ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Video: ಲಡಾಖ್ ಗಡಿಯಲ್ಲಿ ಭಾರತೀಯ ಯೋಧರಿಗಾಗಿ ವಿಶೇಷ ಟೆಂಟ್!

|
Google Oneindia Kannada News

ನವದೆಹಲಿ, ನವೆಂಬರ್.18: ಭಾರತ-ಚೀನಾ ನಡುವಿನ ಪೂರ್ವ ಲಡಾಖ್ ಗಡಿಯಲ್ಲಿ ಭಾರತೀಯ ಯೋಧರಿಗಾಗಿ ನವೀಕೃತ ತಾಣಗಳನ್ನು ಸ್ಥಾಪಿಸಲಾಗಿದೆ. ಚಳಿಗಾಲದ ಹಿನ್ನೆಲೆ ಲಡಾಖ್ ಗಡಿಯಲ್ಲಿ ತಾಪಮಾನವು -30 ರಿಂದ -40 ಡಿಗ್ರಿ ಸೆಲ್ಸಿಯಸ್ ನಷ್ಟಿದ್ದು ಹಿಮಪಾತವಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಕ್ರಮ ತೆಗೆದುಕೊಳ್ಳಲಾಗಿದೆ.

ಭಾರತ ಮತ್ತು ಚೀನಾ ನಡುವೆ ಪೂರ್ವ ಲಡಾಖ್ ಗಡಿ ವಿಚಾರಕ್ಕೆ ಸಂಘರ್ಷ ನಡೆದ ಬೆನ್ನಲ್ಲೇ ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆಯನ್ನು ನಿಯೋಜನೆ ಮಾಡಲಾಗಿದೆ. ಚಳಿಗಾಲದ ಸಂದರ್ಭದಲ್ಲೇ ನಿಯೋಜಿಸಿಲ್ಪಟ್ಟ ಸೈನಿಕರಿಗಾಗಿ ವಿಶೇಷ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

"ಭಾರತೀಯ ಯೋಧರಿಗಾಗಿ ಸಮಗ್ರ ಸೌಲಭ್ಯಗಳನ್ನು ಹೊಂದಿರುವ ಸ್ಮಾರ್ಟ್ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಇದರ ಜೊತೆಗೆ ಸೈನಿಕರಿಗೆ ವಿದ್ಯುತ್, ನೀರು, ತಾಪಮಾನ ನಿಯಂತ್ರಣ ಸೌಲಭ್ಯಗಳು, ಆರೋಗ್ಯ ಮತ್ತು ನೈರ್ಮಲ್ಯದ ಸಮಗ್ರ ವ್ಯವಸ್ಥೆಗಳನ್ನು ಒಳಗೊಂಡ ಹೆಚ್ಚುವರಿ ಅತ್ಯಾಧುನಿಕ ವಸತಿಗೃಹಗಳನ್ನು ಸ್ಥಾಪಿಸಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.

Heated Tents With Upgraded Living Facilities Built For Indian Army Soldiers At Ladakh Border

ಭಾರತ-ಚೀನಾ ನಡುವೆ ಸಂಘರ್ಷ:

ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರ ಸಾವಿಗೆ ಕಾರಣವಾದ ಚೀನಾ ವಿರುದ್ಧ ಭಾರತೀಯ ಯೋಧರು ಪ್ರತೀಕಾರ ತೀರಿಸಿಕೊಂಡರು. ಭಾರತ ನಡೆಸಿದ ಪ್ರತಿದಾಳಿಯಲ್ಲಿ ಚೀನಾದ 40ಕ್ಕೂ ಹೆಚ್ಚು ಯೋಧರು ಹತರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಗಾಲ್ವಾನ್ ಗುದ್ದಾಟ: 3ನೇ ಹಂತದ ಕಮಾಂಡರ್ಸ್ ಸಭೆ ಮೇಲೆ ಕಣ್ಣು!ಗಾಲ್ವಾನ್ ಗುದ್ದಾಟ: 3ನೇ ಹಂತದ ಕಮಾಂಡರ್ಸ್ ಸಭೆ ಮೇಲೆ ಕಣ್ಣು!

ಭಾರತ ಮತ್ತು ಚೀನಾ ಗಡಿಯ ಪ್ಯಾಂಗಾಂಗ್ ತ್ಸೋ, ಗಲ್ವಾನ್ ವ್ಯಾಲಿ ಪ್ರದೇಶದಲ್ಲಿ 2,500 ಯೋಧರು ಶಸ್ತ್ರಸಜ್ಜಿತರಾಗಿ ನಿಂತಿದ್ದರು. ಪ್ಯಾಂಗಾಂಗ್ ತ್ಸೋ ಸುತ್ತಮುತ್ತಲಿನ 180 ಕಿ.ಮೀ ವ್ಯಾಪ್ತಿಯಲ್ಲಿ ರಕ್ಷಣಾ ಮೂಲ ಸೌಕರ್ಯಗಳ ಕಾಮಗಾರಿ ಚಟುವಟಿಕೆ ನಡೆಸುತ್ತಿರುವುದು ಉಪಗ್ರಹ ಸೆರೆ ಹಿಡಿದ ಫೋಟೋಗಳಲ್ಲಿ ಸಾಬೀತಾಗಿತ್ತು. ಇದಕ್ಕೂ ಮೊದಲು ದರ್ಬಕ್-ಶಯೊಕ್ ನಿಂದ ದೌಲತ್ ಬೆಗ್ ಒಲ್ಡಿಯೆಗೆ ಗಾಲ್ವಾನ್ ವ್ಯಾಲಿಯಲ್ಲಿ ರಸ್ತೆ ನಿರ್ಮಿಸುವುದಕ್ಕೆ ಭಾರತವು ಮುಂದಾಗಿತ್ತು. ಪ್ಯಾಂಗಾಂಗ್ ತ್ಸೋ ತುದಿಯಲ್ಲಿರುವ ಪ್ರದೇಶದಲ್ಲಿ ರಸ್ತೆ ಕಾಮಗಾರಿಗೆ ಚೀನಾ ವಿರೋಧಿಸಿತ್ತು.

English summary
Heated Tents With Upgraded Living Facilities Built For Indian Army Soldiers At Ladakh Border.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X