HD Deve Gowda: ಕುಟುಂಬವೊಂದಕ್ಕೆ ಕುಡಿಯುವ ನೀರಿಗೆ 20000 ರೂ ಬೇಕು: ರಾಜ್ಯಸಭೆಯಲ್ಲಿ ಧ್ವನಿಯೆತ್ತಿದ ದೇವೇಗೌಡ
ನವದೆಹಲಿ, ಡಿಸೆಂಬರ್ 05: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಬೆಂಗಳೂರಿನ ನೀರಿನ ತೀವ್ರ ಸಮಸ್ಯೆ ಬಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ನಾಲ್ಕು ಜನರ ಕುಟುಂಬವೊಂದು ತಿಂಗಳಿಗೆ 20,000 ರೂ.ಗಳನ್ನು ನೀರಿಗಾಗಿ ಖರ್ಚು ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಧ್ವನಿಯೆತ್ತಿದ್ದಾರೆ.
ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ, ಭಾರತದ ಮಾಹಿತಿ ತಂತ್ರಜ್ಞಾನ ರಾಜಧಾನಿ ಆಗಿರುವ ಬೆಂಗಳೂರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು. ಬೆಂಗಳೂರು ನಗರ ಅಗಾಧವಾಗಿ ಬೆಳೆಯುತ್ತಿದೆ. ಉದ್ಯೋಗ ಅರಸಿ ದೇಶದ ಎಲ್ಲಾ ಮೂಲೆಗಳಿಂದ ಜನರು ಅಲ್ಲಿಗೆ ಹೋಗುತ್ತಿದ್ದಾರೆ. ಎಲ್ಲರಿಗೂ ಆಶ್ರಯ ನೀಡುವ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಗಂಭೀರವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದ್ದಾರೆ.

1.45 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿಗೆ 16 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಆದರೆ, ನಗರದ ಬೇಡಿಕೆಗೆ ಹೋಲಿಸಿದರೆ ಈ ನೀರು ಬಹಳ ಕಡಿಮೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ. ಒಂದು ಟ್ಯಾಂಕರ್ ನೀರಿಗೆ ₹3000 ತೆರಬೇಕಿದೆ. ಇದು ಎಷ್ಟು ಅನ್ಯಾಯ ಎಂದರೆ ಕೇವಲ ನಾಲ್ಕು ಜನರಿರುವ ಒಂದು ಕುಟುಂಬ ಪ್ರತೀ ತಿಂಗಳು ನೀರಿಗಾಗಿ ₹20,000 ಖರ್ಚು ಮಾಡಬೇಕಿದೆ. ಇದು ಕಳವಳಕಾರಿ ಎಂದು ಹೆಚ್ ಡಿ ದೇವೇಗೌಡ್ರು ಆತಂಕ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಎಲ್ಲರೂ ರಾಜಕೀಯ ಬದಿಗಿಟ್ಟು ಮೇಕೆದಾಟು ಯೋಜನೆ ಬಗ್ಗೆ ಬೆಂಬಲ ನೀಡಬೇಕಿದೆ. ಈ ಯೋಜನೆ ಕಾರ್ಯಗಾಯವಾದರೆ ಈ ಸಮಸ್ಯೆಗೆ ಮುಕ್ತಿ ದೊರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹೇಳಿದರು.
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದರು. ಬೆಂಗಳೂರಿನ ನೀರಿನ ಬವಣೆ ನೀಗಿಸಬೇಕಾದರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ. ಎಲ್ಲಾ ರಾಜಕೀಯ ಬದಿಗಿಟ್ಟು ಈ ಯೋಜನೆಗೆ ಬೆಂಬಲ ಕೊಡಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮನವಿ ಮಾಡಿದರು.
ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಮೇಕೆದಾಟು ಯೋಜನೆಗಾಗಿ ಕೆಲಸ ಮಾಡಿವೆ. ಆದರೆ ಇಲ್ಲಿಯವರೆಗೂ ಯಶಸ್ಸು ಸಿಕ್ಕಿಲ್ಲ. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕೋರಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications