Haryana: ಹರಿಯಾಣದಲ್ಲಿ ಕುರ್ಚಿ ಏರುವ ಮುನ್ನವೇ ಸಿಎಂ ಸೈನಿಗೆ ಕೊಲೆ ಬೆದರಿಕೆ!

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ನಿನ್ನೆ ಎನ್‌ಸಿಪಿ ಹಿರಿಯ ನಾಯಕನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಇತ್ತ ಹರಿಯಾಣದಲ್ಲಿ ಇನ್ನೇನು ಹೊಸ ಸರ್ಕಾರ ರಚನೆಗೆ ಮುಂದಾಗಿರುವಾಗಲೇ ಸಿಎಂ ಕುರ್ಚಿ ಏರಲಿರುವ ನಾಯಕನಿಗೆ ಕೊಲೆ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ.

ಹರಿಯಾಣ ನೂತನ ಸಿಎಂ ಆಗಿ ಕುರ್ಚಿ ಏರಲಿರುವ ನಯಾಬ್ ಸಿಂಗ್ ಸೈನಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ವಾಟ್ಸಾಪ್‌ ಗ್ರೂಪ್‌ನಲ್ಲಿ ಸೈನಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಒಬ್ಬನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Haryana s New CM Nayab Singh Saini Received Death Threats

ಆರೋಪಿ ಹರಿಯಾಣದ ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದ ಅಜ್ಮೀರ್ ಎಂದು ತಿಳಿದುಬಂದಿದೆ. ಅಕ್ಟೋಬರ್ 8ರಂದು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಹೊರಬಿದ್ದಿತ್ತು. ಇದೇ ದಿನ ಆರೋಪಿಯು ವಾಟ್ಸಾಪ್ ಗ್ರೂಪ್‌ನಲ್ಲಿ ಸಿಎಂ ನಯಾಬ್ ಸಿಂಗ್ ಸೈನಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿ ಹ್ಯಾಟ್ರಿಕ್‌ ಗೆಲುವನ್ನು ಸಾಧಿಸಿದೆ. ಇದರ ಬೆನ್ನಲ್ಲೇ ನೂತನ ಸರ್ಕಾರ ರಚನೆಗೆ ಬಿಜೆಪಿ ಭರದ ಸಿದ್ಧತೆಯಲ್ಲಿ ತೊಡಗಿದೆ. ಇದೇ ಅಕ್ಟೋಬರ್‌ 15ರಂದು ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ ಎಂದು ಬಿಜೆಪಿ ಘೋಷಿಸಿದೆ.

Haryana s New CM Nayab Singh Saini Received Death Threats

ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್‌ ಸೈನಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈಗಾಗಲೇ ಬಿಜೆಪಿ ಪ್ರಮಾಣವಚನ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸುತ್ತಿದೆ. ಹರಿಯಾಣದಲ್ಲಿ ಗೆಲುವು ಸಾಧಿಸಿದ ಬಳಿಕ ಸೈನಿ ಅವರು ದೆಹಲಿಗೆ ತೆರಳಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಬಂದಿದ್ದರು.

ಬಿಜೆಪಿ ಪ್ರಮಾಣ ವಚನ ಸಮಾರಂಭಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನೂ ರಚಿಸಲಾಗಿದೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಆಡಳಿತವಿರುವ ವಿವಿಧ ರಾಜ್ಯಗಳು ಮುಖ್ಯಮಂತ್ರಿಗಳು ಹಾಗೂ ಪಕ್ಷದ ಪ್ರಮುಖರು ಭಾಗಿಯಾಗುವ ನಿರೀಕ್ಷೆ ಇದೆ.

ಈ ಮೊದಲೇ ಹಿಂದುಳಿದ ವರ್ಗಗಳಿಂದ ಹಿನ್ನೆಲೆಯಿರುವ ನಯಾಬ್ ಸಿಂಗ್ ಸೈನಿ ಅವರು ಗೆದ್ದರೆ, ಸಿಎಂ ಆಗೋದು ಖಚಿತ ಎಂದೇ ಚುನಾವಣೆಯ ಸಂದರ್ಭದಲ್ಲಿ ಮಾತುಗಳು ಕೇಳಿಬಂದಿದ್ದವು. ಹಾಗಾಗಿ ಸೈನಿ ಅವರೇ ಸಿಎಂ ಆಗುವುದು ಅಧಿಕೃತವಾಗಿದೆ.

ಹರಿಯಾಣದಲ್ಲಿ ನೂತನ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಅಕ್ಟೋಬರ್ 15ರಂದು ಪಂಚಕುಲದಲ್ಲಿ ನಡೆಯಲಿದೆ. ಪಂಚಕುಲದಲ್ಲಿ ಈ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಕನ್ಫರ್ಮ್‌ ಆಗಿದೆ.

ಕಾಂಗ್ರೆಸ್‌ಗೆ ಮುಖಭಂಗ: ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಹರಿಯಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದವು. ಮತ ಎಣಿಕೆ ಆರಂಭದಲ್ಲೂ ಕಾಂಗ್ರೆಸ್‌ ಮುನ್ನಡೆ ಸಾಧಿಸಿತ್ತು. 90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಅರ್ಧಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ನಗೆಬೀರಿತ್ತು. ಬಹುತೇಕ ಕಾಂಗ್ರೆಸ್‌ ಗೆಲ್ಲುವುದು ಖಚಿತ ಎನ್ನುವಷ್ಟರಲ್ಲಿ ಅಂಕಿಗಳು ತಲೆಕೆಳಗಾಗಿ ಅಂತಿಮವಾಗಿ ಬಿಜೆಪಿ ಗೆದ್ದು ಬೀಗಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+