ಹೃದಯಾಘಾತದಿಂದ ಪತಿ ಸಾವು, ಮನನೊಂದ ಪತ್ನಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣು-ಎಲ್ಲಿ?
ನವದೆಹಲಿ, ಫೆಬ್ರವರಿ, 27: ಹೃದಯಾಘಾತದಿಂದ ಪತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ ಘಟನೆ ನವದೆಹಲಿಯಲ್ಲಿ ನಡೆದಿದೆ.
ಸೋಮವಾರ (ಫೆಬ್ರವರಿ 27) ರಾತ್ರಿ ನವದೆಹಲಿಯ ವೈಶಾಲಿಯ ಸೆಕ್ಟರ್ -3ರ ಅಹ್ಲ್ಕಾನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ 7ನೇ ಮಹಡಿಯ ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವದೆಹಲಿ ಮೃಗಾಲಯಕ್ಕೆ ಭೇಟಿ ನೀಡಿದಾಗ 25 ವರ್ಷದ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದ ನಂತರ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಅಂಜಲಿ ಅಹಿಲುವಾಲಿ ಎಂದು ಗುರುತಿಸಲಾಗಿದ್ದು, ಅವರು ತಮ್ಮ ಪತಿ ಅಭಿಷೇಕ್, ಅವರ ಪೋಷಕರು ಮತ್ತು ಸಹೋದರಿಯೊಂದಿಗೆ ಫ್ಲ್ಯಾಟ್ ಸಂಖ್ಯೆ 703ರಲ್ಲಿ ವಾಸಿಸುತ್ತಿದ್ದರು. ಮೃಗಾಲಯದಿಂದ ಮೃತ ಅಭಿಷೇಕ್ ಪಾರ್ಥಿವ ಶರೀರ ರಾತ್ರಿ 9:30ರ ಸುಮಾರಿಗೆ ಮನೆಗೆ ಬಂದಿತು. ಇನ್ನು ಅದನ್ನು ನೋಡಿದ ಅಂಜಲಿ ತನ್ನ ಮಲಗುವ ಕೋಣೆಗೆ ಬೀಗ ಹಾಕಿಕೊಂಡಿದ್ದಳು. ಇದಾದ ಕೆಲವು ನಿಮಿಷಗಳ ಬಳಿಕ ಬಾಲ್ಕನಿಯಿಂದ ಜಿಗಿದಳು. ಕೆಳಗೆ ಶಬ್ದ ಕೇಳಿದ ನಂತರ ಭದ್ರತಾ ಸಿಬ್ಬಂದಿ ಶವವನ್ನು ಗಮನಿಸಿ ಕುಟುಂಬ ಸದಸ್ಯರಿಗೆ ಮಾಹಿತಿ ರವಾನಿಸಿದ್ದಾರೆ.
(ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ನಿಮಗೆ ಬೆಂಬಲ ಬೇಕಾದರೆ ಅಥವಾ ಯಾರೊಂದಿಗಾದರೂ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬೇಕಿದ್ದರೇ ದಯವಿಟ್ಟು ನಿಮ್ಮ ಹತ್ತಿರದ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ. ಸಹಾಯವಾಣಿಗಳು: ಆಸ್ರ: 022 2754 6669; ಸ್ನೇಹ ಇಂಡಿಯಾ ಫೌಂಡೇಶನ್: +914424640050 ಮತ್ತು ಸಂಜೀವಿನಿ: 011-24311918, ರೋಶ್ನಿ ಫೌಂಡೇಶನ್: ಸಂಪರ್ಕ: 040-66202001, 040-66202000, ಒಂದು ಜೀವನ: ಸಂಪರ್ಕ ಸಂಖ್ಯೆ: 78930 78930, SEVA: ಸಂಪರ್ಕ ಸಂಖ್ಯೆ: 09441778290 )
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]












Click it and Unblock the Notifications