ಅಮಿತ್ ಶಾ ಅವರೊಂದಿಗೆ 45 ನಿಮಿಷಗಳ ಕಾಲ ಚರ್ಚೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ, ಜನವರಿ17: ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಬುಧವಾರ ಸಂಜೆ ಮಹತ್ವದ ಮಾತುಕತೆ ನಡೆಸಿದರು.

ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಮಿತ್ ಶಾ ಅವರ ಜತೆ ಮೈತ್ರಿಯ ವಿಷಯವೂ ಸೇರಿ ರಾಜ್ಯ ರಾಜಕೀಯದ ಬಗ್ಗೆ ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ದೀರ್ಘ ಸಮಾಲೋಚನೆ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಕ್ಷೇತ್ರ ಹಂಚಿಕೆಯ ಸೇರಿದಂತೆ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್ ಡಿ ಎ ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಗಳೆಲ್ಲವನ್ನು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜತೆ ಕೂತು ಚರ್ಚೆ ನಡೆಸಿದ ನಂತರ ಅಂತಿಮಗೊಳಿಸೋಣ ಎಂದು ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಹೇಳಿದರು.

HD Kumaraswamy Held A Discussion With Amit Shah For 45 Minutes

ರಾಜ್ಯದ 28 ಲೋಕಸಭೆ ಕ್ಷೇತ್ರಗಳೆಲ್ಲವನ್ನೂ ಎನ್ ಡಿ ಎ ಮೈತ್ರಿಕೂಟ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಮಂತ್ರಿ ಆಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಒಟ್ಟಾಗಿ ಮಾಡೋಣ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ಅತ್ಯಂತ ವಿಶ್ವಾಸ, ನಂಬಿಕೆಯ ಆಧಾರದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ಧಾರಗಳನ್ನು ಮಾಡೋಣ ಎಂದು ಶಾ ಅವರು ಕುಮಾರಸ್ವಾಮಿ ಅವರಿಗೆ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಒಂದು ವರ್ಷ ತುಂಬುವುದಕ್ಕೆ ಮೊದಲೇ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ. ಜನರು ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಜನರ ಗಮನಕ್ಕೆ ಪರಿಣಾಮಕಾರಿಯಾಗಿ ತರುವ ನಿಟ್ಟಿನಲ್ಲಿ ಇಬ್ಬರೂ ನಾಯಕರು ಚರ್ಚೆ ನಡೆಸಿದರು.

ಮಾತುಕತೆಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರದ ಬಗ್ಗೆಯೂ ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ. ರಾಜ್ಯ ಸರಕಾರ ಈವರೆಗೂ ಬಿಡಿಗಾಸನ್ನು ಬರಪೀಡಿತ ಜನರಿಗೆ ಕೊಟ್ಟಿಲ್ಲ ಎನ್ನುವುದು ಅವರಿಗೆ ಗೊತ್ತಿದೆ. ಈ ಬಗ್ಗೆ ಶಾ ಅವರಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.

ಮುಕ್ಕಾಲು ಗಂಟೆ ಕಾಲ ನಡೆದ ಈ ಸಭೆಯಲ್ಲಿ ಗೃಹ ಸಚಿವರ ಜತೆ ಎಲ್ಲಾ ವಿಷಯಗಳನ್ನು ಮುಕ್ತವಾಗಿ ಚರ್ಚೆ ಮಾಡಿದ್ದೇನೆ. ಕೇಂದ್ರದಲ್ಲಿ ಎನ್ ಡಿ ಎ ಮೈತ್ರಿಕೂಟ ಅಧಿಕಾರಕ್ಕೆ ಬಂದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದರು.

ಈ ವೇಳೆ ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರೂ ಭಾಗಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+