ಅವರು (ಕರಾಚಿ) ಮನೇಲಿದ್ದಾರೆ, ಮಲಗಿದ್ದಾರೆ : ದಾವೂದ್ ಹೆಂಡತಿ
ನವದೆಹಲಿ, ಆಗಸ್ಟ್ 22 : "ಅವರು ಮನೇಲಿದ್ದಾರೆ, ಮಲಗಿದ್ದಾರೆ" ಎಂಬ ಮೂರು ಪದಗಳ ಹೇಳಿಕೆ ಸುದ್ದಿವಲಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ. ಈ ಹೇಳಿಕೆ ನೀಡಿದ್ದು ಮತ್ತಾರೂ ಅಲ್ಲ. 1993ರ ಮುಂಬೈ ಸರಣಿ ದಾಳಿಯ ಪ್ರೈಮ್ ಆರೋಪಿ ದಾವೂದ್ ಇಬ್ರಾಹಿಂ ಹೆಂಡತಿ ಮಹಜಬೀನ್. ಆಕೆ ಹೇಳಿಕೆ ನೀಡಿದ್ದು ಪಾಕಿಸ್ತಾನದಿಂದ!
ದೇಶದ ಪ್ರಮುಖ ಸುದ್ದಿ ವಾಹಿನಿ, ಭಾರತೀಯ ಕಾಲಮಾನ ಶನಿವಾರ 12.24ಕ್ಕೆ ಮಾಡಿದ ಕರೆಗೆ ದಾವೂದ್ ಹೆಂಡತಿ ಮಹಜಬೀನ್ ಶೇಖ್ ಮೇಲಿನಂತೆ ಉತ್ತರಿಸಿದ್ದಾರೆ. ಮೋಸ್ಟ್ ವಾಂಟೆಡ್ ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲೇ ಇರುವುದು ಇದರಿಂದ ಸಾಬೀತಾಗಿದೆ. ಪಾಕಿಸ್ತಾನಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಮತ್ತಿನ್ನೇನು ಬೇಕು?
1993ರ ಸರಣಿ ಸ್ಫೋಟ ನಡೆಸಿ 257 ಜನರ ಹತ್ಯೆಗೆ ಕಾರಣನಾಗಿದ್ದ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಅಡಗಿದ್ದಾನೆ ಎಂಬ ಭಾರತ ಸರಕಾರದ ಹೇಳಿಕೆಯನ್ನು ಪಾಕಿಸ್ತಾನ ಸರಕಾರ ಅಲ್ಲಗಳೆಯುತ್ತಲೇ ಬಂದಿತ್ತು. ಭಾರತದಲ್ಲಿರುವ ಪಾಕಿಸ್ತಾನದ ರಾಜಭಾರಿ ಅಬ್ದುಲ್ ಬಾಸಿತ್ ಈ ಹೇಳಿಕೆಯನ್ನು ನೀಡುತ್ತಲೇ ಬಂದಿದ್ದರು.

ಹಿಂದೂಸ್ತಾನ್ ಟೈಮ್ಸ್ ನಡೆಸಿದ ತನಿಖಾ ವರದಿಯ ಪ್ರಕಾರ, ದಾವೂದ್, ಆತನ ಹೆಂಡತಿ ಮಹಜಬೀನ್, ಮಗ ಮೊಯೀನ್ ನವಾಜ್ ಮತ್ತು ಹೆಣ್ಣುಮಕ್ಕಳಾದ ಮಹರುಖ್, ಮೆಹರೀನ್ ಮತ್ತು ಮಾಝಿಯಾ ಪಾಕಿಸ್ತಾನದ ಕರಾಚಿಯ ಶ್ರೀಮಂತ ಬಡಾವಣೆಯಲ್ಲಿ ನೆಲೆಸಿದ್ದಾರೆ. ದಾವೂದ್ ಮಗಳು ಮಹರುಖ್ ಪಾಕ್ ಮಾಜಿ ಕ್ರಿಕೆಟರ್ ಜಾವೇದ್ ಮಿಯಾಂದಾಗ್ ಮಗನನ್ನು ವರಿಸಿದ್ದಾಳೆ.
ಸೋಮವಾರ ಭಾರತ ಮತ್ತು ಪಾಕಿಸ್ತಾನದ ಭದ್ರತಾ ಸಲಹೆಗಾರರು ನವದೆಹಲಿಯಲ್ಲಿ ಭೇಟಿ ಮಾಡುತ್ತಿರುವ ಹಿನ್ನೆಲೆಯಲ್ಲಿ, ದಾವೂದ್ ಪಾಕಿಸ್ತಾನದಲ್ಲೇ ಇರುವ ಮಾಹಿತಿ ಭಾರೀ ಮಹತ್ವ ಪಡೆದುಕೊಂಡಿದೆ. ದಾವೂದ್ ನನ್ನು ಹಸ್ತಾಂತರಿಸುವಂತೆ ಪಾಕಿಸ್ತಾನದ ಮೇಲೆ ಭಾರತ ಮತ್ತೆ ಒತ್ತಡ ಹೇರುವ ಸಂಭವನೀಯತೆಯಿದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications