ಬಿಸಿ ಗಾಳಿ ಭಯ: ಉತ್ತರ ಭಾರತದಾದ್ಯಂತ ರೆಡ್ ಅಲರ್ಟ್ ಘೋಷಣೆ
ನವದೆಹಲಿ, ಮೇ 25: ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಮೂರು ದಿನ ಉಷ್ಣಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Recommended Video
ಹೀಗಾಗಿ ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯವರೆಗೂ ಜನರಿಗೆ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ.ಕರ್ನಾಟಕದ ಕಲಬುರಗಿಯಲ್ಲೂ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅದರ ಜೊತೆಗೆ ದಖ್ಖನ್ ಪ್ರಸ್ಥಭೂಮಿಯಲ್ಲಿರುವ ನೆರೆಯ ಆಂಧ್ರದ ರಾಯಲಸೀಮಾ, ಯಾಣಂ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಪಂಜಾಬ್,ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿಯೂ ಬಿಸಿಗಾಳಿ ಬೀಸಲಿದೆ ಎಂದು ಐಎಂಡಿ ಎಚ್ಚರಿಸಿದೆ.
ಕಲಬುರಗಿಯಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ 44.4 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿತ್ತು. ದೇಶದ ಹಲವೆಡೆ ಗರಿಷ್ಠ ಉಷ್ಠಾಂಶ ಏರಿಕೆಯಾಗಿದೆ. ಪಶ್ಚಿಮ ರಾಜಸ್ಥಾನದ ಚುರುವಿನಲ್ಲಿ 47.4 ಡಿಗ್ರಿ ಸೆ. ದಾಖಲಾಗಿತ್ತು. ಕಲಬುರಗಿಯಲ್ಲಿ ಭಾನುವಾರ ಬಿಸಿಲಿನ ಝಳ ಜೋರಾಗಿಯೇ ಇತ್ತು.
ಇಲ್ಲಿ ರಾಜ್ಯದ ಅತಿ ಗರಿಷ್ಠ 44.5 ಡಿಗ್ರಿ ಸೆ. ತಾಪಮಾನ ದಾಖಲಾಗಿದೆ. ಕಳೆದ ವರ್ಷ ಇದೇ ದಿನಕ್ಕೆ ಹೋಲಿಸಿದರೆ ಗರಿಷ್ಠ ತಾಪ ಮಾನದಲ್ಲಿ 4.2 ಡಿಗ್ರಿ ಸೆ. ಹೆಚ್ಚಳವಾಗಿದೆ. ರಾಯಚೂರಿನಲ್ಲಿ 43 ಡಿಗ್ರಿ ಸೆ. ಮತ್ತು ವಿಜಯಪುರದಲ್ಲಿ 41.8 ಡಿ.ಸೆ. ತಾಪಮಾನ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.

ಇನ್ನೊಂದು ದಿನದಲ್ಲಿ ಉಷ್ಣಾಂಶ 47 ಡಿಗ್ರಿ ಏರಿಕೆ
ಈಗಾಗಲೇ ದೇಶದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶ 45-46 ಡಿಗ್ರಿ ತಲುಪಿದೆ ಮೇ 26-27ರ ಹೊತ್ತಿಗೆ 47 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ.

ಉಷ್ಣಗಾಳಿಯ ವೇಗ ಏನು?
ಉಷ್ಣಗಾಳಿಯ ವೇಗ ಪ್ರತಿ ಗಂಟೆಗೆ 20 ಕಿ.ಮೀ ಇರುತ್ತದೆ. ದೆಹಲಿ, ಪಂಜಾಬ್, ಹರ್ಯಾಣಾ, ಚಂಡೀಗಢ, ರಾಜಸ್ಥಾನದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದೆಹಲಿಯಲ್ಲಿ ಈಗ ಗರಿಷ್ಠ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ಇದೆ.

ಬಿಸಿಗಾಳಿ ಎಂದರೆ ಚಂಡಮಾರತವಲ್ಲ
ಬಿಸಿಗಾಳಿ ಎಂದರೆ ಚಂಡಮಾರುತದ ಮಾದರಿಯಲ್ಲಿ ವೇಗವಾಗಿ ಬೀಸುವುದಿಲ್ಲ, ಬೀಸುವ ಗಾಳಿಯಲ್ಲಿ ಉಷ್ಣಾಂಶ ಹೆಚ್ಚಿದ್ದು, ತೀವ್ರ ಸೆಕೆಯ ಅನುಭವವಾಗುತ್ತದೆ. ಹಾಗಾಗಿ ವಯೋವೃದ್ಧರು ಮತ್ತು ಮಕ್ಕಳು ಹಗಲಿನ ವೇಳೆಯಲ್ಲಿ ಹೊರಗೆ ಸುತ್ತಾಡುವುದನ್ನು ನಿಯಂತ್ರಿಸಿದರೆ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಹೆಚ್ಚಿನ ಪ್ರಮಾಣದಲ್ಲಿ ದ್ರವ ರೂಪದ ಆಹಾರ ಮತ್ತು ನೀರು ಕುಡಿಯುವುದು ಉತ್ತಮ.

ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪ ಹೆಚ್ಚಳ
ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪ ಹೆಚ್ಚಳವಾಗುತ್ತಿದೆ. ಅದರಂತೆ ಗರಿಷ್ಠ ಉಷ್ಣಾಂಶದ ಪ್ರಮಾಣ ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಿದೆ.ಹಾಗಾಗಿ ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ಉತ್ತರ ಭಾರತ ಹಾಗೂ ರಾಯಲ್‌ಸೀಮಾ ಪ್ರದೇಶದ ರಾಜ್ಯಗಳಲ್ಲಿ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ದಾಟಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications