ಅಂತಾರಾಷ್ಟ್ರೀಯ, ದೇಶೀಯ ಪ್ರಯಾಣಿಕರಿಗೆ ಆರೋಗ್ಯ ಸಚಿವಾಲಯದ ಮಾರ್ಗಸೂಚಿ

ನವದೆಹಲಿ, ಮೇ 24: ಅಂತಾರಾಷ್ಟ್ರೀಯ ಹಾಗೂ ದೇಶೀಯ ಪ್ರಯಾಣಿಕರಿಗಾಗಿ ಕೇಂದ್ರ ಆರೋಗ್ಯ ಸಚಿವಾಲಯ ಹೊಸದಾಗಿ ಮಾರ್ಗಸೂಚಿ ಹೊರಡಿಸಿದೆ.

ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿರುತ್ತದೆ. ಏಳು ದಿನಗಳ ಕಾಲ ಇನ್‌ಸ್ಟಿಟ್ಯೂಷನಲ್ ಕ್ವಾರಂಟೈನ್ ಇರಲಿದ್ದು, ವೆಚ್ಚವನ್ನು ಪ್ರಯಾಣಿಕರೇ ಭರಿಸಬೇಕು.

-ಗರ್ಭಿಣಿ, ಮನೆಯಲ್ಲಿ ಯಾರಾದರೂ ತೀರಿಹೋದ ಸಂದರ್ಭ, 10 ವರ್ಷಕ್ಕಿಂತ ಕಡಿಮೆ ಇರುವವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತದೆ.

 Health Ministry Releases Guidelines For International Domestic Travelers

-ಕೊರೊನಾ ಲಕ್ಷಣಗಳು ಕಾಣಿಸಿದ್ದವರು ಮಾತ್ರ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ.

-ಒಂದೊಮ್ಮೆ ಸ್ಕ್ರೀನಿಂಗ್ ಸಂದರ್ಭದಲ್ಲಿ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗುತ್ತದೆ.

ದೇಶೀಯ ವಿಮಾನ ಪ್ರಯಾಣಿಕರು ಪಾಲಿಸಬೇಕಾದದ್ದು..

-ಪ್ರತಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಆರೋಗ್ಯ ಸೇತು ಅಪ್ಲಿಕೇಷನ್ ಡೌನ್‌ಲೋಡ್ ಮಾಡಿಕೊಳ್ಳಬೇಕು.

-ಕೊವಿಡ್ 19 ಕುರಿತು ನೀಡಿರುವ ಎಲ್ಲಾ ಮಾರ್ಗಸೂಚಿಗಳನ್ನು ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್‌ ನಿಲ್ದಾಣಗಳಲ್ಲಿ ಪಾಲಿಸಬೇಕಾಗಿದೆ.
-ವಿಮಾನ, ರೈಲು, ಬಸ್ ಪ್ರಯಾ ಯಾವುದೇ ಆಗಿರಲಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಅಂತಾರಾಷ್ಟ್ರೀಯ ಪ್ರಯಾಣಿಕರು ಪಾಲಿಸಬೇಕಾದದ್ದು

-ಅಂತಾರಾಷ್ಟ್ರೀಯ ಪ್ರಯಾಣಿಕರು 14 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್‌ನಲ್ಲಿರಬೇಕಾಗುತ್ತದೆ. ಒಂದು ವಾರ ಇನ್‌ಸ್ಟಿಟ್ಯೂಷನಲ್ ಕ್ವಾರಂಟೈನ್‌ನಲ್ಲಿರಬೇಕಾಗಿದ್ದು, ವೆಚ್ಚವನ್ನು ಅವರೇ ಭರಿಸಬೇಕು.

-ಒಂದೊಮ್ಮೆ ಗರ್ಭಿಣಿ, ವೃದ್ಧರು, 10 ವರ್ಷಕ್ಕಿಂತ ಕಡಿಮೆ ಇದ್ದವರು ಹೋಂ ಕ್ವಾರಂಟೈನ್ ಮಾಡಬಹುದಾಗಿದೆ. ಎಲ್ಲರ ಬಳಿಯೂ ಆರೋಗ್ಯ ಸೇತು ಅಪ್ಲಿಕೇಷನ್ ಇರಬೇಕು.
-ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
-ವಿಮಾನ ನಿಲ್ದಾಣಗಳಲ್ಲಿ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತಿದ್ದು, ಕಡ್ಡಾಯವಾಗಿ ಸ್ಕ್ರೀನಿಂಗ್‌ಗೆ ಒಳಪಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+