PM Modi Birthday: ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ವಿಶ್!

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನ ಮಂತ್ರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಇಡೀ ಜಗತ್ತಿನ ಗಣ್ಯರೆಲ್ಲ ಪ್ರಧಾನಿ ಮೋದಿ ಅವರಿಗೆ ಶುಭಾಶಯವನ್ನು ಕೋರಿದ್ದಾರೆ. ಹಾಗೇ ದೇಶದ ಪ್ರಮುಖ ನಾಯಕರು ಶುಭ ಕೋರಿದ್ದಾರೆ. ಇದೇ ಹೊತ್ತಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಸಂದೇಶ ಕಳುಹಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ದೋಸ್ತಿ ಏರ್ಪಡುತ್ತಿರುವ ಸಮಯಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ವಿಶ್ ಕುತೂಹಲ ಕೆರಳಿಸಿದೆ. ಪ್ರಧಾನಿ ಮೋದಿ ಅವರ ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಒಡನಾಟ ಉತ್ತಮವಾಗಿ ಇದೆ. ಆದರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ದೋಸ್ತಿ ಮಾತುಕತೆ ನಡೆಯುವ ಸಮಯಕ್ಕೆ ಹೊಸ ಸಂಚಲನ ಸೃಷ್ಟಿಯಾಗಿದೆ. ಹೀಗಿದ್ದಾಗ ಪ್ರಧಾನಿ ಮೋದಿ ಹುಟ್ಟುಹಬ್ಬ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಸ್ಪೆಷಲ್ ವಿಶ್ ಮಾಡಿದ್ದಾರೆ.

special-birthday-wish-to-pm-narendra-modi

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ...

ಇನ್ನು ಸಾಮಾಜಿಕ ಜಾಲತಾಣ ಎಕ್ಸ್ ಅಂದರೆ ಈ ಹಿಂದಿನ ಟ್ವಿಟ್ಟರ್‌ನಲ್ಲಿ ಪೋಸ್ಟ್ ಹಾಕಿ ಕುಮಾರಸ್ವಾಮಿ ಅವರು ಪ್ರಧಾನಿಗೆ ಬರ್ತ್‌ಡೇ ವಿಶ್ ಮಾಡಿದ್ದಾರೆ. ಈ ಸ್ಪೆಷಲ್ ಟ್ವೀಟ್‌ನ ಶುರುವಲ್ಲಿ ಇಂಗ್ಲಿಷ್‌ನಲ್ಲಿ ಬರೆದುಕೊಂಡಿರುವ ಎಚ್‌ಡಿ ಕುಮಾರಸ್ವಾಮಿ ಅವರು, 'ನಮ್ಮ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಾರತದ ಪ್ರಜೆಗಳಿಗೆ ಸೇವೆ ಸಲ್ಲಿಸಲು ದೇವರು ನಿಮಗೆ ಉತ್ತಮ ಆರೋಗ್ಯ & ದೀರ್ಘಾಯುಷ್ಯ ನೀಡಲಿ. ನಿಮ್ಮ ನಾಯಕತ್ವದಲ್ಲಿ ನಮ್ಮ ದೇಶವು ಇನ್ನಷ್ಟು ಎತ್ತರಕ್ಕೆ ತಲುಪಲೆಂದು ನಾನು ಬಯಸುತ್ತೇನೆ' ಎಂದು ವಿಶ್ ಮಾಡಿದ್ದಾರೆ.

ಜೊತೆಗೆ ಕನ್ನಡದಲ್ಲಿ, 'ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.' ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿಶೇಷ ಸಂದೇಶ ಕಳುಹಿಸಿದ್ದಾರೆ. ಈ ಮೂಲಕ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಪೆಷಲ್ ವಿಶ್ ಮಾಡಿದ್ದಾರೆ. ಹಾಗೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕೂಡ ವಿಶೇಷವಾಗಿ ಶುಭಕೋರಿದ್ದಾರೆ.

ಒಟ್ನಲ್ಲಿ ಇಡೀ ಜಗತ್ತು ಪ್ರಧಾನಿ ಮೋದಿ ಅವರಿಗೆ ವಿಶೇಷ ಕಳುಹಿಸಿದ್ದು, ದೇಶದ ವಿವಿಧ ಪಕ್ಷಗಳ ಗಣ್ಯರು ಕೂಡ ಶುಭ ಕೋರಿದ್ದಾರೆ. ಅದರಲ್ಲೂ ಕರ್ನಾಟಕದಿಂದ ಕೂಡ ವಿಶೇಷ ಸಂದೇಶ ನೀಡಲಾಗಿದೆ. ಹಾಗೇ ಮುಂದೆಯೂ ದೇಶದ ಪ್ರಜೆಗಳ ಸೇವೆ ಮಾಡಲು ಪ್ರಧಾನಿ ಮೋದಿ ಅವರಿಗೆ ಉತ್ತಮ ಆರೋಗ್ಯವನ್ನು ದೇವರು ನೀಡಲಿ ಎಂದಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪ್ರಧಾನಿ ಮೋದಿ ಅವರಿಗೆ ವಿಶೇಷವಾಗಿ ಶುಭಕೋರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+