ದ್ವೇಷ ಭಾಷಣ ಕೇಸ್: ಸಮಾಜವಾದಿ ಶಾಸಕ ಅಜಂ ಖಾನ್ ಅನರ್ಹ
ಲಕ್ನೋ, ಅಕ್ಟೋಬರ್ 28: ಉತ್ತರ ಪ್ರದೇಶದಲ್ಲಿ ದ್ವೇಷದ ಭಾಷಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿಧಾನಸಭಾ ಸ್ಥಾನವನ್ನು ಉತ್ತರ ಪ್ರದೇಶ ಸ್ಪೀಕರ್ ಶುಕ್ರವಾರ ಅನರ್ಹಗೊಳಿಸಿದ್ದಾರೆ. ಇದರಿಂದ ರಾಂಪುರ ಕ್ಷೇತ್ರದ ಸ್ಥಾನವು ತೆರವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ 2019ರ ದ್ವೇಷ ಭಾಷಣಕ್ಕಾಗಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದಾಗ ಗುರುವಾರ ಸ್ವಯಂಚಾಲಿತವಾಗಿ ಅನರ್ಹಗೊಳಿಸಲಾಯಿತು. ಅವರ ಸ್ಥಾನ ಖಾಲಿಯಾಗಿದೆ ಎಂದು ಘೋಷಿಸುವ ಮೂಲಕ ಅನರ್ಹತೆಯನ್ನು ಔಪಚಾರಿಕಗೊಳಿಸಲಾಯಿತು.
2013ರ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ 74 ವರ್ಷದ ನಾಯಕ ತನ್ನ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಏಕೆಂದರೆ 2013 ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕ್ರಿಮಿನಲ್ ಮೊಕದ್ದಮೆಯಲ್ಲಿ ಎಂಎಲ್ಎ, ಎಂಎಲ್ಸಿ ಅಥವಾ ಎಂಪಿ ತಪ್ಪಿತಸ್ಥರಾಗಿದ್ದರೆ ಮತ್ತು ಕನಿಷ್ಠ ಎರಡು ವರ್ಷಗಳ ಕಾಲ ಜೈಲುವಾಸ ಅನುಭವಿಸಿದರೆ ಅವರು ವಿಧಾನಸಭೆ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು: ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ರಾಂಪುರದಿಂದ ಅಜಂ ಖಾನ್ ಗೆದ್ದರು, ಆದರೆ ಮಾರ್ಚ್ 2022ರಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದ ನಂತರ ಅವರು ಈ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಎಸ್‌ಪಿ ನಾಯಕ ಅಜಂ ಖಾನ್, ಜೈಲಿನಲ್ಲಿದ್ದಾಗ 2022 ರ ವಿಧಾನಸಭಾ ಚುನಾವಣೆಯಲ್ಲಿ ರಾಂಪುರದಿಂದ ಗೆದ್ದಿದ್ದರು. ಅಜಂ ಖಾನ್ ದ್ವೇಷ ಭಾಷಣದ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ನೀಡಿದ ನಂತರ ಜಾಮೀನು ನೀಡಲಾಯಿತು. ಈ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಒಂದು ವಾರದ ಸಮಯವನ್ನು ನೀಡಲಾಯಿತು.
ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದಲ್ಲಿ ಅಜಂ ಖಾನ್ ದ್ವಿತೀಯ ದರ್ಜೆ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ರಾಂಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ಬಲವಾದ ಅನುಯಾಯಿಗಳನ್ನು ಹೊಂದಿದ್ದಾರೆ. 2017ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಮಾಜವಾದಿ ನಾಯಕ ಅಜಂ ಖಾನ್ ವಿರುದ್ಧ ಭ್ರಷ್ಟಾಚಾರ ಮತ್ತು ಕಳ್ಳತನದಿಂದ ಹಿಡಿದು ಭೂಕಬಳಿಕೆಯವರೆಗೆ ಒಟ್ಟು 87 ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ದ್ವೇಷದ ಭಾಷಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿತ್ತು. ಇದಾಗಿ ಒಂದು ವಾರದಲ್ಲಿ ಅಜಂ ಖಾನ್ ರಿಗೆ ಶಿಕ್ಷೆ ವಿಧಿಸಲಾಯಿತು. ಯಾವುದೇ ಕ್ರಮ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡಿದರೆ ನ್ಯಾಯಾಲಯದ ನಿಂದನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿತ್ತು.











Click it and Unblock the Notifications