ಹೌದು ಮುಡಾ ಸೈಟ್ ನನಗೂ ಕೊಟ್ಟವ್ರೆ : ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ನವದೆಹಲಿ, ಜುಲೈ 27: ರಾಜ್ಯ ರಾಜಕೀಯದಲ್ಲಿ ಮೂಡಾ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದ್ದು, ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಸ್ಥರ ಹೆಸರು ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮೂಡಾ ಪ್ರಕರಣದಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮೂಡಾದಲ್ಲಿ ಸೈಟ್ ಪಡೆದಿರುವ ಕುರಿತು ಮೈತ್ರಿ ನಾಯಕರು ಹೆಸರುಗಳನ್ನ ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಈ ಕುರಿತು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಮಾತನಾಡಿ, ಈ ನಿವೇಶನವನ್ನು ಅವರು ನನಗೆ ಧರ್ಮಕ್ಕೆ ಕೊಡುತ್ತಿಲ್ಲ. ನಾನು 34,000 ರೂ. ಹಣ ಕಟ್ಟಿದ್ದೇನೆ. ಆ ಹಣ ಕಟ್ಟಿ 40 ವರ್ಷಗಳೇ ಆಗಿದೆ. ಇದು ನಿಜವಾದ ಪರಿಸ್ಥಿತಿ ಎಂದು ಹೇಳಿದ್ದಾರೆ.

HD Kumaraswamy Lashed Out At Siddaramaiah Saying That He Had Also Given Me Muda site

ಮೂಡಾದಲ್ಲಿ ತಮಗೂ ನಿವೇಶನವಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ನೀಡಿರುವ ಹೇಳಿಕೆ ಬಗ್ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ನನಗೆ ನಿವೇಶನ ಕೊಟ್ಟಿದ್ದಾರೆ ಎಂದಿದ್ದಾರೆ ಅವರಿಬ್ಬರು. ಆದರೆ, ಈವರೆಗೆ ಆ ನಿವೇಶನವನ್ನೇ ನನಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

2006ರಲ್ಲಿಯೇ ನಾನು ಸಿಎಂ ಆಗಿದ್ದೆ. ಅಧಿಕಾರ ದುರುಪಯೋಗ ಮಾಡಿಕೊಳ್ಳಬೇಕು ಎಂದು ನನಗೆ ಅನ್ನಿಸಿದಿದ್ದರೆ ಆಗಲೇ ಆ ನಿವೇಶನವನ್ನು ನನ್ನ ಹೆಸರಿಗೆ ಬರೆಸಿಕೊಳ್ಳಬಹುದಾಗಿತ್ತು. ಆದರೆ, ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಳ್ಳಲಿಲ್ಲ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ಈ ನಿವೇಶನದ ಬಗ್ಗೆ ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೂ ತನಿಖೆ ನಡೆಯುತ್ತಿದೆ. ಲೋಕಾಯುಕ್ತ, ಸಿಐಡಿ ತನಿಖೆಗಳು ನಡೆದು ಹೋಗಿವೆ. 500 ನಿವೇಶನಗಳನ್ನು ದೇವೇಗೌಡರು ಪಡೆದುಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗಿತ್ತು. ಕೊನೆಗೆ ತನಿಖೆಯಲ್ಲಿ ಒಂದು ನಿವೇಶನವನ್ನಷ್ಟೇ ಪಡೆದುಕೊಂಡಿದ್ದಾರೆ ಎಂದು ಗೊತ್ತಾಯಿತು ಎಂದು ಸಚಿವರು ಮಾಹಿತಿ ನೀಡಿದರು.

2012ನೇ ಇಸವಿಯಲ್ಲಿ ನಾನು ಮೂಡಕ್ಕೆ ಪತ್ರ ಬರೆದು ಹಂಚಿಕೆ ಮಾಡಿರುವ ನಿವೇಶನ ಕೊಡಿ ಎಂದು ಮನವಿ ಮಾಡಿದ್ದೆ. 2017ರಲ್ಲಿ ಮತ್ತೊಂದು ಪತ್ರವನ್ನೂ ಬರೆದಿದ್ದೆ. ನಾನು ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ. ಅಂಥ ಆಲೋಚನೆಯನ್ನೂ ಮಾಡಲಿಲ್ಲ. ನಾನೆಂದೂ ಸಿದ್ದರಾಮಯ್ಯ ಅವರಂತೆ ಅಧಿಕಾರ ದುರುಪಯೋಗ ಮಾಡಿಕೊಳ್ಳಲಿಲ್ಲ ಎಂದು ಸಿದ್ದರಾಮಯ್ಯಗೆ ಟಾಂಗ್‌ ನೀಡಿದರು ಕುಮಾರಸ್ವಾಮಿ ಅವರು.

ಇವತ್ತು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆರ್ಭಟ ನೋಡಿದೆ. ಈ ವ್ಯಕ್ತಿ ಯಾವ ಹಿನ್ನೆಲೆಯಿಂದ ಬಂದಿರುವುದು ಎನ್ನುವುದು ನನಗೆ ಗೊತ್ತಿದೆ. ಬೆಂಗಳೂರು ನಗರದಲ್ಲಿ ಈ ಮಹಾಶಯ ಏನೆಲ್ಲಾ, ಯಾವೆಲ್ಲಾ ಭ್ರಷ್ಟಾಚಾರ ಎಸಗಿದ್ದಾರೆ ಎಂದು ತೆಗೆದರೆ ಈ ವ್ಯಕ್ತಿಯ ಅಸಲಿ ಬಂಡವಾಳ ಗೊತ್ತಾಗುತ್ತದೆ. ಬೆಂಗಳೂರು ಸುತ್ತಮುತ್ತಾ ಮಾಡಿದ್ದಾರಲ್ಲ.. ಅದನ್ನಷ್ಟೇ ತೆಗೆದಿಟ್ಟರೆ ಸಾಕು ಎಂದು ಕುಮಾರಸ್ವಾಮಿ ಅವರು ಭೈರತಿ ಸುರೇಶ್‌ ಗೆ ತಿರುಗೇಟು ಕೊಟ್ಟರು.

