HD Deve Gowda: ರಾಜ್ಯಕ್ಕೆ 25 ಟಿಎಂಸಿ ಅಡಿಯಷ್ಟು ನೀರು ಮೀಸಲಿಡಿ: ಹೆಚ್‌ ಡಿ ದೇವೇಗೌಡ

ನವದೆಹಲಿ, ಫೆಬ್ರವರಿ22: ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರೊಂದಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಚರ್ಚೆ ನಡೆಸಿದ್ದಾರೆ. ನವದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮಾಜಿ ಪ್ರಧಾನಿಗಳು, ಸಚಿವರ ಜತೆ ಮುಖ್ಯವಾಗಿ ರಾಜ್ಯಕ್ಕೆ ಸಂಬಂಧಪಟ್ಟ ಅಂತಾರಾಜ್ಯ ನೀರಾವರಿ ವಿವಾದಗಳು, ರಾಜ್ಯ ಎದುರಿಸುತ್ತಿರುವ ಜಲ ಸಂಕಷ್ಟ, ರಾಜ್ಯದ ನೀರಾವರಿ ಯೋಜನೆಗಳಿಗೆ ತ್ವರಿತ ಅನುಮೋದನೆ ಮತ್ತು ಅಗತ್ಯ ಅನುದಾನ ನೀಡುವ ವಿಷಯಗಳ ಬಗ್ಗೆ ಸುದೀರ್ಘ ಮಾತುಕತೆ ನಡೆಸಿದರು.

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್‌ ಡಿ ದೇವೇಗೌಡ ಅವರು, ಬೇಡಿಕೆಗಳ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಶಕ್ತಿ ಸಚಿವರು; ಈ ಬಗ್ಗೆ ತಾವೇ ಖುದ್ದು ಪರಿಶೀಲನೆ ನಡೆಸುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯದ ಜಲ ವಿವಾದಗಳ ಬಗ್ಗೆ ಸಚಿವರು ಮಾಜಿ ಪ್ರಧಾನಿಗಳಿಂದ ಸಾಕಷ್ಟು ಮಾಹಿತಿ ಪಡೆದುಕೊಂಡರು. ಅಲ್ಲದೆ, ಗೋದಾವರಿ - ಕೃಷ್ಣಾ - ಕಾವೇರಿ ನದಿಗಳ ಜೋಡಣೆಯ ಯೋಜನೆಯಲ್ಲಿ ರಾಜ್ಯಕ್ಕೆ 25 ಟಿಎಂಸಿ ಅಡಿಯಷ್ಟು ನೀರು ಹಂಚಿಕೆ ಮಾಡಬೇಕು ಎಂದು ದೇವೇಗೌಡರು ಮಾಡಿರುವ ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿದರು.

HD Deve Gowda discusses irrigation project with Union Minister CR Patil

ರೈತ ವಿರೋಧಿ ಕಾಂಗ್ರೆಸ್ ಸರ್ಕಾರ: ನಿಖಿಲ್‌ ಕುಮಾರಸ್ವಾಮಿ

ಬೇಸಿಗೆ ಆರಂಭದಲ್ಲಿ ರಾಜ್ಯದಲ್ಲಿ ರೈತರಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿದೆ, ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದಿದೆ. ಇಲ್ಲಿಯವರೆಗೂ ರೈತರನ್ನ ಕಡೆಗಣಿಸಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ತಿಂಗಳ ಫೆಬ್ರವರಿಆರಂಭದಲ್ಲಿ ಶ್ರೀರಂಗಪಟ್ಟಣದಲ್ಲಿ ವಿದ್ಯುತ್ ಅಭಾವದ ಕಾರಣದಿಂದ ರೈತರು ಸೆಸ್ಕ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಈಗ ಅದೇ ಘಟನೆ ಚಾಮರಾಜನಗರ ನಗರದ ಹನೂರಿನಲ್ಲಿ ನಡೆದಿರುವುದು ಕಾಂಗ್ರೆಸ್ ಸರ್ಕಾರ ಮತ್ತೊಂದು ಗ್ಯಾರಂಟಿ ಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರೈತರ ಬಗ್ಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಹೆಜ್ಜೆಗಳು ಕೇವಲ ಅಸಮರ್ಥವಾಗಿದೆ ಬಿರು ಬೇಸಿಗೆ ಆರಂಭದಲ್ಲೇ ಅನ್ನದಾತರನ್ನ ಕಡೆಗಣಿಸಿದೆ. ಇನ್ನು ಮುಂದಿನ ದಿನಗಳಲ್ಲಿ ಪರಿಸ್ಥಿತಿ ಯಾವ ಮಟ್ಟಕ್ಕೆ ತಲುಪಬಹುದು ಎಂದು ಆತಂಕ ಎಲ್ಲರಲ್ಲೂ ಕಾಡುತ್ತಿದೆ. ಈಗಾಗಲೇ ಈ ಸರ್ಕಾರ ರೈತವಿರೋಧಿ ಎಂದು ಜನತೆಗೆ ಅರ್ಥವಾಗಿದೆ. ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನತೆಗೆ ಅನ್ನ ದೊರಕುವುದಿಲ್ಲ.ಅನ್ನದಾತರ ಕನಸಿಗೆ ಕೊಳ್ಳಿ ಇಡುವ ಕಾಂಗ್ರೆಸ್ ಸರ್ಕಾರದ ಹೆಜ್ಜೆಗಳು ಕೇವಲ ರೈತವಿರೋಧಿ ಎನ್ನುವುದು ಜನತೆಗೆ ಈಗಾಗಲೇ ಅರ್ಥವಾಗಿದೆ.ಮಾನ್ಯ ಸಿಎಂ ಸಿದ್ದರಾಮಯ್ಯನವರೇ, ಕೇಂದ್ರದ ರೈತ ಸ್ನೇಹಿ ಬಜೆಟ್‌ನನ್ನು ವಿರೋಧಿಸುವುದನ್ನು ಬಿಟ್ಟರೇ, ರಾಜ್ಯದಲ್ಲಿ ರೈತ ಪರ ಕೆಲಸ ಮಾಡಿರುವುದು ನೋಡಲೇ ಇಲ್ಲ ಎಂದು ಕಿಡಿಕಾರಿದರು.

ಬೇಸಿಗೆ ಶುರುವಾಗುವ ಮೊದಲೇ ಈ ಸರ್ಕಾರ ಎಚ್ಚೆತ್ತುಕೊಳ್ಳಬೇಕು, ರೈತರ ಸಮುದಾಯವನ್ನು ಸಂಕಷ್ಟಕ್ಕೆ ಸಿಲುಕದಂತೆ ಯೋಜನೆಯನ್ನು ರೂಪಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+