ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ದ್ವೇಷ ಭಾಷಣ ಪ್ರಕರಣ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ದೋಷಿ

|
Google Oneindia Kannada News

ಲಕ್ನೋ, ಅ. 27: 2019 ರಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ವಿರುದ್ಧದ ಹೇಳಿಕೆಗಳ ಮೇಲಿನ ದ್ವೇಷ ಭಾಷಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರು ತಪ್ಪಿತಸ್ಥರೆಂದು ಘೋಷಿಸಲಾಗಿದೆ.

ಉತ್ತರ ಪ್ರದೇಶದ ರಾಂಪುರದ ನ್ಯಾಯಾಲಯವು ಶೀಘ್ರದಲ್ಲೇ ಅಖಿಲೇಶ್ ಯಾದವ್ ಪಕ್ಷದ ನಾಯಕ ಅಜಂ ಖಾನ್‌ಗೆ ಶಿಕ್ಷೆಯನ್ನು ಪ್ರಕಟಿಸಲಿದೆ.

ಗುಜರಾತ್ ವಿಧಾನಸಭೆ ಚುನಾವಣೆ: ಸಿಎಂ ಭೂಪೇಂದ್ರ ಪಟೇಲ್, ಬಿಜೆಪಿ ಮುಖ್ಯಸ್ಥರೊಂದಿಗೆ ಅಮಿತ್ ಶಾ ಸಭೆಗುಜರಾತ್ ವಿಧಾನಸಭೆ ಚುನಾವಣೆ: ಸಿಎಂ ಭೂಪೇಂದ್ರ ಪಟೇಲ್, ಬಿಜೆಪಿ ಮುಖ್ಯಸ್ಥರೊಂದಿಗೆ ಅಮಿತ್ ಶಾ ಸಭೆ

ಯೋಗಿ ಆದಿತ್ಯನಾಥ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದ ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಅಜಂ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Hate Speech Case: SP leader Azam Khan convicted

ಅಪರಾಧ ಸಾಬೀತಾದ ನಂತರ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಕಾಲ ಜೈಲು ಶಿಕ್ಷೆಗೆ ಗುರಿಯಾದರೆ ಹಿರಿಯ ನಾಯಕ ರಾಜ್ಯ ವಿಧಾನಸಭೆಯ ಸದಸ್ಯತ್ವವನ್ನು ಕಳೆದುಕೊಳ್ಳಬೇಕಾಗುತ್ತದೆ.

ವಂಚನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಅಜಂ ಖಾನ್ ಈ ವರ್ಷದ ಆರಂಭದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇವರು ಸುಮಾರು ಎರಡು ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದರು.

ಉತ್ತರ ಪ್ರದೇಶದ ರಾಂಪುರದಿಂದ ಸಂಸದರಾಗಿರುವ ಸಮಾಜವಾದಿ ನಾಯಕ ಅಜಂ ಖಾನ್ ವಿರುದ್ಧ ಭ್ರಷ್ಟಾಚಾರ ಮತ್ತು ಕಳ್ಳತನ ಸೇರಿದಂತೆ ಸುಮಾರು 90 ಪ್ರಕರಣಗಳು ದಾಖಲಾಗಿವೆ.

English summary
Hate Speech Case: senior Samajwadi Party leader Azam Khan found guilty in a hate speech case against Uttar Pradesh Yogi Adityanath in 2019. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X