ನನ್ನ ಹೆಸರಿನಲ್ಲಿರುವ ನಿವೇಶನವನ್ನು ಬೇಕಿದ್ದರೆ ನೀವೇ ನಿಮ್ಮ ಮಗನಿಗೋ ಅಥವಾ ನಿಮ್ಮ ಧರ್ಮಪತ್ನಿ ಹೆಸರಿಗೋ ಅಥವಾ ನಿಮ್ಮ ಪರಮಾಪ್ತ ಭೈರತಿ ಸುರೇಶ್ ಹೆಸರಿಗೋ ಇಲ್ಲವೇ ಯಾವುದಾದರೂ ಅನಾಥಾಶ್ರಮಕ್ಕೋ ಬರೆದುಕೊಟ್ಟುಬಿಡಿ. ನನಗೆ ಯಾವ ತಕರಾರೂ ಇಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಹೆಚ್‌ ಡಿ ಕುಮಾರಸ್ವಾಮಿ ಅವರಯ ಟಾಂಗ್‌ ಕೊಟ್ಟರು.

ನಿಂಗಪ್ಪ ಸ್ವರ್ಗದಿಂದ ಬಂದು ಸಿದ್ದರಾಮಯ್ಯಗೆ ಅರ್ಜಿ ಕೊಟ್ಟರಾ?

16/2 ಮಾಡಿದ ಮೇಲೆ ಪುನಾ ನಿವೇಶನವನ್ನು ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ನಿಂಗಪ್ಪ ಎನ್ನುವ ವ್ಯಕ್ತಿ ಜಮೀನನ್ನು ಡಿನೋಟಿಫಿಕೇಷನ್ ಮಾಡಿ ಎಂದು ಸ್ವರ್ಗದಿಂದ ಇಳಿದುಬಂದು ನಿಮಗೆ ಅರ್ಜಿ ಕೊಟ್ಟಿದ್ದರಾ ಸಿದ್ದರಾಮಯ್ಯ ಅವರೇ? ನಿಂಗಪ್ಪ ಸತ್ತ ಮೇಲೆ ಡಿನೋಟಿಫಿಕೇಶನ್ ಮಾಡಲು ಅರ್ಜಿ ಸಲ್ಲಿಸಲಾಗಿದೆ. 2001, 2003ರಲ್ಲಿ‌ ಸಿಎಂ ಪತ್ನಿಗೆ ಮೈಸೂರಿನ ವಿಜಯನಗರದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. 2005ರಲ್ಲಿ ಕೃಷಿಭೂಮಿ ಎಂದಿದ್ದ ಭೂಮಿಯನ್ನು ಇವರು ಹೇಗೆ ಖರೀದಿ ಮಾಡಿದರು? ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ಮಾಡದೆಯೇ ಭೂ ಪರಿವರ್ತನೆ ಮಾಡಿಕೊಟ್ಟರು. ಅದು ಹೇಗೆ ಮಾಡಿಕೊಟ್ಟರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಆಗಲೂ ಈ ರಾಜ್ಯದ ಉಪ ಮುಖ್ಯಮಂತ್ರಿ ಆಗಿದ್ದರು. ಆಗ ಈ ಮಹಾನುಭಾವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು. ಈ ಹಗರಣವನ್ನು ಬಯಲು ಮಾಡಿದ್ದು, ಎಲ್ಲಾ ದಾಖಲೆಗಳನ್ನು ಹೊರಗೆ ಬಿಟ್ಟಿದ್ದು ಮುಖ್ಯಮಂತ್ರಿ ಕುರ್ಚಿಯ ಟವೆಲ್ ಹಾಕಿದ ಮಹಾಶಯರು ಎಂದು ಯಾರ ಹೆಸರನ್ನೂ ಹೇಳದೆ ಕಾಂಗ್ರೆಸ್‌ ಪಕ್ಷದ ಒಳರಾಜಕೀಯದ ಬಗ್ಗೆ ಸ್ಫೋಟಕ ವಿಷಯವನ್ನು ಬಹಿರಂಗ ಮಾಡಿದರು ಅವರು.

ನಿಮ್ಮವರೇ ಕೊಟ್ಟ ದಾಖಲೆಗಳನ್ನು ವಿಪಕ್ಷಗಳು ಚರ್ಚೆ ಮಾಡತ್ತಿವೆ. ಸರಕಾರಿ ಭೂಮಿಯನ್ನು ನೀವೇ ಕಬಳಿಕೆ ಮಾಡಿ, ಈಗ 64 ಕೋಟಿ ಪರಿಹಾರ ಕೊಡಿ ಎಂದು ಯಾವ ನೈತಿಕತೆ ಮೇಲೆ ಕೇಳುತ್ತಿದ್ದೀರಿ ಸಿದ್ದರಾಮಯ್ಯನವರೇ..? ಇಂತಹ ಆರೋಪ ಹೊತ್ತು ಯಾವ ನೈತಿಕತೆ ಇಟ್ಟುಕೊಂಡು ಸಿಎಂ ಕುರ್ಚಿಯಲ್ಲಿ ಕೂತಿದ್ದೀರಿ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+