ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವ್ಯಾಕ್ಸಿನ್ ಬೇಡ, ಕೊವಿಶೀಲ್ಡ್ ಕೊಡಿ ಎನ್ನುತ್ತಿರುವ ವೈದ್ಯಕೀಯ ಸಿಬ್ಬಂದಿ!?

|
Google Oneindia Kannada News

ನವದೆಹಲಿ, ಜನವರಿ.22: ಭಾರತದಲ್ಲಿ ಕೊರೊನಾವೈರಸ್ ವಿರುದ್ಧ ಸಮರ ಸಾರುವ ನಿಟ್ಟಿನಲ್ಲಿ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ದೇಶಾದ್ಯಂತ ಕೊವಿಡ್-19 ಲಸಿಕೆ ಹಾಕಿಸಿಕೊಳ್ಳಲು ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿಯೇ ಹಿಂದೇಟು ಹಾಕುತ್ತಿದ್ದಾರೆ.

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳಲು ಬಹುತೇರ ವೈದ್ಯಕೀಯ ಸಿಬ್ಬಂದಿ ವಿರೋಧ ವ್ಯಕ್ತಪಡಿಸುತ್ತದ್ದಾರೆ. ಅದರ ಬದಲಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಲಸಿಕೆಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಒಮ್ಮೆ ಕೊರೊನಾ ಲಸಿಕೆ ಪಡೆದ ನಂತರ ಮುಂದೆ ಏನು ಮಾಡಬೇಕು? ಒಮ್ಮೆ ಕೊರೊನಾ ಲಸಿಕೆ ಪಡೆದ ನಂತರ ಮುಂದೆ ಏನು ಮಾಡಬೇಕು?

ಜನವರಿ.16ರಂದು ಮೊದಲ ದಿನ ಕೊವ್ಯಾಕ್ಸಿನ್ ಲಸಿಕೆ ಪಡೆಯುವವರ ಸಂಖ್ಯೆ ದಿನೇ ದಿನೆ ಇಳಿಮುಖವಾಗುತ್ತಿದೆ. ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸಿರುವ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆ, ಅಡ್ಡಪರಿಣಾಮ ಕಾಣಿಸಿಕೊಳ್ಳುತ್ತಿವೆ. ಈ ಹಿನ್ನೆಲೆ ಎಂಥವರು ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವುದು ಸೂಕ್ತ ಎನ್ನುವ ಬಗ್ಗೆ ಸ್ವತಃ ಸಂಸ್ಥೆ ಈಗಾಗಲೇ ಸಲಹಾ ಪಟ್ಟಿ ಬಿಡುಗಡೆಗೊಳಿಸಿದೆ.

ವೈದ್ಯಕೀಯ ಸಿಬ್ಬಂದಿಗೆ ಕೊವ್ಯಾಕ್ಸಿನ್ ಬಗ್ಗೆ ಅವಿಶ್ವಾಸ

ವೈದ್ಯಕೀಯ ಸಿಬ್ಬಂದಿಗೆ ಕೊವ್ಯಾಕ್ಸಿನ್ ಬಗ್ಗೆ ಅವಿಶ್ವಾಸ

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯು ಪರಿಣಾಮಕಾರಿ ಎಂಬುದನ್ನು ವೈದ್ಯರೇ ಒಪ್ಪಿಕೊಳ್ಳುತ್ತಿಲ್ಲ. ಈ ಹಿನ್ನೆಲೆ ದೆಹಲಿಯಲ್ಲಿ ಕೊವ್ಯಾಕ್ಸಿನ್ ಲಸಿಕೆ ಪಡೆಯಲು ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿ ಹಿಂಜರಿಯುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿರುವ 6 ಆಸ್ಪತ್ರೆಗಳಲ್ಲಿ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. ಇದರ ಹೊರತಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಶೀಲ್ಡ್ ಲಸಿಕೆಯನ್ನು ನೀಡಲಾಗುತ್ತಿದೆ.

