• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎರಡನೇ ಅಲೆಯಲ್ಲಿ ದುಪ್ಪಟ್ಟಾಗಲಿದೆ ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ

|

ನವದೆಹಲಿ, ಏಪ್ರಿಲ್ 21: ಕೊರೊನಾ ಮೊದಲ ಅಲೆಗಿಂತ ಎರಡನೇ ಅಲೆ ಅತಿ ಪರಿಣಾಮಕಾರಿಯಾಗಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಗರಿಷ್ಠವಾಗಿರುತ್ತದೆ. ಎರಡನೇ ಅಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯಕ್ಕೆ ಭಾರತದಲ್ಲಿ 21,57,000 ಸಕ್ರಿಯ ಪ್ರಕರಣಗಳಿವೆ. ಕಳೆದ ವರ್ಷಕ್ಕಿಂತ ಈ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಎಚ್ಚರಿಕೆ ನೀಡಿದ್ದಾರೆ.

ಕೋವಿಶೀಲ್ಡ್‌ ಲಸಿಕೆ; ರಾಜ್ಯ ಸರ್ಕಾರಗಳಿಗೆ 400 ರೂ, ಖಾಸಗಿ ಆಸ್ಪತ್ರೆಗಳಿಗೆ 600 ರೂಕೋವಿಶೀಲ್ಡ್‌ ಲಸಿಕೆ; ರಾಜ್ಯ ಸರ್ಕಾರಗಳಿಗೆ 400 ರೂ, ಖಾಸಗಿ ಆಸ್ಪತ್ರೆಗಳಿಗೆ 600 ರೂ

ಮಂಗಳವಾರ 259170 ಜನರಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದರೆ, ಇದಾಗಿ 24 ಗಂಟೆಗಳಲ್ಲೇ ಮತ್ತೊಮ್ಮೆ ಕೊರೊನಾವೈರಸ್ ಸೋಂಕು ಹೊಸ ದಾಖಲೆ ಬರೆದಿದೆ. ಒಂದೇ ಒಂದು ದಿನದಲ್ಲಿ 295041 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಬುಧವಾರ ದೇಶದಲ್ಲಿ 295,041 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 2,023 ಸಾವುಗಳು ಸಂಭವಿಸಿವೆ. ಈ ಎರಡೂ ಅಂಕಿ ಸಂಖ್ಯೆಗಳು ದೇಶದಲ್ಲಿ ಕೊರೊನಾ ಆರಂಭವಾದಾಗಿನಿಂದಲೂ ಗರಿಷ್ಠ ಪ್ರಕರಣವಾಗಿದೆ.

ಕಳೆದ 24 ಗಂಟೆಗಳಲ್ಲಿ 2,023 ಜನರು ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದರೆ, 1,67,457 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ. ಈವರೆಗೂ 1,32,76,039 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,82,553ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ದೇಶದಲ್ಲಿ 21,57,538 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
In second wave, India has twice the number of 2020's active Covid-19 cases says Govt,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X