ್ತು 55 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಎರಡು ಗುಂಪುಗಳ ನಡುವೆ ಭುಗಿಲೆದ್ದ ಹಿಂಸಾಚಾರದಲ್ಲಿ ಇಬ್ಬರು ಪೊಲೀಸ್ ಹೋಂಗಾರ್ಡ್‌ಗಳು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 88 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತಷ್ಟು ಮಾಹಿತಿ ನೀಡಿದ್ದಾರೆ. "ಧಾರ್ಮಿಕ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 55 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು 141 ಜನರನ್ನು ಬಂಧಿಸಲಾಗಿದೆ ಮತ್ತು ಘರ್ಷಣೆಯಲ್ಲಿ 88 ಜನರು ಗಾಯಗೊಂಡಿದ್ದಾರೆ" ಎಂದಿದ್ದಾರೆ.

ಇನ್ನು, ನುಹ್‌ನಲ್ಲಿನ ಘರ್ಷಣೆಯ ನಂತರ ಗುರುಗ್ರಾಮ್ ಮತ್ತು ಪಕ್ಕದ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 27 ಎಫ್‌ಐಆರ್‌ಗಳನ್ನು ದಾಖಲಿಸಿ 38 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗುರುಗ್ರಾಮ್ ಪೊಲೀಸರು ತಿಳಿಸಿದ್ದಾರೆ.
"ಗುರುಗ್ರಾಮ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಾವು 27 ಎಫ್‌ಐಆರ್‌ಗಳನ್ನು ದಾಖಲಿಸಿದ್ದೇವೆ ಮತ್ತು 38 ಜನರನ್ನು ಬಂಧಿಸಿದ್ದೇವೆ. ನಾವು 60 ಜನರನ್ನು ಬಂಧನದಲ್ಲಿ ಇರಿಸಿದ್ದೇವೆ" ಎಂದು ಸಹಾಯಕ ಪೊಲೀಸ್ ಕಮಿಷನರ್ (ಗುರುಗ್ರಾಮ್) ವರುಣ್ ಕುಮಾರ್ ಧಹಿಯಾ ಶುಕ್ರವಾರ ಎಎನ್‌ಐಗೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸೋಮವಾರ ಧಾರ್ಮಿಕ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಲ್ಲಿ ಇಬ್ಬರು ಹೋಂಗಾರ್ಡ್‌ಗಳು ಗುಂಡಿಗೆ ಬಲಿಯಾಗಿದ್ದು, ಸುಮಾರು ಹನ್ನೆರಡು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರದ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಆರೋಪಿಸಿರುವ ಹರಿಯಾಣ ಗೃಹ ಸಚಿವ ಅನಿಲ್ ವಿಜ್, ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

"ಆರೋಪಿಗಳನ್ನು ಯಾರನ್ನು ಬಿಡಲಾಗುವುದಿಲ್ಲ. ಹಿಂಸಾಚಾರದ ಮಾಸ್ಟರ್ ಮೈಂಡ್‌ಗೆ ಇದಕ್ಕೆ ಸರಿಯಾಗಿ ಶಿಕ್ಷೆಯಾಗಲಿದೆ. ಸಾರ್ವಜನಿಕ ಆಸ್ತಿ ಹಾನಿಗೆ ಗಲಭೆಕೋರರೆ ಪಾವತಿಸಬೇಕಾಗುವುದು" ಎಂದು ಗೃಹ ಸಚಿವ ಅನಿಲ್ ವಿಜ್ ಎಚ್ಚರಿಸಿದ್ದಾರೆ. ಜೊತೆಗೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ನಾನು ಎಲ್ಲರಿಗು ಮನವಿ ಮಾಡುತ್ತೇನೆ. ಶಾಂತಿ ಸುವ್ಯವಸ್ಥೆಯನ್ನು ನೋಡಿಕೊಳ್ಳಲು ರಾಜ್ಯ ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರ ಅರೆಸೇನಾ ಪಡೆಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ" ಎಂದಿದ್ದಾರೆ.
"ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಆಕ್ಷೇಪಾರ್ಹ ಅಥವಾ ಹಿಂಸೆಯ ವಿಷಯವನ್ನು ಪೋಸ್ಟ್ ಮಾಡದಂತೆ ನಾನು ಜನರನ್ನು ವಿನಂತಿಸುತ್ತೇನೆ. ನಾವು ತನಿಖಾ ಸಮಿತಿಯನ್ನು ರಚಿಸಿದ್ದೇ. ಸಮಿತಿಯು ಸಾಮಾಜಿಕ ಮಾಧ್ಯಮದಲ್ಲಿನ ಪ್ರತಿಯೊಂದು ಚಟುವಟಿಕೆಯ ಮೇಲೆ ಕಣ್ಣಿಟ್ಟಿದೆ. ವಿಷಯವನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ" ಎಂದು ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.












Click it and Unblock the Notifications