ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಶೀಲ್ಡ್ ಎರಡು ಡೋಸ್ ಲಸಿಕೆ ನಡುವಿನ ಅಂತರ ಎಷ್ಟಿರಬೇಕು?

|
Google Oneindia Kannada News

ನವದೆಹಲಿ, ಜೂನ್ 16: "ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ ಅಂತರ ಎಷ್ಟಿರಬೇಕು ಎಂಬುದನ್ನು ವೈಜ್ಞಾನಿಕ ದತ್ತಾಂಶಗಳ ಆಧಾರದ ಮೇಲೆ ಪಾರದರ್ಶಕ ರೀತಿಯಲ್ಲಿ ನಿರ್ಧರಿಸಲಾಗಿದೆ," ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸ್ಪಷ್ಟಪಡಿಸಿದ್ದಾರೆ.

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯು ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವೆ ಅಂತರದ ಬಗ್ಗೆ ಇತ್ತೀಚಿಗೆ ಸಾಕಷ್ಟು ಚರ್ಚೆ ಆಗುತ್ತಿತ್ತು.

ಕೊವಿಶೀಲ್ಡ್ ಮತ್ತು ಸ್ಪುಟ್ನಿಕ್-ವಿ ಲಸಿಕೆಗಿಂತ ಕೊವ್ಯಾಕ್ಸಿನ್ ದುಬಾರಿ ಯಾಕೆ? ಕೊವಿಶೀಲ್ಡ್ ಮತ್ತು ಸ್ಪುಟ್ನಿಕ್-ವಿ ಲಸಿಕೆಗಿಂತ ಕೊವ್ಯಾಕ್ಸಿನ್ ದುಬಾರಿ ಯಾಕೆ?

ಭಾರತದಲ್ಲಿ ಮೊದಲಿಗೆ ಕೊವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡ 6 ರಿಂದ 8 ವಾರಗಳ ಅಂತರದಲ್ಲೇ ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳುವದಕ್ಕೆ ಸೂಚಿಸಲಾಗಿತ್ತು. ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ನಡುವಿನ ಅಂತರವನ್ನು 12 ರಿಂದ 16 ವಾರಗಳಿಗೆ ಹೆಚ್ಚಿಸಲಾಗಿದೆ. ಅಂದರೆ ಮೊದಲ ಡೋಸ್ ಪಡೆದು ಮೂರ್ನಾಲ್ಕು ತಿಂಗಳ ನಂತರದಲ್ಲಿ ಎರಡನೇ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳುವುದಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಈ ನಿರ್ಧಾರದ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಲಾಗುತ್ತಿದೆ.

ರಾಜಕೀಯ ಬಣ್ಣ ಬಳಿಯುತ್ತಿರುವ ಬಗ್ಗೆ ಆರೋಪ

ರಾಜಕೀಯ ಬಣ್ಣ ಬಳಿಯುತ್ತಿರುವ ಬಗ್ಗೆ ಆರೋಪ

"ದೇಶದಲ್ಲಿ ವೈಜ್ಞಾನಿಕ ಮಾಹಿತಿಯ ಆಧಾರದ ಮೇಲೆ ಪಾರದರ್ಶಕ ರೀತಿಯಲ್ಲಿ ಕೊವಿಶೀಲ್ಡ್‌ನ ಲಸಿಕೆಯ ಎರಡು ಡೋಸ್ ನಡುವಿನ ಅಂತರವನ್ನು ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲ ದತ್ತಾಂಶ ಮೌಲ್ಯಮಾಪನ ಮಾಡಲು ದೃಢವಾದ ಕಾರ್ಯವಿಧಾನವನ್ನು ಹೊಂದಿದೆ. ಇಂತಹ ಮಹತ್ವದ ವಿಷಯವನ್ನು ರಾಜಕೀಯಗೊಳಿಸಲಾಗುತ್ತಿರುವುದು ದುರದೃಷ್ಟಕರ," ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.

ಎರಡು ಡೋಸ್ ನಡುವಿನ ಅಂತರದಲ್ಲಿ ವ್ಯತ್ಯಾಸದಿಂದ ಲಾಭ

"ಕೊವಿಶೀಲ್ಡ್ ಲಸಿಕೆ ನಡುವಿನ ಅಂತರವನ್ನು 12 ರಿಂದ 16 ವಾರಗಳಿಗೆ ಹೆಚ್ಚಿಸುವುದರಿಂದ ಲಸಿಕೆಯು ಶೇ.66ರ ಬದಲಿಗೆ ಶೇ.88ರಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ," ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಮಾಹಿತಿಯನ್ನು ಸಚಿವ ಹರ್ಷವರ್ಧನ್ ಟ್ವೀಟ್ ಮಾಡಿದ್ದಾರೆ.

26 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

26 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 151 ದಿನಗಳಲ್ಲಿ 26,19,72,014 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 25,68,858 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 21,98,144 ಜನರಿಗೆ ಮೊದಲ ಡೋಸ್ ಹಾಗೂ 3,70,714 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ

ಭಾರತದಲ್ಲಿ ಕಳೆದ ಮೇ 1ರಿಂದ ಈವರೆಗೂ 4,49,87,004 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 8,95,517 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.ಈವರೆಗೂ 1,00,78,623 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 69,99,669 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,69,05,708 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 89,06,072 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,72,40,865 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,21,93,878 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,32,64,880 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 2,02,68,057 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Recommended Video

ಜೆಡಿಎಸ್ ನಂತೆಯೇ ರಾಕ್ಷಸ ಕುಟುಂಬ ರಾಜಕಾರಣ ಬಿಜೆಪಿಯಲ್ಲೂ ಇದೆ | Oneindia Kannada
ಭಾರತದಲ್ಲಿ ಕೊವಿಡ್-19 ದಾಖಲೆಯ ಇಳಿಕೆ

ಭಾರತದಲ್ಲಿ ಕೊವಿಡ್-19 ದಾಖಲೆಯ ಇಳಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ62,224 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,07,628 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2542 ಮಂದಿ ಪ್ರಾಣ ಬಿಟ್ಟಿದ್ದಾರೆ.

ದೇಶದಲ್ಲಿ ಒಟ್ಟು 2,96,33,105 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,83,88,100 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,79,573 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 8,65,432 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Central Health Minister Harsh Vardhan's clarification on the Covishield dose gap controversy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X