ಕೊವ್ಯಾಕ್ಸಿನ್ ಬೇಡ, ಕೊವಿಶೀಲ್ಡ್ ಲಸಿಕೆ ನೀಡಿ ಎಂದ ವೈದ್ಯರು

ಕೊವ್ಯಾಕ್ಸಿನ್ ಬೇಡ, ಕೊವಿಶೀಲ್ಡ್ ಲಸಿಕೆ ನೀಡಿ ಎಂದ ವೈದ್ಯರು

ನವದೆಹಲಿ ರಾಮಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯು ಕೊವ್ಯಾಕ್ಸಿನ್ ಲಸಿಕೆ ಬದಲಿಗೆ ಕೊವಿಶೀಲ್ಡ್ ಲಸಿಕೆ ನೀಡುವಂತೆ ಒತ್ತಾಯಿಸಿದ್ದರು. ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯ ವೈದ್ಯಕೀಯ ಪ್ರಯೋಗ ಪೂರ್ಣಗೊಂಡಿಲ್ಲ. ಆದ್ದರಿಂದ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಲಸಿಕೆಯನ್ನು ನೀಡುವಂತೆ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಹಾಸ್ಪಿಟಲ್ ವೈದ್ಯರು ಆಗ್ರಹಿಸಿದ್ದಾರೆ.

ಕೊವ್ಯಾಕ್ಸಿನ್ ಲಸಿಕೆಗೆ ವೈದ್ಯಕೀಯ ಸಿಬ್ಬಂದಿ ವಿರೋಧ

ಕೊವ್ಯಾಕ್ಸಿನ್ ಲಸಿಕೆಗೆ ವೈದ್ಯಕೀಯ ಸಿಬ್ಬಂದಿ ವಿರೋಧ

ಬಿಹಾರದಲ್ಲಿ ಕೊವ್ಯಾಕ್ಸಿನ್ ಲಸಿಕೆ ಪಡೆಯುವುದಕ್ಕೆ ವೈದ್ಯಕೀಯ ಸಿಬ್ಬಂದಿ, ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಆರೋಗ್ಯ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮೂರನೇ ಹಂತದ ವೈದ್ಯಕೀಯ ಪ್ರಯೋಗದ ಹಂತದಲ್ಲಿರುವ ಭಾರತ್ ಬಯೋಟೆಕ್ ಸಂಸ್ಥೆಯ ಲಸಿಕೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ಹೀಗಾಗಿ ಪ್ರಾಯೋಗಿಕ ಹಂತದಲ್ಲಿರುವ ಲಸಿಕೆ ಪಡೆಯಲು ವಿರೋಧ ವ್ಯಕ್ತವಾಗುತ್ತಿದೆ.

ಕೊವ್ಯಾಕ್ಸಿನ್ ಲಸಿಕೆ ಯಾರಿಗೆ ಸೂಕ್ತವಾಗಿಲ್ಲ?

ಕೊವ್ಯಾಕ್ಸಿನ್ ಲಸಿಕೆ ಯಾರಿಗೆ ಸೂಕ್ತವಾಗಿಲ್ಲ?

- ದೈಹಿಕ ಅಲರ್ಜಿ ಹೊಂದಿರುವವರು ಲಸಿಕೆ ತೆಗೆದುಕೊಳ್ಳಬೇಡಿ

- ಜ್ವರದಿಂದ ಬಳಲುತ್ತಿರುವವರಿಗೆ ಲಸಿಕೆಯು ಸೂಕ್ತವಲ್ಲ

- ರಕ್ತಸ್ರಾವ ಮತ್ತು ತಿಳಿಯಾದ ರಕ್ತವನ್ನು ಹೊಂದಿರುವವರು ಲಸಿಕೆ ಪಡೆದುಕೊಳ್ಳಬಾರದು

- ರೋಗ ನಿರೋಧಕ ಶಕ್ತಿ ಮತ್ತು ರೋಗ ನಿರೋಧಕ ವ್ಯವಸ್ಥೆಯಲ್ಲಿ ಲೋಪಗಳಿದ್ದಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ

- ಗರ್ಭಿಣಿಯರು ಲಸಿಕೆ ಹಾಕಿಸಿಕೊಳ್ಳುವುದು ಬೇಡ

- ಸ್ತನ್ಯಪಾನ ಮಾಡುವ ಮಹಿಳೆಯರು

- ಕೊವಿಡ್-19 ಸೋಂಕಿಗೆ ಬೇರೆ ಲಸಿಕೆ ಹಾಕಿಸಿಕೊಂಡವರು ಕೊವ್ಯಾಕ್ಸಿನ್ ಲಸಿಕೆ ಪಡೆಯಬೇಡಿ

- ಇತರೆ ಯಾವುದೇ ರೀತಿ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಕೊವ್ಯಾಕ್ಸಿನ್ ಲಸಿಕೆ ಉತ್ತಮವಲ್ಲ

English summary
Health Workers In Delhi And Bihar Unwilling To Take Bharat Biotech’s Covaxin Due To Lack Of Efficacy Data.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X